ಈ ವರ್ಷ ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಉಂಟಾಗಿ ಬರದ ಪರಿಸ್ಥಿತಿ (drought) ಎದುರಾಗಿದೆ. ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ರಾಜ್ಯದಲ್ಲಿ 31 ಗಳನ್ನು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು (Baragala Taluk list 2023) ಎಂದು ಕಂದಾಯ ಇಲಾಖೆ ಘೋಷಣೆ ಮಾಡಿದೆ ಮತ್ತು ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರದಿಂದ ಪೂರ್ವ ಸಿದ್ಧತೆ ತಯಾರಾಗಿದೆ.
ಇದರ ಬೆನ್ನಲ್ಲೇ ಬರ ಪರಿಸ್ಥಿತಿಯಿಂದ ತೀವ್ರ ನೊಂದಿರುವ ರೈತ ವರ್ಗಕ್ಕೆ (farmers) ಸಮಸ್ಯೆ ಆಗದಂತೆ ನೋಡಿಕೊಳ್ಳುವ ಹೊಣೆಗಾರಿಕೆಯನ್ನು ಕೂಡ ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ರೈತನಿಂದ ಸಾಲ ವಸೂಲಿ ಮಾಡದಂತೆ ಜೊತೆಗೆ ನರೇಗಾ (NREGA) ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸದ ದಿನ ಹೆಚ್ಚಿಸುವಂತೆ ಬರ ಪರಿಸ್ಥಿತಿಯಿಂದ ಬೆಳೆ ಹಾನಿ ಒಳಗಾಗಿರುವ ರೈತರಿಗೆ ಪರಿಹಾರ ಕೊಡುವ ಕುರಿತಂತೆ ತುಮಕೂರು ಜಿಲ್ಲಾಧಿಕಾರಿಗಳು (Thumukur DC K.Shrinivas ) ತಮ್ಮ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳಲ್ಲಿ ಕೈಗೊಂಡಿರುವ ಕಾರ್ಯಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಪಟ್ಟಿಯಲ್ಲಿ ತುಮಕೂರಿನ ಎಲ್ಲಾ ತಾಲೂಕುಗಳು ಕೂಡ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಆಗಿರುವುದರಿಂದ ಬ್ಯಾಂಕ್ ಗಳು, ಸಂಘ ಸಂಸ್ಥೆಗಳು, ಲೇವಾದೇವಿದಾರರು ಜಿಲ್ಲೆಯ ರೈತರನ್ನು ಸಾಲ ಮರುಪಾವತಿ ಮಾಡುವಂತೆ ತೊಂದರೆ ಕೊಡಬಾರದು ಎಂದು ಜಿಲ್ಲಾಧಿಕಾರಿಗಳಾದ ಕೆ.ಶ್ರೀನಿವಾಸ್ ಅವರು ಸೂಚಿಸಿದ್ದಾರೆ. ಜಿಲ್ಲೆಯ ರೈತರಿಗೆ ಬೆಳೆ ಪರಿಹಾರ (Parihara) ಹಣ ಕೊಡಿಸುವುದರ ಬಗ್ಗೆ ಕೂಡ ಮಾತನಾಡಿದ ಜಿಲ್ಲಾಧಿಕಾರಿಗಳು.
ಮಳೆ ಆಶ್ರಿತ ಭೂಮಿಗಳಿಗೆ ಪ್ರತಿ ಹೆಕ್ಟೇರಿಗೆ 8,500ರೂ. ನೀರಾವರಿ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ 17,000ರೂ. ವಾಣಿಜ್ಯ ಬೆಳೆಗಳಿಗೆ ಪ್ರತಿ ಹೆಕ್ಟೇರಿಗೆ 22,000ರೂ. ಹಾಗೂ ರೇಷ್ಮೆ ಬೆಳೆಗೆ ಪ್ರತಿ ಹೆಕ್ಟರ್ ಗೆ 6,000ರೂ. ಪರಿಹಾರ ಮೊತ್ತ ನಿಗದಿಪಡಿಸಲಾಗಿದೆ ಎಂದು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನರೇಗಾ ಯೋಜನೆಯಡಿ ವರ್ಷಕ್ಕೆ 100 ದಿನಗಳವರೆಗೆ ಉದ್ಯೋಗ ನೀಡಲಾಗುತ್ತಿದೆ.
ಆದರೆ ಈ ಬಾರಿ ಬರ ಪರಿಸ್ಥಿತಿ ಇರುವುದರಿಂದ ಈ ಮಿತಿಯನ್ನು 150 ದಿನಗಳವರೆಗೆ ಏರಿಸುವ ಪ್ರಯತ್ನ ಮಾಡಲಾಗುವುದು ಇದರಿಂದಾಗಿ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ ಈ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಗ್ರಾಮ ಸಹಾಯಕರು ಹಾಗೂ ಕೃಷಿ ಸಹಾಯಕರ ತಂಡ ನಿರ್ಮಿಸಿ ತಾಲೂಕು ಮಟ್ಟದ ಅಧಿಕಾರಿಗಳನ್ನು ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಿ ಸಮಸ್ಯೆಗಳನ್ನು ಬಗೆಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
ಕೊಳವೆ ಭಾವಿ ಹೊಂದಿರುವ ರೈತರನ್ನು ಗುರುತಿಸಿ ಮೇವು ಕಿಟ್ ವಿತರಣೆ ಮಾಡುವ ಬಗ್ಗೆ ತಿಳಿಸಿ ಮತ್ತು ಅರೆ ಮಳೆಯಾಶ್ರಿತ ಕೃಷಿ ಮಾಡುವ ರೈತರಿಗೆ ಜಿಲ್ಲೆಯಲ್ಲಿ ಬಿತ್ತನೆ ಬೀಜಗಳು, ರಸಗೊಬ್ಬರ, ಕ್ರಿಮಿ ಹಾಗೂ ಕೀಟನಾಶಕಗಳು ಲಭ್ಯವಿವೆ ಎನ್ನುವ ವಿಷಯವನ್ನು ತಿಳಿಸಿದರು. ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆ ಎದುರಾಗಿದೆ ಅದರೊಂದಿಗೆ ಕುಡಿಯುವ ನೀರಿನ ಸಮಸ್ಯೆ ಕೂಡ ಉಂಟಾಗುತ್ತಿದೆ.
ತಾಲೂಕಿನ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದ್ದು ಇದಕ್ಕೆ ಸರಿಯಾಗಿ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಮುಂದಿನ ದಿನಗಳಲ್ಲಿ ಕೂಡ ಇದೇ ಪರಿಸ್ಥಿತಿ ಮುಂದಾದರೆ ಅಥವಾ ಈ ರೀತಿ ಸಮಸ್ಯೆ ಎದುರಿಸುವ ಗ್ರಾಮಗಳ ಸಂಖ್ಯೆ ಹೆಚ್ಚಾದರೆ ಕುಡಿಯುವ ನೀರು ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎನ್ನುವ ವಿಷಯವನ್ನು ಹಂಚಿಕೊಂಡಿದ್ದಾರೆ.