ಅಂಗನವಾಡಿ ಕಾರ್ಯಕರ್ತೆ ಮತ್ತು ಆಶಾ ಕಾರ್ಯಕರ್ತರಿಗೆ ಕೂಡ ಗೃಹಲಕ್ಷ್ಮಿ ಯೋಜನೆ ಅನ್ವಯ.! ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಅಧಿಕೃತ ಘೋಷಣೆ.!

 

ರಾಜ್ಯದಾದ್ಯಂತ ಗೃಹಲಕ್ಷ್ಮಿ ಯೋಜನೆ ( Gruhalakshmi Scheme) ಜಾರಿ ದಿನಾಂಕದ ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತಿದೆ. ಯಾಕೆಂದರೆ ಪದೇ ಪದೇ ಈ ದಿನಾಂಕ ಮುಂದೂಡಲ್ಪಡುತ್ತಿತ್ತು ಆದರೀಗ ಇದಕ್ಕೆ ಅಂತಿಮವಾಗಿ ಇದಕ್ಕೆ ಉತ್ತರ ಸಿಕ್ಕಿದೆ. ಸರಕಾರಕ್ಕೆ ನೂರು ದಿನ ತುಂಬಿದ ಸಂಭ್ರಮದಲ್ಲಿಯೇ ಆಗಸ್ಟ್ 30ನೇ ತಾರೀಕು ಮೈಸೂರಿನಲ್ಲಿ (Mysore) ಅದ್ದೂರಿಯಾಗಿ ಕಾರ್ಯಕ್ರಮ (launching program) ನಡೆಸಿ ಇದುವರೆಗೂ ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯಾಗಿರುವ ಎಲ್ಲಾ ಕುಟುಂಬದ ಯಜಮಾನಿಯರ ಖಾತೆಗೂ 2,000 ಸಹಾಯಧನವನ್ನು ಅಂದೇ DBT ಮೂಲಕ ವರ್ಗಾವಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮವನ್ನು ಎಲ್ಲ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಮಟ್ಟದಲ್ಲೂ ಕೂಡ ಸಾಧ್ಯವಾದಷ್ಟು ಫಲಾನುಭವಿಗಳನ್ನು ಸೇರಿಸಿ ಸಂಭ್ರಮವನ್ನು ಆಚರಿಸುವಂತೆ ಸರ್ಕಾರ ಕರೆ ನೀಡಿದೆ. ಇದರ ಪ್ರಯುಕ್ತವಾಗಿ ಸೋಮವಾರ ಚಾಮರಾಜನಗರದ ಜಿಲ್ಲೆಯಲ್ಲಿ (Chamarajanagara) ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತೆ ಸಭೆಯಲ್ಲಿ ಭಾಗಿಯಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Minister Lakshmi Hebbalkar) ಅವರು ಗೃಹಲಕ್ಷ್ಮೀ ಯೋಜನೆ ಉದ್ದೇಶ ಮತ್ತು ತಮ್ಮ ಸರ್ಕಾರವು ನೂರು ದಿನ ಪೂರೈಸುತ್ತಿರುವುದು ಸಂಭ್ರಮದ ಬಗ್ಗೆ ಮಾತನಾಡುತ್ತಾ.

ಸ್ವಂತ ಕಾರು ಇದ್ದವರ BPL ಕಾರ್ಡ್ ರದ್ದು ಸದ್ಯಕ್ಕಿಲ್ಲ ಸ್ಪಷ್ಟನೆ ಕೊಟ್ಟ ಆಹಾರ ಮತ್ತು ನಾಗರಿಕರ ಸರಬರಾಜು ಸಚಿವ ಮುನಿಯಪ್ಪ.!

ರಾಜ್ಯದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರಿಗೆ (Anganavadi workers and Asha workers) ಇದ್ದ ಗೊಂದಲವನ್ನು ಬಗೆಹರಿಸಿದ್ದಾರೆ. ನಮ್ಮ ಸರ್ಕಾರವು ನೂರು ದಿನ ಪೂರೈಸುವತ್ತ ಯಶಸ್ವಿಯಾಗಿ ಮುನ್ನುಗ್ಗಿದೆ. ಹಾಗೆಯೇ ಜನರಿಗೆ ನೀಡಿದ ಭರವಸೆಗಳನ್ನು ಕೂಡ ಅದೇ ಪ್ರಕಾರವಾಗಿ ನಡೆಸಿಕೊಂಡು ಬರುತ್ತದೆ.

