ಕರ್ನಾಟಕದ ಸರ್ಕಾರಿ ಹುದ್ದೆ ಬಗ್ಗೆ ಆಸಕ್ತಿ ಇಟ್ಟುಕೊಂಡಿರುವ ಎಲ್ಲಾ ಆಕಾಂಕ್ಷಿಗಳಿಗೂ ಸಿಹಿ ಸುದ್ದಿಯೊಂದು ಸಿಕ್ಕಿದೆ. ಬಾರಿ ಬೃಹತ್ ಸಂಖ್ಯೆಯಲ್ಲಿ ಕರ್ನಾಟಕ ಸರ್ಕಾರ ಅರಣ್ಯ ಇಲಾಖೆಯು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಗಾಗಿ ಅಧಿಸೂಚನೆ ಹೊರಡಿಸುವ ಮೂಲಕ ನಿಯಮಗಳನ್ನು ತಿಳಿಸಿ ಅರ್ಜಿ ಸಲ್ಲಿಸಲು ಕೋರಿದೆ. ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಒಟ್ಟು 11 ಸಾವಿರಕ್ಕಿಂತಲೂ ಅಧಿಕ ಹುದ್ದೆಗಳು ಖಾಲಿ ಇದ್ದು, ಆ ಹುದ್ದೆಗಳ ಭರ್ತಿಗಾಗಿ ಈ 2023 ನೇ ಸಾಲಿನ ನೇಮಕಾತಿ ನಡೆಯುತ್ತಿದೆ.
ಆಸಕ್ತ ಅಭ್ಯರ್ಥಿಗಳು ಪ್ರಕಟಣೆಯಲ್ಲಿರುವ ವಿವರಗಳನ್ನು ನೋಡಿಕೊಂಡು ಅರ್ಥೈಸಿಕೊಂಡು ಅರ್ಜಿ ಸಲ್ಲಿಸಬೇಕು ಎಂದು ವಿಶೇಷವಾಗಿ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಅರಣ್ಯ ಇಲಾಖೆಯು ಹೊರಡಿಸಿರುವ ಪ್ರಕಟಣೆ ಪ್ರಕಾರ ಖಾಲಿ ಇರುವ ಹುದ್ದೆಗಳ ಒಟ್ಟು ಸಂಖ್ಯೆ, ಹುದ್ದೆಗಳ ವಿವರ, ಶೈಕ್ಷಣಿಕ ವಿದ್ಯಾರ್ಹತೆ, ವಯೋಮಾನ, ವಯೋಮಾನ ಸಡಲಿಕೆ, ವೇತನ ಶ್ರೇಣಿ, ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆಗೆ ಅಂತ್ಯ ದಿನಾಂಕ, ಉದ್ಯೋಗ ಸ್ಥಳ, ಆಯ್ಕೆ ವಿಧಾನ ಇನ್ನು ಮುಂತಾದ ಎಲ್ಲಾ ವಿವರಗಳನ್ನು ತಿಳಿದುಕೊಳ್ಳಲು ಈ ಅಂಕಣವನ್ನು ಪೂರ್ತಿಯಾಗಿ ಓದಿ.
ಕರ್ನಾಟಕ ಅರಣ್ಯ ಹೊರಡಿಸಿರುವ ಅಧಿಸೂಚನೆ ಪ್ರಕಾರ ಖಾಲಿ ಇರುವ ಹುದ್ದೆಗಳ ವಿವರ ಈ ರೀತಿ ಇದೆ. ಖಾಲಿ ಇರುವ 11419 ಹುದ್ದೆಗಳಲ್ಲಿ ACF ಹುದ್ದೆಗಳು 231, DRFO ಹುದ್ದೆಗಳು3008, ಅರಣ್ಯ ಕಾವಲುಗಾರ 1892 ಹುದ್ದೆಗಳು, ಅರಣ್ಯ ರಕ್ಷಕ 5694 ಹುದ್ದೆಗಳು, RFO 785 ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರವು ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತುಂಬಿಸಲಾಗುತ್ತದೆ.
ಹುದ್ದೆಗಳಿಗೆ ಅನುಸಾರವಾಗಿ ಶೈಕ್ಷಣಿಕ ಅರ್ಹತೆಯನ್ನು ಈ ರೀತಿ ಕೇಳಲಾಗಿದೆ. ಅರಣ್ಯ ರೇಂಜರ್ ಆಫೀಸರ್ ಹುದ್ದೆಗಳಿಗೆ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದು ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಯು ಕಡ್ಡಾಯವಾಗಿ ಅರಣ್ಯ ಸಂಬಂಧಿತ ವಿಷಯದಲ್ಲಿ ಪದವಿಯನ್ನು ಪಾಸ್ ಮಾಡಿರಬೇಕಾಗುತ್ತದೆ. ಕೃಷಿ ಅಥವಾ ತೋಟಗಾರಿಕೆ ಅಥವಾ ಪಶು ವೈದ್ಯಕೀಯ ವಿಭಾಗದಲ್ಲಿ ಪದವಿಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದು ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಲ್ಲಿ ಪಾಸ್ ಮಾಡಿರುವ ವಿದ್ಯಾರ್ಥಿಗಳೂ ಸಹಾ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅಂತೆಯೇ ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಬೋರ್ಡ್ ಇಂದ ಪಿಯುಸಿ ಅಥವಾ ತತ್ಸಮಾನ ವಿದ್ಯೆಯನ್ನು ಪಾಸ್ ಆಗಿರಬೇಕು. ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತ ಪಡೆದ ಯಾವುದೇ ಬೋರ್ಡ್ ನಿಂದ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಾಸ್ ಆಗಿರಬೇಕಾಗುತ್ತದೆ. ಉಪ ವಿಭಾಗ ಅರಣ್ಯ ಅಧಿಕಾರಿ ಕಮ್ ಸರ್ವಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿಸಿದ ವಿಷಯದಲ್ಲಿ ಪದವಿ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ 18 ವರ್ಷ ತುಂಬಿರಬೇಕು ಮತ್ತು ಕನಿಷ್ಠವಾಗಿ 32 ವರ್ಷಗಳನ್ನು ಮೀರಿದ ಬಾರದು ಎನ್ನುವ ನಿಯಮವಿದೆ. ಆದರೆ OBC ಅಭ್ಯರ್ಥಿಗಳಿಗೆ 03 ವರ್ಷ ಮತ್ತು SC & ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಾನ ಸಡಲಿಕೆ ನೀಡಲಾಗಿದೆ. ಈ ಎಲ್ಲಾ ಹುದ್ದೆಗಳಿಗೆ ರಾಜ್ಯದಾದ್ಯಂತ ಇರುವ ಎಲ್ಲಾ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಈ ವಿಷಯಕ್ಕೆ ಸಂಬಂಧಪಟ್ಟ ಹಾಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ.