ಜಾಬ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್, MGNREGA ಯೋಜನೆಯಲ್ಲಿ ದೊಡ್ಡ ಬದಲಾವಣೆ ಇನ್ಮುಂದೆ ಜಾಬ್ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳು ವೇತನ.!

 

WhatsApp Group Join Now
Telegram Group Join Now

ಗ್ರಾಮೀಣ ಭಾಗದಲ್ಲಿರುವ ಜನರಿಗೆ ಜಾಬ್ ಕಾರ್ಡ್ ಗಳನ್ನು ನೀಡಿ ಪ್ರತಿ ವರ್ಷ 100 ಕೆಲಸದ ದಿನಗಳ ಅವಕಾಶ ಮಾಡಿಕೊಡಲಾಗುತ್ತದೆ ಮತ್ತು ಆ ಕೆಲಸಕ್ಕೆ ಸರ್ಕಾರ ನಿಗದಿಸಿರುವ ವೇತನವನ್ನು DBT ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿ ಗ್ರಾಮೀಣ ಭಾಗದ ಜನತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ.

ಈ ಯೋಜನೆಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಎಂದು ಹೆಸರಿಡಲಾಗಿದೆ 2005ನೇ ಇಸವಿಯಿಂದ ಕೂಡ ಈ ಯೋಜನೆಯಲ್ಲಿ ಗ್ರಾಮೀಣ ಭಾಗದ ಜನತೆ ಅನುಕೂಲತೆ ಪಡೆಯುತ್ತಿದ್ದಾರೆ. ನರೇಗಾ ಯೋಜನೆಯಡಿ ಗ್ರಾಮದ ರಸ್ತೆಗಳನ್ನು ಸರಿಪಡಿಸುವುದು, ಕೆರೆಗಳ ಹೂಳೆತ್ತುವುದು, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ ಕಟ್ಟುವುದು ಇನ್ನು ಮುಂತಾದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಲಸ ಕಾರ್ಯಗಳನ್ನು ನೀಡಲಾಗುತ್ತದೆ.

ಗ್ರಾಮೀಣ ಪ್ರದೇಶದ ಜನರು ಕೃಷಿ ಅವಲಂಬಿಸಿರುತ್ತಾರೆ ಹಾಗೂ ಕೃಷಿ ಕಾರ್ಮಿಕರಾಗಿರುತ್ತಾರೆ. ಇವರಿಗೆ ಕೃಷಿ ಕೆಲಸ ಕಾರ್ಯಗಳು ಕಡಿಮೆಯಾದಾಗ ಅಥವಾ ಮಳೆಯ ಕೊರತೆಯಿಂದಾಗಿ ಕೃಷಿಗೆ ಸಮಸ್ಯೆ ಆದಾಗ ಅವರು ಅಲ್ಲಿಂದ ಗುಳೆ ಹೋಗಬಾರದು ಎನ್ನುವ ಕಾರಣಕ್ಕಾಗಿ ಮತ್ತು ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ಉದ್ಯೋಗವಕಾಶವನ್ನು ಕಲ್ಪಿಸಿ ಯುವಜನತೆ ಹಳ್ಳಿಗಳಲ್ಲಿ ಉಳಿದುಕೊಂಡು ಅಭಿವೃದ್ಧಿ ಹೊಂದಲಿ ಎನ್ನುವ ಕಾರಣಕ್ಕಾಗಿ ಇಂತಹ ಜನಪದ ಯೋಜನೆಗಳನ್ನು ಕೈಗೊಳ್ಳಲಾಗಿದೆ.