ನೂರು ದಿನ ತುಂಬಿರುವ ಸಂಭ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಲಾಂಚ್ ಮಾಡುತ್ತಿದ್ದೇವೆ. ನಮ್ಮ ಇಲಾಖೆಯ ಕೆಲಸಗಳು ಕೂಡ ಈಗಷ್ಟೇ ಶುರುವಾಗಿವೆ,ಗೃಹಲಕ್ಷ್ಮಿ ಯೋಜನೆ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿಕೊಂಡ ಸಚಿವೆ ಇದೇ ತಿಂಗಳಿಂದ ಎಲ್ಲಾ ಫಲಾನುಭವಿಗಳ ಖಾತೆಗೂ ಕೂಡ ಸಹಾಯದಿಂದ ಬರಲಿದೆ.

ಗೃಹಲಕ್ಷ್ಮಿ ಯೋಜನೆ ಹಣ ಬ್ಯಾಂಕ್ ಖಾತೆಗೆ ಜಮೆ ಆಗಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!

ಆದರೆ ಈ ನಡುವೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಹರೇ ಎನ್ನುವ ಪ್ರಶ್ನೆ ಎಲ್ಲೆಡೆ ಕೇಳಿ ಬರುತ್ತಿತ್ತು, ಈ ಗೊಂದಲ ಬೇಡ ಅವರು ಸಹ ಅರ್ಹರಾಗುತ್ತಾರೆ. ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೂಡ ಸರ್ಕಾರದ ಗೃಹಲಕ್ಷ್ಮಿ ಯೋಜನೆ ವ್ಯಾಪ್ತಿಗೆ ಬರುತ್ತಾರೆ ಅವರು ಅರ್ಜಿ ಸಲ್ಲಿಸಿ ಸಹಾಯಧನವನ್ನು ಪಡೆಯಬಹುದು ಎಂದು ಹೇಳಿದರು.

ಈ ಮೂಲ ಬಹುದಿನದಿಂದ ಇದ್ದ ಗೊಂದಲವೊಂದಕ್ಕೆ ಸಚಿವೆ ತೆರೆ ಎಳೆದಿದ್ದಾರೆ ಎಂದೇ ಹೇಳಬಹುದು ಇದಾದ ಬಳಿಕ ಚಾಮರಾಜನಗರ ಜಿಲ್ಲೆ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಮಣಿ (Union Secretary Nagamani) ಅವರು ಸಚಿವೆ ಹೇಳಿದ ಮಾತಿನ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಇದುವರೆಗೂ ಕೂಡ ನಮ್ಮ ಅಂಗನವಾಡಿ ಕಾರ್ಯಕರ್ತೆಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾ ಬೇಡವಾ ಎನ್ನುವ ಗೊಂದಲದಲ್ಲಿ ಇದ್ದರು.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಬಿಡುಗಡೆಯಾಗಿದೆ, ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯೇ.? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!

ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಸ್ಪಷ್ಟ ಪಡಿಸಿರುವುದರಿಂದ ಕುಟುಂಬದ ಮುಖ್ಯಸ್ಥೆಯ ಸ್ಥಾನದಲ್ಲಿರುವ ಕಾರ್ಯಕರ್ತೆಯರು ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಸಹಾಯಧನವನ್ನು ಪಡೆಯಲಿದ್ದಾರೆ. ಸರ್ಕಾರದ ಭಾಗವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತೆಯರು ಯೋಜನೆಯಿಂದ ವಂಚಿತರಾಗುತ್ತಾರೆ ಎನ್ನುವ ಬೇಸರವಿತ್ತು ಆದರೆ ಸಚಿವೆ ಕೊಟ್ಟ ಭರವಸೆಯಿಂದ ಸಂತಸವಾಗಿದೆ ಎಂದು ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.

Leave a Comment

%d bloggers like this: