SSLC ಓದಿದವರಿಗೆ ಯಾವ ಸರ್ಕಾರಿ ಕೆಲಸ ಸಿಗುತ್ತದೆ ಎನ್ನುವುದು ಸಾಮಾನ್ಯರ ಮಾತು. ಆದರೆ ಕರ್ನಾಟಕ ಸರ್ಕಾರದ ಹುದ್ದೆಗಳಲ್ಲಿ SSLC ವಿದ್ಯಾಭ್ಯಾಸ ಮಾಡಿದವರಿಗೂ ಕೂಡ ಅನೇಕ ಉದ್ಯೋಗಾವಕಾಶಗಳು ಇವೆ. ಈಗ ಮತ್ತೊಮ್ಮೆ ಅದೇ ರೀತಿ ಅವಕಾಶ ಮಾಡಿಕೊಡಲಾಗುತ್ತಿದೆ.
ಕರ್ನಾಟಕ ವಿಧಾನ ಪರಿಷತ್ತು ಸಚಿವಾಲಯದಲ್ಲಿ ( Karnataka Legislative Council Recruitment) ಖಾಲಿ ಇರುವ ಡ್ರೈವರ್ ಹಾಗೂ ಗ್ರೂಪ್ ಡಿ ಹುದ್ದೆಯ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. SSLC ವಿದ್ಯಾಭ್ಯಾಸ ಮಾಡಿದವರು ಕೂಡ ಅರ್ಜಿ ಸಲ್ಲಿಸಬಹುದು ಎನ್ನುವುದೇ ವಿಶೇಷವಾಗಿದ್ದು ನಾಡಿನ ಅನೇಕ ಆಕಾಂಕ್ಷಿಗಳಿಗೆ ಅನುಕೂಲವಾಗಲಿ ಎನ್ನುವ ಕಾರಣದಿಂದಾಗಿ ಅಧಿಸೂಚನೆಯಲ್ಲಿ ನೇಮಕಾತಿ ಕುರಿತಂತೆ ಇರುವ ಎಲ್ಲಾ ಪ್ರಮುಖ ಅಂಶಗಳ ಬಗ್ಗೆ ಈ ಲೇಖನದಲ್ಲಿ ವಿವರಿಸುತ್ತಿದ್ದೇವೆ.
ಈ ಸುದ್ದಿ ಓದಿ:- 40,000 ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಸೌರ ವಿದ್ಯುತ್ ಸಂಪರ್ಕ.! ಆಸಕ್ತರು ಅರ್ಜಿ ಸಲ್ಲಿಸಿ.!
ನೇಮಕಾತಿ ಇಲಾಖೆ:- ಕರ್ನಾಟಕ ವಿಧಾನ ಪರಿಷತ್ತು ಸಚಿವಾಲಯ
ಹುದ್ದೆಗಳು:- ಡ್ರೈವರ್ ಮತ್ತು ಗ್ರೂಪ್ ಡಿ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 32
ಈ ಸುದ್ದಿ ಓದಿ:- ಸಿಲಿಂಡರ್ ಬೆಲೆ ಮತ್ತಷ್ಟು ಇಳಿಕೆ, ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಗಿಫ್ಟ್.!
