ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ರಾಜ್ಯ ಸರ್ಕಾರವು (State government) ನಾನಾ ರೀತಿಯ ಯೋಜನೆಗಳನ್ನು ರೂಪಿಸಿ ನೆರವಾಗಿದೆ. ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿ ಲೇಬರ್ ಕಾರ್ಡ್ ಹೊಂದಿರುವಂತಹ ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮತ್ತು ಅವರ ಕುಟುಂಬಸ್ಥರು ಸರ್ಕಾರದಿಂದ ಸಹಾಯಧನ, ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನ ಸೇರಿದಂತೆ ಇನ್ನು ಹಲವು ಪ್ರಯೋಜನವನ್ನು ಪಡೆಯುತ್ತಿದ್ದಾರೆ.
ಈ ಪೈಕಿ ಮಹತ್ವಕಾಂಕ್ಷೆಯ ನಿರೀಕ್ಷೆ ಎಂದರೆ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ (construction workers) ವಸತಿ (Housing Sceme) ಯೋಜನೆ ಕಲ್ಪಿಸಿಕೊಡಬೇಕು ಎನ್ನುವುದು. ಇದರ ಸಲುವಾಗಿ ವಿಧಾನಸಭೆಯಲ್ಲಿ ಈಗ ವಸತಿ ಸಚಿವರಾದ (Housing Minister) ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದಲ್ಲಿ ಸಭೆ ನಡೆದಿದೆ.
ಈ ಸಭೆಯಲ್ಲಿ ಪ್ರಮುಖ ವಿಷಯವಾಗಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ಸಂಬಂಧ ನೀಲಿ ನಕ್ಷೆ ರೂಪಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಕಾರ್ಡ್ ಯೋಜನೆಗಳ ಅನುಷ್ಟಾನದ ಜೊತೆಗೆ ಈ ಗ್ಯಾರಂಟಿಯೇತರ ಯೋಜನೆಯನ್ನು ಕೂಡ ಜಾರಿಗೆ ತಂದು ರಾಜ್ಯದಲ್ಲಿರುವ ಕಾರ್ಮಿಕರಿಗೆ ಮನೆಗಳನ್ನು ನೀಡಲು ನಿರ್ಧಾರಕ್ಕೆ ಬಂದಿದೆ ಎನ್ನುವುದು ತಿಳಿದು ಬಂದಿದೆ.
ಇದರ ವಿವರವನ್ನು ನೋಡುವುದಾದರೆ ಕಳೆದ ಸರ್ಕಾರ ಇದ್ದಾಗ ಕೂಡ ಈ ಯೋಜನೆ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿತ್ತು ಹಾಗೂ ಕೆಲ ಕ್ರಮಗಳನ್ನು ಕೂಡ ಕೈಗೊಂಡಿತ್ತು. ಈಗ ಹೊಸ ಸರ್ಕಾರ ಕೂಡ ಅದನ್ನು ಮುಂದುವರಿಸಿಕೊಂಡು ಹೋಗುವ ಮನಸ್ಸು ಮಾಡಿ ಕಾರ್ಮಿಕರ ಪಾಲಿಗೆ ವರದಾನವಾಗಿದೆ.
ನೂತನ ಕಾಂಗ್ರೆಸ್ ಸರ್ಕಾರದ ವಸತಿ ಸಚಿವರಾಗಿರುವ ಜಮೀರ್ ಅಹಮದ್ ಖಾನ್ ಅವರ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಇದೇ ವಿಚಾರವನ್ನು ಚರ್ಚಿಸಲಾಗಿದೆ. ಪೌರಾಣಿತ ಇಲಾಖೆ ಮತ್ತು ವಸತಿ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಜೊತೆಗೂಡಿ ಕಟ್ಟಡ ಕಾರ್ಮಿಕರಿಗಾಗಿ ಹೊಸ ವಸತಿ ಸಮುಚ್ಛಯ ಯೋಜನೆ ರೂಪಿಸಿ ಶೀಘ್ರವೇ ವಿತರಿಸುವ ನಿರ್ಧಾರಕ್ಕೆ ಬರಲಾಗಿದೆ.
ರಾಜ್ಯದಲ್ಲಿರುವ ಪ್ರತಿ ಜಿಲ್ಲೆಯ ಪ್ರತಿ ತಾಲೂಕು ಹಂತದಲ್ಲಿಯೇ ಈ ಯೋಜನೆ ಜಾರಿಗೆ ಬೇಕಾಗುವ ಜಮೀನು, ಹಣಕಾಸು ಹೊಂದಾಣಿಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಬ್ಸಿಡಿ ಪೌರಾಡಳಿತ ಮತ್ತು ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ ದೊರಕಬಹುದಾದ ಸಹಾಯ ಇವುಗಳ ಕುರಿತು ಸಮಗ್ರ ಮಾಹಿತಿಯೊಂದಿಗೆ ಪ್ರಸ್ತಾವನೆ ಸಿದ್ಧಪಡಿಸಲು ಸಚಿವರು ಸೂಚಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ಇರುವ ವಸತಿ ರಹಿತ ಕಟ್ಟಡ ಕಾರ್ಮಿಕರ ಸಮೀಕ್ಷೆ ನಡೆಸಿ ಆ ಬೇಡಿಕೆ ಆಧಾರದ ಮೇಲೆ ವಸತಿ ನಿರ್ಮಾಣ ಕಾರ್ಯಕ್ಕೆ ಮುಂದಾಗಲು ಸಭೆಯಲ್ಲಿ ನಿರ್ಧಾರಕ್ಕೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆಗೆ ಬಡ್ಡಿರಹಿತವಾಗಿ ಸಾಲ ಸೌಲಭ್ಯ ಕೂಡ ಸಿಗುವುದರಿಂದ ಎಲ್ಲಾ ಕಾರ್ಮಿಕರಿಗೂ ಇದು ಅನುಕೂಲ ತರಲಿದೆ.
ಹಾಗಾಗಿ ಶೀಘ್ರವೇ ಈ ಯೋಜನೆಯನ್ನು ಜಾರಿಗೆ ತನ್ನಿ ಎಂದು ಅಧಿಕಾರಿಗಳಿಗೆ ಸಚಿವ ಜಮೀರ್ ಖಾನ್ ಅವರು ಸೂಚಿಸಿದ್ದಾರೆ ಎನ್ನುವುದು ತಿಳಿದು ಬಂದಿದೆ. ಮುಂದಿನ ಮಂಗಳವಾರ ಈ ಸಂಬಂಧವಾಗಿ ಮತ್ತೊಂದು ಸುತ್ತಿನ ಸಭೆ ಕೂಡ ನಡೆಸಲು ತೀರ್ಮಾನಿಸಿದ್ದಾರೆ ಎನ್ನುವ ಸುದ್ದಿಯು ಇದೆ. ಹಾಗಾಗಿ ಶೀಘ್ರವೇ ರಾಜ್ಯದ ಎಲ್ಲಾ ಕಾರ್ಮಿಕರಿಗೂ ಸ್ವಂತ ಸೂರಿನ ಕನಸು ನನಸಾಗಲಿದೆ ಎಂದು ಹೇಳಬಹುದು.