ರಾಜ್ಯ ಸರ್ಕಾರವು ಕೃಷಿ ಭೂಮಿ ಇಲ್ಲದವರು ಸರ್ಕಾರದ ಭೂಮಿಯನ್ನು ಕೃಷಿ ಉದ್ದೇಶಕ್ಕಾಗಿ ಬಳಸುತ್ತಿದ್ದರೆ ಸಕ್ರಮಗೊಳಿಸಿಕೊಳ್ಳಲು ಅವಕಾಶ ನೀಡಿ ಅರ್ಜಿ ಆಹ್ವಾನ ಮಾಡಿತ್ತು. ಈಗ ಅರ್ಜಿ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು ಅರ್ಜಿಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ ಮತ್ತು ಶೀಘ್ರದಲ್ಲಿಯೇ ಫಲಾನುಭವಿಗಳಿಗೆ ಡಿಜಿಟಲ್ ಹಕ್ಕು ಪತ್ರ ವಿತರಣೆ ಆಗುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ.
ಈ ಸಂಬಂಧ ಮಿಂಚಿನ ವೇಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಸಿಹಿ ಸುದ್ದಿ ಇದೆ. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ (Revenue department) ಅವರು ಡಿಸೆಂಬರ್ 18ರಂದು ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ಬಗರ್ ಹುಕುಂ (Bagar Hukum) ಆ್ಯಪ್ ಬಿಡುಗಡೆ ಮಾಡಿದ್ದಾರೆ.
ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಈ ಬಗರ್ ಹುಕುಂ ಆಪ್ ರೂಪಿಸಿದೆ. ಈ ಆಪ್ ಬಿಡುಗಡೆ ಮಾಡಿ ಕಾರ್ಯಕ್ರಮದಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ನಮೂನೆ 50, ನಮೂನೆ 53, ನಮೂನೆ 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ.
2004 ಕ್ಕಿಂತ ಮುಂದೆ ಆ ಭೂಮಿಯಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದವರು ಹಾಗೂ ಕಳೆದ 18 ವರ್ಷಗಳಿಂದ ಆ ಭೂಮಿಯಲ್ಲಿ ಕೃಷಿ ಕಾರ್ಯ ಮಾಡುತ್ತಿರುವವರು ಮಾತ್ರ ಅರ್ಜಿ ಸಲ್ಲಿಸಬೇಕು ಎನ್ನುವ ನಿಯಮ ಇತ್ತು ಆದರೆ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರು, 18 ವರ್ಷ ತುಂಬದೆ ಇರುವವರು ಮತ್ತು ಆ ಜಿಲ್ಲೆಗೆ ತಾಲೂಕಿಗೆ ಗ್ರಾಮಕ್ಕೆ ಸಂಬಂಧಪಟ್ಟವರು ಸಹ ಅಕ್ರಮ ಸಕ್ರಮ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸತ್ಯಕ್ಕೆ ಅಸಾಧ್ಯವಾಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಸರ್ಕಾರವು ಬಗರ್ ಹುಕುಂ ತಂತ್ರಾಶ ಬಳಸಿ ಅರ್ಜಿ ವಿಲೇ ಮಾಡುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.
ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ನಿಖರ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಹಾಗೂ ಅರ್ಜಿಗಳ ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ ಎನ್ನುವುದು ಸರ್ಕಾರದ ಭರವಸೆ. ಈ ಕಾರ್ಯದ ಹೊಣೆಗಾರಿಕೆ ಗ್ರಾಮ ಲೆಕ್ಕಿಗನಿಗೂ ಕೂಡ ಇದೆ.
ಗ್ರಾಮ ಲೆಕ್ಕಿಗ ಸ್ಥಳಕ್ಕೆ ತೆರಳಿ ಈ ಆ್ಯಪ್ ಮೂಲಕ ಜಿಯೋ ಫೆನ್ಸ್ ಮಾಡಿ ಆ ಮಾಹಿತಿಯನ್ನು ಕಂದಾಯ ನಿರೀಕ್ಷಕ ಹಾಗೂ ಸರ್ವೇ ಇಲಾಖೆ ಲಾಗಿನ್‌ಗೆ ಕಳುಹಿಸಬೇಕು. ಈ ಮಾಹಿತಿ ಆಧಾರದ ಮೇಲೆ ತಹಶೀಲ್ದಾರ್ ಸ್ಯಾಟಲೈಟ್ ಇಮೇಜ್ ಪಡೆದು ನಿಜಕ್ಕೂ ಅಲ್ಲಿ ಕೃಷಿ ನಡೆಸುತ್ತಿದ್ದಾರ ಎಂಬ ಮಾಹಿತಿ ಕ್ರಾಸ್ ಚೆಕ್ ಮಾಡಿದ್ದಾರೆ.
ಅಲ್ಲದೆ ಆ ಇಮೇಜ್ ಜೊತೆಗೆ ಎಲ್ಲಾ ಮಾಹಿತಿಯನ್ನು ಬಗರ್ ಹುಕುಂ ಕಮಿಟಿ ಮುಂದೆ ಸಲ್ಲಿಸಿ OTP ಮೂಲಕ KYC ಮಾಡುವ ಮೂಲಕ ಋಜುವಾತು ಮಾಡುತ್ತಾರೆ. ಈ ಮೂಲಕ ಅಕ್ರಮ ಸಕ್ರಮ ಆಗುವುದಲ್ಲದೇ ಅಧಿಕಾರಿಗಳ ಕೆಲಸವೂ ಸುಲಭವಾಗಲಿದ್ದು ಭೂ ದಾರರಿಗೂ ಸಹಾಯ ಆಗಲಿದೆ. ಈಗ ಪ್ರಾಯೋಗಿಕ ಹಂತದಲ್ಲಿ ಕೆಲವು ಭಾಗಗಳಲ್ಲಿ ಪ್ರಯೋಗ ನಡೆಸಲಾಗಿದ್ದು ಶೀಘ್ರದಲೇ ರಾಜ್ಯದ ಉಳಿದ ಎಲ್ಲಾ ಕಡೆಯೂ ಜಾರಿಗೆ ಬರಲಿದೆ.