ರೈತರಿಗೆ ಉಚಿತ ಬೋರ್ ವೆಲ್, ಗಂಗಾ ಕಲ್ಯಾಣ ಕೊಳವೆಬಾವಿ ಯೋಜನೆ.!

 

WhatsApp Group Join Now
Telegram Group Join Now

ಸರ್ಕಾರವು ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಉಚಿತವಾಗಿ ಬೋರ್ವೆಲ್ ಹಾಕಿಸಿಕೊಡುವ ಗಂಗಾ ಕಲ್ಯಾಣ ಯೋಜನೆ ಕೂಡ ಒಂದು. ವಿವಿಧ ನಿಗಮ ಹಾಗೂ ಸಮುದಾಯಕ್ಕೆ ಸೇರಿದ ಸಣ್ಣ ಹಾಗೂ ಅತಿ ಸಣ್ಣ ರೈತರಿಂದ ಗಂಗಾ ಕಲ್ಯಾಣ ಯೋಜನೆಯಡಿ ವಿವಿಧ ಹೆಸರಿನಿಂದ ಅರ್ಜಿ ಆಹ್ವಾನಿಸಿ ಅರ್ಹರಿಗೆ ಈ ಯೋಜನೆ ತಲುಪಿಸಲಾಗುತ್ತಿತ್ತು.

ಅದಕ್ಕಾಗಿ ಪ್ರತಿ ವರ್ಷವೂ ಕೂಡ ಅರ್ಜಿ ಆಹ್ವಾನಿಸಲಾಗುತ್ತದೆ. ಈ ಬಾರಿ ಯಾರೆಲ್ಲಾ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ ಆ ರೈತರಿಗೆ ಸರ್ಕಾರದ ವತಿಯಿಂದ ಇನ್ನೊಂದು ಅವಕಾಶ ಸಿಗುತ್ತಿದೆ. ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 30ರಂದು ಕಡೆ ದಿನಾಂಕವಾಗಿತ್ತು, ಈಗ ಯೋಜನೆಯನ್ನು ಇನ್ನಷ್ಟು ರೈತರಿಗೆ ತಲುಪಿಸುವ ಉದ್ದೇಶದಿಂದ ನವೆಂಬರ್ 10ರವರೆಗೂ ಗಡುವನ್ನು ವಿಸ್ತರಿಸಲಾಗಿದೆ.

ಗಂಗಾ ಕಲ್ಯಾಣ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ವಿಧಾನ ಹೇಗೆ ಹಾಗೂ ಮಾನದಂಡಗಳೇನು? ಮತ್ತು ಬೇಕಾಗುವ ದಾಖಲೆಗಳೇನು? ಎನ್ನುವುದರ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ತಿಳಿಸುತ್ತಿದ್ದೇವೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು:-

* ಡಿ. ದೇವರಾಜ್ ಅರಸು ಹಿಂದುಳಿತ ವರ್ಗಗಳ ಅಭಿವೃದ್ಧಿ ನಿಗಮ
* ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ
* ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
* ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ
* ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ
* ಕರ್ನಾಟಕ ಸವಿತ ಸಮಾಜ ಅಭಿವೃದ್ಧಿ ನಿಗಮ
* ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
* ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
* ಕರ್ನಾಟಕ ಅಲೆಮಾರಿ / ಅರೆ ಅಲೆಮಾರಿ ಅಭಿವೃದ್ಧಿ ನಿಗಮ
* ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮ.

ಮಾನದಂಡಗಳು:-

ರೈತರು ಕರ್ನಾಟಕದ ನಿವಾಸಿಗಳಾಗಿರಬೇಕು
ಈ ಮೇಲೆ ತಿಳಿಸಿದ ಯಾವುದಾದರೂ ಸಮುದಾಯಕ್ಕೆ ಸೇರಿದವರಾಗಿರಬೇಕು ಇದುವರೆಗೆ ಯಾವುದೇ ನಿಗಮದ ಸೌಲಭ್ಯ ಪಡೆದಿರಬಾರದು. ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು ಕೇಳಲಾಗುವ ಎಲ್ಲಾ ದಾಖಲೆಗಳನ್ನು ಒದಗಿಸಬೇಕು.

ಕೃಷಿ ಈಗಾಗಲೇ ನೀರಾವರಿ ಸೌಲಭ್ಯ ಹೊಂದಿರಬಾರದು ಕುಷ್ಕಿ ಭೂಮಿಯಾಗಿರಬೇಕು ರೈತನು 5 ಎಕರೆಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿರಬಾರದು ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಕೊಡಗು ಶಿವಮೊಗ್ಗ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ರೈತರು ಕನಿಷ್ಠ 1 ಎಕರೆ ಭೂಮಿ ಹೊಂದಿರಬೇಕು ಉಳಿದ ಜಿಲ್ಲೆಗಳ ರೈತರು ಕನಿಷ್ಠ 2 ಎಕರೆ ಭೂಮಿ ಹೊಂದಿರಬೇಕು. ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದವರಿಗೆ ರೂ. 98,000 ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1,20,00 ಒಳಗಿರಬೇಕು.

ಬೇಕಾಗುವ ದಾಖಲೆಗಳು:-

* ರೈತನ ಆಧಾರ್ ಕಾರ್ಡ್
* ಭೂಮಿಗೆ ಸಂಬಂಧಪಟ್ಟ ದಾಖಲೆಗಳು
* FRUITS ID
* ಬ್ಯಾಂಕ್ ಪಾಸ್ ಬುಕ್
* ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
* ಮೊಬೈಲ್ ಸಂಖ್ಯೆ
* ಇನ್ನಿತರ ಪ್ರಮುಖ ದಾಖಲೆಗಳು.

ಸಿಗುವ ಸಹಾಯಧನ:-

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳ ರೈತರಿಗೆ ಘಟಕವೆಚ್ಚ 4.75 ಲಕ್ಷ ರೂ. ನಲ್ಲಿ 4.25 ಲಕ್ಷ ಸಹಾಯಧನ, ಬೋರ್ವೆಲ್ ನಿರ್ಮಿಸಲು ಸಾಧ್ಯವಾಗದೇ ಹೋದರೆ ರೂ. 50,000 4% ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
* ಉಳಿದ ಜಿಲ್ಲೆಗಳಿಗೆ 3.75 ಲಕ್ಷ ಘಟಕ ವೆಚ್ಚದಲ್ಲಿ 3.25 ಲಕ್ಷ ಸಬ್ಸಿಡಿ ಉಳಿದ ರೂ. 50,000 ಬೋರ್ವೆಲ್ ನಿರ್ಮಾಣ ಮಾಡಲಾಗದೆ ಹೋದಂತೆ 4% ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.

* ಅರ್ಜಿ ಸಲ್ಲಿಸುವ ವಿಧಾನ:-

ಹತ್ತಿರದ ಯಾವುದೇ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now