ಈ ವರ್ಷ ನಮ್ಮ ರಾಜ್ಯದಲ್ಲಿ ಭೀ’ಕ’ರ ಬರಗಾಲ ಎದುರಾಗಿ 34 ಜಿಲ್ಲೆಗಳ 195 ತಾಲೂಕುಗಳು ಬರಪಿಡಿತ ತಾಲೂಕುಗಳೆಂದು ಘೋಷಣೆಯಾಗಿವೆ. ನಮ್ಮ ರಾಜ್ಯ ಮಾತ್ರವಲ್ಲದೆ ಇತರೆ 14 ರಾಜ್ಯಗಳು ಕೂಡ ಈ ವರ್ಷ ಬರದ ಸಂಕಷ್ಟ ಪರಿಸ್ಥಿತಿಯಲ್ಲಿ ಇವೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಭಾಗದ ಜನರಿಗೆ ನರೇಗಾ(MGNREGA) ಯೋಜನೆಯಲ್ಲಿ ನೀಡುತ್ತಿರುವ ಕೆಲಸದ ದಿನಗಳನ್ನು ಹೆಚ್ಚಿಗೆ ಮಾಡಿದರೆ ಹೆಚ್ಚಿನ ಅನುಕೂಲವಾಗುತ್ತದೆ ಎನ್ನುವುದು ರಾಜ್ಯ ಸರ್ಕಾರದ ನಿಲುವು, ಇದಕ್ಕಾಗಿ ಕೇಂದ್ರಕ್ಕೆ ಅರ್ಜಿ ಕೂಡ ಸಲ್ಲಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ಸಚಿವರು ಹಾಗೂ ಆಯುಕ್ತರುಗಳು ಇದರ ಸಂಬಂಧ ಸೆಪ್ಟೆಂಬರ್ ತಿಂಗಳಿನಿಂದ ಅಕ್ಟೋಬರ್ ತಿಂಗಳವರೆಗೆ ಕೇಂದ್ರ ಸರ್ಕಾರಕ್ಕೆ ಎರಡು ಬಾರಿ ಮನವಿ ಸಲ್ಲಿಸಿದ್ದಾರೆ ಮತ್ತು ಅಕ್ಟೋಬರ್ ಅಂತ್ಯದಲ್ಲಿ ಕೇಂದ್ರದಿಂದ ಇದಕ್ಕೆ ಪ್ರತಿಕ್ರಿಯೆ ಕೂಡ ಬಂದಿದೆ.

ಈಗ ಮತ್ತೊಮ್ಮೆ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಕೂಡ ಈ ವಿಚಾರ ಚರ್ಚೆಯಾಗಿದ್ದು ಕೇಂದ್ರ ಸರ್ಕಾರದಿಂದ ಸ್ಪಷ್ಟವಾದ ಉತ್ತರ ಸಿಗದ ಕಾರಣ ರಾಜ್ಯದ ಗ್ರಾಮೀಣ ಭಾಗದ ಜನರಿಗಾಗಿ ಮಾನ್ಯ ಮುಖ್ಯಮಂತ್ರಿಗಳು ಮತ್ತೊಮ್ಮೆ ಇದನ್ನು ಒತ್ತಾಯಿಸಿ ಕೇಳುವುದಾಗಿ ಉತ್ತರಿಸಿದ್ದಾರೆ.

ಈ ಮೂಲಕವಾಗಿ ಈಗ ಇರುವ ನೂರು ಕೆಲಸದ ದಿನಗಳ ಅವಕಾಶವನ್ನು 150ಕ್ಕೆ ಹೆಚ್ಚಿಸಬೇಕು ಮತ್ತು ಪ್ರಸ್ತುತವಾಗಿ ಸಿಗುತ್ತಿರುವ ವೇತನಕ್ಕಿಂತ ಇನ್ನು ಹೆಚ್ಚಿನ ಭಾಗದ ವೇತನ ನೀಡಬೇಕು. ಇದರಿಂದ ಈಗಾಗಲೇ ಬರಗಾಲದ ಹೊಡೆತದಿಂದ ತತ್ತರಿಸುವ ಜನತೆಗೆ ಅವರ ಜೀವನ ನಿರ್ವಹಣೆ ಮಾಡಿಕೊಂಡು ಹೋಗುವುದಕ್ಕೆ ಬಹಳ ಅನುಕೂಲತೆ ಆಗುತ್ತದೆ ಎನ್ನುವುದು ರಾಜ್ಯ ಸರ್ಕಾರದ ಕೋರಿಕೆಯಾಗಿದೆ.

ಸದ್ಯಕ್ಕಿರುವ ಮಾಹಿತಿ ಪ್ರಕಾರ ಕೇಂದ್ರ ಸರ್ಕಾರವು ಕೂಡ ಇದಕ್ಕೆ ಸ್ಪಂದಿಸಿ, ಅನುಕೂಲತೆ ಮಾಡಿಕೊಡುವ ಸಾಧ್ಯತೆಗಳು ಹೆಚ್ಚಿವೆ. ಆದ್ದರಿಂದ ಇನ್ನು ಯಾರೆಲ್ಲಾ ಹಳ್ಳಿಯ ಭಾಗದಲ್ಲಿದ್ದು ಜಾಬ್ ಕಾರ್ಡ್ ಪಡೆದಿಲ್ಲ ತಪ್ಪದೆ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ವಿಚಾರಿಸಿ ಜಾಬ್ ಕಾರ್ಡ್ ಪಡೆದುಕೊಳ್ಳಿ ಮತ್ತು ಸರ್ಕಾರ ಅವಕಾಶವನ್ನು ತಪ್ಪದೇ ಬಳಸಿಕೊಳ್ಳಿ.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now