ಕರ್ನಾಟಕ ಆಹಾರ & ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ – ಆಸಕ್ತರು ಈಗಲೇ ಅಪ್ಲೈ ಮಾಡಿ ವೇತನ 83,900. PUC ಪಾಸ್ ಆಗಿದ್ರೆ ಸಾಕು.!

 

WhatsApp Group Join Now
Telegram Group Join Now

ಕೆಲಸ ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಕರ್ನಾಟಕ ಸರ್ಕಾರ ಒಂದು ಗುಡ್​ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರವು ತನ್ನ ಸಂಸ್ಥೆಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ (Karnataka Food and Civil Supplies Corporation Limited) ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ನೇರ ನೇಮಕಾತಿ ಇದಾಗಿದ್ದು, ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ.

ಒಟ್ಟು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಒಟ್ಟು 386 ಜೂನಿಯರ್ ಅಸಿಸ್ಟೆಂಟ್ (Junior Assistant), ಸೀನಿಯರ್ ಅಸಿಸ್ಟೆಂಟ್ (Senior Assistant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜುಲೈ 22, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ತಡಮಾಡದೇ ಅರ್ಜಿ ಸಲ್ಲಿಸಿ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

* ಸಂಸ್ಥೆ : ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ
* ಹುದ್ದೆ: ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್
* ಒಟ್ಟು ಹುದ್ದೆ : 386
* ವೇತನ : ಮಾಸಿಕ: 22,800- 43,200 ರೂ.
* ಉದ್ಯೋಗದ ಸ್ಥಳ : ಕರ್ನಾಟಕ
* ಅರ್ಜಿ ಸಲ್ಲಿಸಲು ಕೊನೆಯ ದಿನ : ಜುಲೈ 22, 2023

ಹುದ್ದೆಯ ಮಾಹಿತಿ

* ಅಸಿಸ್ಟೆಂಟ್ ಮ್ಯಾನೇಜರ್- 10
* ಸೀನಿಯರ್ ಅಸಿಸ್ಟೆಂಟ್- 57
* ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್​)- 33
* ಕ್ವಾಲಿಟಿ ಇನ್ಸ್​ಪೆಕ್ಟರ್- 23
* ಜೂನಿಯರ್ ಅಸಿಸ್ಟೆಂಟ್- 263

ವೇತನ

* ಅಸಿಸ್ಟೆಂಟ್ ಮ್ಯಾನೇಜರ್- ಮಾಸಿಕ 43,100- 83,900 ರೂ.
* ಸೀನಿಯರ್ ಅಸಿಸ್ಟೆಂಟ್- ಮಾಸಿಕ 27,650- 52,650 ರೂ.
* ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್​)- ಮಾಸಿಕ 27,650- 52,650 ರೂ.
* ಕ್ವಾಲಿಟಿ ಇನ್ಸ್​ಪೆಕ್ಟರ್- ಮಾಸಿಕ 27,650- 52,650 ರೂ.
* ಜೂನಿಯರ್ ಅಸಿಸ್ಟೆಂಟ್- ಮಾಸಿಕ 21,400- 42,000 ರೂ.

ಆಯ್ಕೆ ಪ್ರಕ್ರಿಯೆ

* ಲಿಖಿತ ಪರೀಕ್ಷೆ
* ಸಂದರ್ಶನ

ವಯಸ್ಸಿನ ಮಿತಿ

* ಕನಿಷ್ಠ ವಯಸ್ಸು – 18 ವರ್ಷಗಳು
* ಗರಿಷ್ಠ ವಯಸ್ಸು – 35 – 40 ವರ್ಷಗಳು

ಅರ್ಜಿ ಶುಲ್ಕ

* ಸಾಮಾನ್ಯ ಮತ್ತು ಇತರೆ ವರ್ಗಗಳು – 1000 ರೂ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 – 750 ರೂ.
* ಅಂಗವಿಕಲ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರು – 250 ರೂ.

ಶೈಕ್ಷಣಿಕ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಶೈಕ್ಷಣಿಕ ಅರ್ಹತೆಗಳು ಮತ್ತು ಅರ್ಹತಾ ಮಾನದಂಡಗಳ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

ಪ್ರಮುಖ ದಿನಾಂಕಗಳು

* ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜೂನ್ 23, 2023
* ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 22, 2023
* ಆನ್​ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ: ಜುಲೈ 25, 2023
* ಇ-ಪೋಸ್ಟ್​ ಆಫೀಸ್ ಮೂಲಕ ಅರ್ಜಿ ಶುಲ್ಕ ಕಟ್ಟಲು ಕೊನೆಯ ದಿನ: ಜುಲೈ 26, 2023

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now