ಕಳೆದ ಬಾರಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ BJP ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿತ್ತು, ಇದರಲ್ಲಿ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಲೇಬರ್ ಕಾರ್ಡ್ ಯೋಜನೆ ಪರಿಚಯಿಸಿ ಲೇಬರ್ ಕಾರ್ಡ್ ಹೊಂದಿರುವಂತಹ ಕಾರ್ಮಿಕರಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಪರಿಚಯಿಸಿದೆ.
ಲೇಬರ್ ಕಾರ್ಡ್ ಹೊಂದಿರುವ ವ್ಯಕ್ತಿ ಮತ್ತು ಲೇಬರ್ ಕಾರ್ಡ್ ನಲ್ಲಿ ಹೆಸರನ್ನು ಹೊಂದಿರುವ ಆತನ ಕುಟುಂಬವು ಸರ್ಕಾರದಿಂದ ಈ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು. ಆರೋಗ್ಯ, ಪಿಂಚಣಿ, ವಿದ್ಯಾಭ್ಯಾಸ, ಕೌಶಲ್ಯ ಅಭಿವೃದ್ಧಿ ಸೇರಿದಂತೆ ಅನೇಕ ವಿಭಾಗಗಳಲ್ಲಿ ಲೇಬರ್ ಕಾರ್ಡ್ ಹೊಂದಿರುವವರಿಗೆ ಸರ್ಕಾರದಿಂದ ಹಲವು ಅನುಕೂಲತೆಗಳು ಸಿಗುತ್ತಿದೆ.
ಈ ಸುದ್ದಿ ಓದಿ:- ಈ ಡಾಕ್ಯುಮೆಂಟ್ ಅಪ್ಡೇಟ್ ಮಾಡಿಸದೇ ಇದ್ದರೆ 7ನೇ ಕಂತಿನ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ ಜಮೆ ಆಗಲ್ಲ.!
ಅಂತೆಯೇ 2023-24ನೇ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಯಾರು ಅರ್ಹರು? ಏನೆಲ್ಲಾ ದಾಖಲೆಗಳನ್ನು ಸಲ್ಲಿಸಬೇಕು? ಎಲ್ಲಿ ಅರ್ಜಿ ಸಲ್ಲಿಸಬೇಕು? ಎನ್ನುವ ಮಾಹಿತಿಗಾಗಿ ಲೇಖನವನ್ನು ಪೂರ್ತಿಯಾಗಿ ಓದಿ.
ಯಾರು ಅರ್ಹರು:-
* ಈ ಯೋಜನೆಗೆ ಅರ್ಜಿ ಸಲ್ಲಿಸುವ ಮಗುವಿನ ತಂದೆ ಅಥವಾ ತಾಯಿ ಕಟ್ಟಡ ಕಾರ್ಮಿಕರಾಗಿದ್ದು, ಕಾರ್ಮಿಕರ ಮಂಡಳಿಯಲ್ಲಿ ನೋಂದಣಿಯಾಗಿ ಲೇಬರ್ ಕಾರ್ಡ್ ಹೊಂದಿರಬೇಕು, ಮತ್ತು ನೋಂದಣಿ ಚಾಲ್ತಿಯಲ್ಲಿರಬೇಕು. ( ತಂದೆ-ತಾಯಿ ಇಬ್ಬರೂ ನೋಂದಾಯಿತ ಕಟ್ಟಡ ಕೆಲಸಗಾರರಾಗಿದ್ದ ಮಾತ್ರಕ್ಕೆ ವಿದ್ಯಾರ್ಥಿಯು ಎರಡು ಬಾರಿ ಸೌಲಭ್ಯವನ್ನು ಪಡೆಯಲು ಸಾಧ್ಯವಿಲ್ಲ).
