ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹುದ್ದೆಗಳ ಅಧಿಸೂಚನೆಗಾಗಿ (RDPR Notification) ಲಕ್ಷಾಂತರ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಕಾಯುತ್ತಿದ್ದರು. ಇದಲ್ಲದೆ ಈಗ ಗ್ರಾಮ ಪಂಚಾಯಿತಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೂ ಕೂಡ ಕೆಲಸದ ಹೊರೆ ಹೆಚ್ಚಾಗಿದ್ದರಿಂದ ಅವರ ಕಡೆಯಿಂದಲೂ ಕೂಡ ಈ ಕೂಗು ಜೋರಾಯಿತು.
ಅಂತಿಮವಾಗಿ ಸರ್ಕಾರ ಇದಕ್ಕೆ ಅಸ್ತು ಎಂದಿದ್ದು ಖಾಲಿ ಇರುವ 733 ಹುದ್ದೆಗಳ ಅಭ್ಯರ್ಥಿಗೆ ಶೀಘ್ರದಲ್ಲಿ ಅಧಿಸೂಚನೆ ಕೂಡ ಹೊರಡಿಸಲಿದೆ. ಈ ಬಗ್ಗೆ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೂಡ ಮಾಹಿತಿ ಹಂಚಿಕೊಂಡಿದೆ.
ಸದ್ಯಕ್ಕಿರುವ ಮಾಹಿತಿಯ ಪ್ರಕಾರ ಈ ಹುದ್ದೆಗಳ ನೇಮಕಾತಿ ಬಗ್ಗೆ ಮಾನ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾಗಿರುವ ಪ್ರಿಯಾಂಕ ಖರ್ಗೆ (Minister Priyanka Kharge) ಅವರು ಕೂಡ ಮಾಹಿತಿ ನೀಡಿ ಇದನ್ನೇ ಪುನರುಚ್ಚರಿಸಿದ್ದಾರೆ. ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳು ಖಾಲಿ ಇರುವುದರಿಂದ ಈಗಿರುವ ಸಿಬ್ಬಂದಿ ಮೇಲೆ ಹೊರ ಹೆಚ್ಚಾಗಿದೆ.
ಇದಕ್ಕೆ ಪರಿಹಾರ ಕಂಡುಕೊಳ್ಳಲು ವಿವಿಧ ವೃಂದಗಳ ನೇರ ನೇಮಕಾತಿ ಮೂಲಕ ಖಾಲಿ ಇರುವ PDO, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ. ಒಟ್ಟು 733 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಕೂಡ ಸಮ್ಮತಿ ನೀಡಿದ್ದು KPSC (Karnataka Public Service Commission) ಮೂಲಕ ಈ ಹುದ್ದೆಗಳ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ ಎನ್ನುವುದು ಸಹ ತಿಳಿದುಬಂದಿದೆ.
ಅಂತಿಮವಾಗಿ ಈ ತಿಂಗಳು ಅಥವಾ ಮುಂದಿನ ತಿಂಗಳ ಅಂತ್ಯದೊಳಗೆ ಈ ಹುದ್ದೆಗಳ ಕುರಿತಾದ ಅಧಿಕೃತ ಅನುಸೂಚನೆಯೂ ಇಲಾಖೆ ವತಿಯಿಂದ ಹೊರ ಬೀಳಲಿದೆ ಎನ್ನುವ ಮಾತುಗಳು ಕೂಡ ಇದೆ. ಈ ಪ್ರಕಾರವಾಗಿ ಸದ್ಯಕ್ಕೆ ಯಾವ ಯಾವ ಹುದ್ದೆಗಳಿಗೆ ಎಷ್ಟು ಪೋಸ್ಟ್ ಖಾಲಿ ಇದೆ ಮತ್ತು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎನ್ನುವುದರ ಬಗ್ಗೆಯೂ ಕೂಡ ಕೆಲ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.
1. ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO):-
* 150 ಹುದ್ದೆಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗೆ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಾದರೂ ಪದವಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
2. ಕಾರ್ಯದರ್ಶಿ ಗ್ರೇಡ್ 1
* 135 ಹುದ್ದೆಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕಡೆಯ ದಿನಾಂಕದೊಳಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
3. ಕಾರ್ಯದರ್ಶಿ ಗ್ರೇಡ್ 2
* 343 ಹುದ್ದೆಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕಡೆಯ ದಿನಾಂಕದೊಳಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
4. ದ್ವಿತೀಯ ದರ್ಜೆ ಲೆಕ್ಕ ಸಹಾಯಕ:-
* 105 ಹುದ್ದೆಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕಡೆಯ ದಿನಾಂಕದೊಳಗೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.