ಹುದ್ದೆಗಳ ವಿವರ:-
* ವಾಹನ ಚಾಲಕರು – 03 ಹುದ್ದೆಗಳು
* ಗ್ರೂಪ್ D ಹುದ್ದೆಗಳು – ದಲಾಯತ್, ಕಾವಲುಗಾರರು, ಸ್ವೀಪರ್ ಕಮ್ ಸ್ಕ್ಯಾವೆಂಜರ್, ಸೆಕ್ಯೂರಿಟಿ ಗಾರ್ಡ್ – 29 ಹುದ್ದೆಗಳು
ಉದ್ಯೋಗ ಸ್ಥಳ:- ಬೆಂಗಳೂರು…
ವೇತನ ಶ್ರೇಣಿ:-
* ವಾಹನ ಚಾಲಕರಿಗೆ ರೂ.21,400 ರಿಂದ ರೂ.42,000
* ಗ್ರೂಪ್ D ಹುದ್ದೆಗಳಿಗೆ ರೂ.17,000 ರಿಂದ ರೂ.28,950
ಶೈಕ್ಷಣಿಕ ವಿದ್ಯಾರ್ಹತೆ:-
1. ವಾಹನ ಚಾಲಕರು ಹುದ್ದೆಗಳಿಗೆ –
* SSLC ಅಥವಾ ತತ್ಸಮಾನ ಪರೀಕ್ಷೆ ಉತ್ತೀರ್ಣರಾಗಿರಬೇಕು * ಮೋಟಾರು ಕಾರು, ಭಾರಿ ವಾಹನಗಳ ಚಾಲನೆಯ ಅಧಿಕೃತ ಚಾಲನಾ ಪರವಾನಗಿ ಹೊಂದಿರಬೇಕು
* ಪ್ರಥಮ ಚಿಕಿತ್ಸೆಯ ಪ್ರಮಾಣ ಪತ್ರವನ್ನು ಹೊಂದಿರಬೇಕು
* ಮೋಟಾರು ಕಾರುಗಳ ಚಾಲನೆಯಲ್ಲಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ ಪ್ರಾಯೋಗಿಕ ಅನುಭವ ಹೊಂದಿರಬೇಕಾಗುತ್ತದೆ.
2. ಗ್ರೂಪ್ ಡಿ ಹುದ್ದೆಗಳಿಗೆ SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* SC / ST, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು.
ಅರ್ಜಿ ಸಲ್ಲಿಸುವ ವಿಧಾನ:-
* ಅರ್ಜಿ ಫಾರಂನ್ನು ಸಚಿವಾಲಯದ ವೆಬ್‌ಸೈಟ್ ನಲ್ಲಿ ನೀಡಲಾಗಿದೆ.
* ನಮೂನೆ-1 ರ ದ್ವಿಪ್ರತಿಯಲ್ಲಿ ಅಗತ್ಯವುಳ್ಳ ದಾಖಲೆಯನ್ನು ಲಗತ್ತಿಸಿ ಕೊನೆ ದಿನಾಂಕದ ಒಳಗೆ ಕಚೇರಿ ಅಂಚೆ ವಿಳಾಸಕ್ಕೆ ಕಳುಹಿಸಬೇಕು.
* ಅಥವಾ ಖುದ್ದಾಗಿ ವಿಧಾನ ಸೌಧದ 2ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 216 ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ತಲುಪಿಸಬೇಕು.
* ಅಂಚೆ ಮೂಲಕ ಕಳುಹಿಸಲು ವಿಳಾಸ –
ಕಾರ್ಯದರ್ಶಿ,
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ,
ಅಂಚೆ ಪೆಟ್ಟಿಗೆ ಸಂಖ್ಯೆ – 5079,
1ನೇ ಮಹಡಿ, ವಿಧಾನಸೌಧ,
ಬೆಂಗಳೂರು – 560001.
* ವೆಬ್ಸೈಟ್ ವಿಳಾಸ – https://www.kla.kar.nic.in/council/career.htm
ಆಯ್ಕೆ ವಿಧಾನ:-
* ದಾಖಲೆಗಳ ಪರಿಶೀಲನೆ
* ನೇರ ಸಂದರ್ಶನ
ಅರ್ಜಿ ಶುಲ್ಕ:-
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600
* OBC ಅಭ್ಯರ್ಥಿಗಳಿಗೆ ರೂ.300
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50.
* SC / ST / ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಈ ಸುದ್ದಿ ಓದಿ:-ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, PUC ಪಾಸ್ ಆದವರು ಅರ್ಜಿ ಸಲ್ಲಿಸಿ ವೇತನ 42,000/-
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 08 ಮಾರ್ಚ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 05 ಏಪ್ರಿಲ್, 2024.