ಹೃದಯಘಾ-ತಕ್ಕೆ ಒಳಗಾದವರಿಗೆ ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಉಚಿತ ಚಿಕಿತ್ಸೆ.! ಯಾವೆಲ್ಲಾ ಚಿಕಿತ್ಸೆ ಸಿಗಲಿದೆ ಎಲ್ಲೆಲ್ಲಿ ಲಭ್ಯ, ಇಲ್ಲಿದೆ ಸಂಪೂರ್ಣ ಮಾಹಿತಿ.!

 

WhatsApp Group Join Now
Telegram Group Join Now

ಇತ್ತೀಚಿನ ದಿನದಲ್ಲಿ ಹೃದಯಘಾತ (Heart attack) ಎನ್ನುವುದು ಬಹಳ ಗಂಭೀರ ಸಮಸ್ಯೆಯಾಗಿ ಬಿಟ್ಟಿದೆ. ಅದರಲ್ಲೂ ಹೃದಯಘಾತಕ್ಕೆ ಒಳಗಾಗುವವರಲ್ಲಿ 35% ಮಂದಿ 40ರ ಆಸುಪಾಸಿನವರೇ ಎನ್ನುವುದು ಕಳವಳಕಾರಿ ಸಂಗತಿಯಾಗಿದೆ. ಈ ರೀತಿ ಹಾರ್ಟ್ ಅಟ್ಯಾಕ್ ಆದಾಗ ಆಗುವ ಪ್ರಾಣಪಾಯ ತಪ್ಪಿಸಲು ಹೃದಯಾಘಾತ ಸಂದರ್ಭಗಳಲ್ಲಿ ಸುವರ್ಣ ಸಮಯ (gold hour) ಬಹಳ ಮುಖ್ಯವಾಗುತ್ತಿದೆ.

ಆ ಸಮಯದೊಳಗೆ ಸಕಾಲಕ್ಕೆ ಚಿಕಿತ್ಸೆ ಒದಗಿಸಲು ಖಾಸಗಿ ಆಸ್ಪತ್ರೆಗಳು ದುಬಾರಿ ಬಿಲ್ ಮಾಡುತ್ತವೆ. ಇದರಿಂದ ಬಡವರಿಗಾಗುತ್ತಿರುವ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು (Karnataka health department) ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ಹೃದಯ ಜ್ಯೋತಿ (Dr. Punith Kumar Hrudaya jyothi yojane) ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತಿದೆ.

ಇದೇ ಮಂಗಳವಾರದಂದು ವಿಕಾಸಸೌಧದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಈ ವಿಚಾರವನ್ನು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲೂ ಬರೆದು ಹಂಚಿಕೊಂಡಿದ್ದಾರೆ ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೀಡಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರ, ಎಲ್ಲಾ ವಯೋಮಾನದವರಿಗೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡಲು ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ, ರಾಜ್ಯದ 16 ಜಿಲ್ಲೆಗಳಲ್ಲಿನ 85 ಸರ್ಕಾರಿ ಆಸ್ಪತ್ರೆ ಹಾಗೂ 50ಕ್ಕೂ ಅಧಿಕ ಖಾಸಗಿ ಆಸ್ಪತ್ರೆಗಳಲ್ಲಿ ಸ್ಟೋಕ್ಸ್ ಹಾಗೂ ಹಬ್ಸ್ ಮಾದರಿಯಲ್ಲಿ ತಪಾಸಣೆ, ECG , ಆಂಜಿಯೋಪ್ಲ್ಯಾಸ್ಟಿ ಸೇರಿದಂತೆ ಟೆನೆಕ್ಟ್ ಪ್ಲಸ್‌ನಂಥಹ ದುಬಾರಿ ಇಂಜೆಕ್ಷನ್ ಸಹ ಉಚಿತವಾಗಿ ದೊರೆಯಲಿದೆ.

ಹೃದಯಾಘಾತ ಸೇರಿದಂತೆ ಯಾವುದೇ ಕಾಯಿಲೆಗಳ ಚಿಕಿತ್ಸೆಗೂ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವ ವಾತಾವರಣವನ್ನು ನಮ್ಮ ಸರ್ಕಾರ ನಿರ್ಮಿಸಿದೆ. ದುಬಾರಿ ವೆಚ್ಚದ ಚಿಕಿತ್ಸೆಗಳು ಸಂಪೂರ್ಣವಾಗಿ ಉಚಿತವಾಗಿ ಲಭ್ಯವಾಗುತ್ತಿದೆ. ರಾಜ್ಯದ ಜನತೆಯ ಆರೋಗ್ಯ ರಕ್ಷಣೆ ನಮ್ಮ ಹೊಣೆ. ನಾವು ಜವಾಬ್ಧಾರಿಯನ್ನು ಅರಿತು ಮುನ್ನಡೆಯುತ್ತಿದ್ದೇವೆ ಎಂದು ಎಕ್ಸ್ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಚುಚ್ಚುಮದ್ದು ಹಠಾತ್ ಹೃದಯಾಘಾತ ಆಗುವುದನ್ನು ತಡೆಯುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಗಂಭೀರ ಪರಿಸ್ಥಿತಿಯಲ್ಲಿರುವವರಿಗೆ ತಕ್ಷಣಕ್ಕೆ, ಹೃದಯಾಘಾತ ಆಗದಂತೆ ನೋಡಿಕೊಳ್ಳುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಇದಕ್ಕೆ 30 ರಿಂದ 45,000 ಕ್ಕಿಂತ ಹೆಚ್ಚು ಚಾರ್ಜ್ ಮಾಡುತ್ತಾರೆ. ಈ ಯೋಜನೆ ಮೂಲಕ ತಾಲೂಕು ಅಥವಾ ಜಿಲ್ಲಾಸ್ಪತ್ರೆಯ ಸ್ಪೋಕ್ ಕೇಂದ್ರಗಳಲ್ಲಿ ಉಚಿತವಾಗಿ ಕೊಟ್ಟು ಹೆಚ್ಚಿನ ಚಿಕಿತ್ಸೆಗೆ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಹಬ್ ಕೇಂದ್ರಗಳಿಗೆ ಆಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗುತ್ತದೆ.

ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಹಬ್ ಕೇಂದ್ರಗಳಲ್ಲಿ BPL ಕಾರ್ಡುದಾರರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ. APL ಕಾರ್ಡುದಾರರಿಗೆ 1.50 ಲಕ್ಷ ರೂ.ಗಳವರೆಗೆ ಆರೋಗ್ಯ ಕರ್ನಾಟಕಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಅಡಿಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.

ಈ ಯೋಕಚನೆ ಬಗ್ಗೆ ಹಬ್ ಸ್ಪೋಕ್ ಗಳ ಮಾದರಿ ಬಗ್ಗೆ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಆಸ್ಪತ್ರೆ ಮತ್ತು ನ್ಯಾಯಾಲಯ ಮುಂತಾದ 50 ಸ್ಥಳಗಳಲ್ಲಿ ಸ್ವಯಂಚಾಲಿತ LED ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿ ತಲುಪಿಸಲಾಗುವುದು. ಒಂದು LED ಗೆ ಒಂದು 1.10ಲಕ್ಷ ಖರ್ಚಾಗುತ್ತದೆ, ಒಟ್ಟಾರೆ ಈ ಯೋಜನೆಗಾಗಿ 6.50 ಕೋಟಿ ಹಣ ಮೀಸಲಿಡಲಾಗಿದೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ದಯವಿಟ್ಟು ಈ ಉಪಯುಕ್ತ ಮಾಹಿತಿಯನ್ನು ಹೆಚ್ಚಿನ ಜನರೊಂದಿಗೆ ಹಂಚಿಕೊಳ್ಳಿ.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now