ನಾಡಿನಾದ್ಯಂತ ಇರುವ ಎಲ್ಲಾ ಸರಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಯಾಕೆಂದರೆ ಕೇಂದ್ರ ಸರ್ಕಾರದ ವತಿಯಿಂದ ಮತ್ತೊಂದು ನೇಮಕಾತಿ ನಡೆಯುತ್ತಿದೆ. ಈ ಬಾರಿ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ನೇಮಕಾತಿ ನಡೆಯುತ್ತಿದ್ದು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕೂಡ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳ ನೇಮಕಾತಿ ಹಾಗೂ ಪರೀಕ್ಷಾ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ ಮಾನದಂಡ ಮುಂತಾದ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಅಧಿಸೂಚನೆಯನ್ನು ಸಹ ಇಲಾಖೆ ಹೊರಡಿಸಿದ್ದು ಆಸಕ್ತರು ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಬೇಕು ಎಂದು ಕೇಳಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳ ಸಲುವಾಗಿ ಅಧಿಸೂಚನೆಯಲ್ಲಿರುವ ಕೆಲ ಪ್ರಮುಖ ಅಂಶಗಳ ಬಗ್ಗೆ ತಿಳಿಸುವ ಪ್ರಯತ್ನವನ್ನು ಈ ಅಂಕಣದಲ್ಲಿ ಮಾಡುತ್ತಿದ್ದೇವೆ. ಹೆಚ್ಚಿನ ಮಾಹಿತಿ ಬೇಕಾದಲ್ಲಿ ಸರ್ಕಾರದ ಅಧಿಕೃತ ವೆಬ್ಸೈಟ್ ಗಳಿಗೆ ಭೇಟಿ ಕೊಟ್ಟು ತಿಳಿದುಕೊಳ್ಳಬಹುದು.
● ಇಲಾಖೆ:- ಅರಣ್ಯ ಇಲಾಖೆ
● ಸಂಸ್ಥೆ:- ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಅಂಡ್ ಎಜುಕೇಶನ್
● ಉದ್ಯೋಗ ಸ್ಥಳ:- ಭಾರತದಾದ್ಯಂತ
● ಹುದ್ದೆಗಳ ಸಂಖ್ಯೆ:- 52
● ಹುದ್ದೆಗಳ ವಿವರ:- ಅರಣ್ಯ ಸಂರಕ್ಷಣಾಧಿಕಾರಿ
● ವೇತನ ಶ್ರೇಣಿ:- 25000 ಮಾಸಿಕವಾಗಿ…
● ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ:-
ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
● ವಯಸ್ಸಿನ ಮಿತಿ:-
1. ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಸರಿಯಾಗಿ ಕಡ್ಡಾಯವಾಗಿ ಕನಿಷ್ಠ 18 ವರ್ಷಗಳು ಪೂರ್ತಿಗೊಂಡಿರಬೇಕು
2. ಗರಿಷ್ಠ 40 ವರ್ಷಗಳು ಮೀರಿರಬಾರದು
● ವಯೋಮಾನ ಸಡಿಲಿಕೆ:-
1. OBC ಅಭ್ಯರ್ಥಿಗಳಿಗೆ 3 ವರ್ಷಗಳು
2. SC/ST ಅಭ್ಯರ್ಥಿಗಳಿಗೆ 5 ವರ್ಷಗಳು
● ಅರ್ಜಿ ಶುಲ್ಕ:-
ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ 500ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
● ಆಯ್ಕೆ ವಿಧಾನ
1. ಲಿಖಿತ ಪರೀಕ್ಷೆ
2. ನೇರ ಸಂದರ್ಶನ
3. ದಾಖಲೆಗಳ ಪರಿಶೀಲನೆ
● ಅರ್ಜಿ ಸಲ್ಲಿಸುವ ವಿಧಾನ:- ಆಫ್ಲೈನ್ ಮೂಲಕ…
1. ಅಧಿಸೂಚನೆಯಲ್ಲಿ ಸೂಚಿಸಲಾದ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಿಧಿಸಲಾದ ವಯೋಮಿತಿ ಒಳಗೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
2. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಳ್ಳಬೇಕು.
3. ಅರ್ಜಿ ಶುಲ್ಕವನ್ನು ಆನ್ಲೈನ್ ನಲ್ಲಿ ಪಾವತಿ ಮಾಡಿ ರಶೀದಿ ತೆಗೆದುಕೊಳ್ಳಬೇಕು.
4. ಭರ್ತಿ ಮಾಡಿದ ಅರ್ಜಿ ಫಾರಂ ಜೊತೆ ಅಧಿಸೂಚನೆಯಲ್ಲಿ ಕೇಳಲಾದ ಎಲ್ಲಾ ದಾಖಲೆಗಳ ಪ್ರತಿಗಳನ್ನು ಕೂಡ ಪ್ರಕಟಿಸಿ ಇಲಾಖೆ ಕಚೇರಿ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿಕೊಡಬೇಕು.
● ಅರ್ಜಿ ಕಳುಹಿಸಬೇಕಾದ ವಿಳಾಸ:-
ಕಾರ್ಯದರ್ಶಿ,
ಇಂಡಿಯನ್ ಕೌನ್ಸಿಲ್ ಆಫ್ ಫಾರೆಸ್ಟ್ರಿ ರಿಸರ್ಚ್ ಅಂಡ್ ಎಜುಕೇಶನ್,
PO ನ್ಯೂ ಫಾರೆಸ್ಟ್,
ಡೆಹರಾಡ್ರೂನ್ – 248006.
● ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
1. ಇತ್ತೀಚಿನ ಭಾವಚಿತ್ರ ಮತ್ತು ಸಹಿ
2. ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
3. ಆಧಾರ್ ಕಾರ್ಡ್
4. ಜಾತಿ ಮತ್ತು ಆದಾಯ ಪ್ರಮಾಣ ಪತ್ರ
5. ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
6. ನಿವಾಸ ದೃಢೀಕರಣ ಪತ್ರ
● ಪ್ರಮುಖ ದಿನಾಂಕಗಳು:-
1. ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 17 ಏಪ್ರಿಲ್, 2023.
2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 15 ಏಪ್ರಿಲ್, 2023.