ಅಗ್ನಿಶಾಮಕ ಇಲಾಖೆ ನೇಮಕಾತಿ, 975ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ.!

 

WhatsApp Group Join Now
Telegram Group Join Now

ರಾಜ್ಯದ ವಿಪತ್ತು ನಿರ್ವಹಣಾ ಸಂಸ್ಥೆಗಳಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಕೂಡ ಪ್ರಮುಖವಾದದ್ದು. ಅತಿವೃಷ್ಟಿ ಬೆಂಕಿ ಅನಾಹುತ ಅಥವಾ ಕೊಳವೆಬಾವಿ ದು’ರಂ’ತ ಮತ್ತು ಇನ್ನಿತರ ಸಮಸ್ಯೆಗಳಾದ ತುರ್ತು ಸಂದರ್ಭದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯು ವಿಷಯ ತಿಳಿದ ಕೂಡಲೇ ಆದಷ್ಟು ವೇಗವಾಗಿ ಸ್ಥಳದಲ್ಲಿ ಹಾಜರಾಗಿ ಪ್ರಾಣ ರಕ್ಷಣೆಗೆ ಮುಂದಾಗುತ್ತಾರೆ.

ಇವರ ಈ ಕರ್ತವ್ಯ ನಿಷ್ಠೆಯಿಂದ ಅದೆಷ್ಟೋ ಅನಾಹುತಗಳ ಪ್ರಮಾಣ ಕಡಿಮೆ ಆಗಿದೆ ಅವಘಡಗಳಲ್ಲಿ ಸಿಲುಕಿಕೊಂಡ ಸಾವಿರಾರು ನಾಗರಿಕರ ಪ್ರಾಣ ಉಳಿದಿದೆ. ಹಾಗಾಗಿ ಈ ವಿಭಾಗದಲ್ಲಿ ಕೆಲಸ ಮಾಡುವುದು ಒಂದು ಹೆಮ್ಮೆಯ ವಿಚಾರ ಎಂದೇ ಹೇಳಬಹುದು. ಈ ನಿಟ್ಟಿನಲ್ಲಿ ಯೋಚಿಸುತ್ತಿರುವ ಪ್ರತಿಯೊಬ್ಬ ಉದ್ಯೋಗಸ್ಥನಿಗೂ ಇಲಾಖೆ ಕಡೆಯಿಂದ ಸಿಹಿ ಸುದ್ದಿ ಇದೆ.

ಅದೇನೆಂದರೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಕೆಳಹಂತದ ನೇರ ನೇಮಕಾತಿ ಹುದ್ದೆಗಳಿಂದ ಮೇಲ್ದರ್ಜೆ ಹುದ್ದೆಗಳಿಗೆ ಬಡ್ತಿ, ವಯೋ ನಿವೃತ್ತಿ, ವಿವಿಧ ಕಾರಣಗಳಿಗಾಗಿ ಸ್ವಯಂ ನಿವೃತ್ತಿ. ಮರಣ ಹೊಂದಿ ತೆರವಾದ ಹುದ್ದೆಗಳು, ಹೊಸದಾಗಿ ಸ್ಥಾಪಿಸಲಾಗಿರುವ ಅಗ್ನಿಶಾಮಕ ಠಾಣೆಗಳು ಹಾಗೂ ಇನ್ನಿತರ ಕಾರಣಗಳಿಂದಾಗಿ ಖಾಲಿ ಆಗಿರುವ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.

ಈ ಸಂಬಂಧ ರಾಜ್ಯ ವಿಪತ್ತು ಸ್ಪಂದನ ಪಡೆಯ ನಿರ್ದೇಶನಾಲಯವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ನೇಮಕಾತಿ ಪ್ರಸ್ತಾವನೆಗೆ ಶೀಘ್ರದಲ್ಲಿಯೇ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಹಾಗಾಗಿ ಈ ನೇಮಕಾತಿಗೆ ಸಂಬಂಧಪಟ್ಟ ಹಾಗೆ ತಿಳಿಸಬೇಕಾದ ಒಟ್ಟು ಹುದ್ದೆಗಳ ಸಂಖ್ಯೆ, ಉದ್ಯೋಗ ಸ್ಥಳ, ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಇನ್ನಿತರ ಸಂಗತಿಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದೇವೆ. ತಪ್ಪದೇ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.

ನೇಮಕಾತಿ ಸಂಸ್ಥೆ:- ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ
ಹುದ್ದೆ ಹೆಸರು:- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 975 ಹುದ್ದೆಗಳು

ಹುದ್ದೆಗಳ ವಿವರ:-
* ಅಗ್ನಿಶಾಮಕ ಠಾಣಾಧಿಕಾರಿ – 64
* ಚಾಲಕ ತಂತ್ರಜ್ಞ – 27
* ಅಗ್ನಿಶಾಮಕ ಚಾಲಕ – 153
* ಅಗ್ನಿಶಾಮಕ ವಿಭಾಗದಲ್ಲಿ – 731

ಶೈಕ್ಷಣಿಕ ವಿದ್ಯಾರ್ಹತೆ:-

* ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ವಿಜ್ಞಾನ ವಿಷಯದಲ್ಲಿ ಪದವಿ ಪಡೆದಿರಬೇಕು ಮತ್ತು ರಾಸಾಯನಿಕ ಶಾಸ್ತ್ರವನ್ನು ಒಂದು ವಿಷಯವಾಗಿ ಅಭ್ಯಾಸ ಮಾಡಿರಬೇಕು.

* ಚಾಲಕ ತಂತ್ರಜ್ಞ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಲ್ಲಿ ಆಟೋಮೊಬೈಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮೋ ಮಾಡಿರಬೇಕು
* ಅಗ್ನಿಶಾಮಕ ಇಂಜಿನ್ ಚಾಲಕ ಮತ್ತು ಅಗ್ನಿಶಾಮಕ ವಿಭಾಗಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಯಲ್ಲಿ 10ನೇ ತರಗತಿ ಉತ್ತೀರ್ಣರಾಗಿದ್ದರೆ ಸಾಕು.

ವಯೋಮಿತಿ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
* ಸರ್ಕಾರದ ನಿಯಮಗಳಿಗೆ ಅನುಸಾರವಾಗಿ ವಯೋಮಿತಿ ಸಡಲಿಕೆ ಕೂಡ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:-
ಆನ್ಲೈನ್ ವಿಧಾನದಲ್ಲಿ ಅರ್ಜಿ ಸಲ್ಲಿಸಬೇಕು

ಆಯ್ಕೆ ವಿಧಾನ:-
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಸ್ಕಿಲ್ ಟೆಸ್ಟ್ ಮಾಡಿ ನಂತರ ನೇರ ಸಂದರ್ಶನ ನಡೆಸಿ ಆಯ್ಕೆ ಆದವರಿಗೆ ದಾಖಲೆ ಪರಿಶೀಲನೆ ಮಾಡಿ ನೇಮಕ ಮಾಡಲಾಗುವುದು.

ಪ್ರಮುಖ ದಿನಾಂಕಗಳು:- ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now