* ವಿದ್ಯಾರ್ಥಿಯು ಹಿಂದಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಮುಂದಿನ ತರಗತಿಗೆ ದಾಖಲಾಗಿರಬೇಕು. (ಸಾಮಾನ್ಯ ವರ್ಗದ ವಿದ್ಯಾರ್ಥಿಗೆ 50%, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 45% ಅಂಕಗಳಲ್ಲಿ ಉತ್ತೀರ್ಣರಾಗಿರಬೇಕು)
ಈ ಸುದ್ದಿ ಓದಿ:-ರಾಗಿ ಬೆಳೆದ ರೈತರಿಗೆ ಗುಡ್ ನ್ಯೂಸ್ ರಾಗಿ ಕ್ವಿಂಟಾಲ್ ಗೆ 3486.ರೂ ಬೆಂಬಲ ಬೆಲೆ ನಿಗದಿ.!
* ಒಬ್ಬ ಕಾರ್ಮಿಕರ ಇಬ್ಬರು ಮಕ್ಕಳು ಮಾತ್ರ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರು
* ಅತಿ ಮುಖ್ಯವಾಗಿ ಕಾರ್ಮಿಕನು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ NPCI ಮ್ಯಾಪಿಂಗ್ ಮಾಡಿಸಿರಬೇಕು.
* ಒಂದು ವೇಳೆ ವಿದ್ಯಾರ್ಥಿಯು ಈಗಾಗಲೇ ಸರ್ಕಾರದಿಂದ ಸಿಗುವ ಬೇರೆ ಯಾವುದೇ ವಿಭಾಗದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ಅರ್ಹನಾಗಿದ್ದರೆ ಅಂತಹ ಅರ್ಜಿಗಳು ತಿರಸ್ಕೃತವಾಗುತ್ತದೆ
* 8ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಅಭ್ಯಾಸ ಮಾಡುತ್ತಿರುವ ಕಾರ್ಮಿಕರ ಮಕ್ಕಳು ಈ ಯೋಜನೆಯ ಪ್ರಯೋಜನ ಪಡೆಯುತ್ತಾರೆ. ಗರಿಷ್ಠ ರೂ.10,000ದವರೆಗೆ ವಿದ್ಯಾರ್ಥಿಯು ಕೋರ್ಸ್ ಗೆ ಅನುಗುಣವಾಗಿ ಸ್ಕಾಲರ್ಶಿಪ್ ಪಡೆಯಬಹುದು.
ಈ ಸುದ್ದಿ ಓದಿ:-ಮುಂದಿನ 5 ವರ್ಷ ಉಚಿತ ರೇಷನ್.! ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ.!
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
* ವಿದ್ಯಾರ್ಥಿ ಮತ್ತು ಪೋಷಕರ ಆಧಾರ್ ಕಾರ್ಡ್
* ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಪಾಸ್ ಬುಕ್ ಪ್ರತಿ.
* ತಂದೆ / ತಾಯಿ ಕಾರ್ಮಿಕ ಕಾರ್ಡ್
* ಕಳೆದ ವರ್ಷದ ಶೈಕ್ಷಣಿಕ ಅಂಕಪಟ್ಟಿ
* ಆಧಾರ ಕಾರ್ಡ್ ಗೆ ಲಿಂಕ್ ಆಗಿರುವ ಮೋಬೈಲ್ ನಂಬರ್
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಪ್ರಸಕ್ತ ಸಾಲಿನ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ದಾಖಲಾಗಿರುವುದಕ್ಕೆ ಪುರಾವೆಯಾಗಿ ಶಾಲಾ ಶುಲ್ಕದ ರಶೀದಿ
* ನಿವಾಸಿ ದೃಢೀಕರಣ ಪತ್ರ
* ಯುನಿವರ್ಸಿಟಿ ಅಥವಾ ರಿಜಿಸ್ಟ್ರೇಷನ್ ಬೋರ್ಡ್ ID
* ಇತ್ಯಾದಿ ಯಾವುದೇ ಪ್ರಮುಖ ದಾಖಲೆಗಳು.
ಅರ್ಜಿ ಸಲ್ಲಿಸುವ ವಿಧಾನ:-
* SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ
* ವೈಯುಕ್ತಿಕವಾಗಿ ಅಥವಾ ಹತ್ತಿರದಲ್ಲಿರುವ ಯಾವುದೇ ಸೇವಾಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದು
* ವೆಬ್ಸೈಟ್ ವಿಳಾಸ:
https://ssp.postmatric.Karnataka.gov.in/
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಮೇ, 2024.