ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.!

 

WhatsApp Group Join Now
Telegram Group Join Now

ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು (Gruha Lakshmi Scheme Application Form) ಬಿಡುಗಡೆ ಮಾಡಿದೆ. ಅರ್ಜಿಯಲ್ಲಿ ಜಾತಿ ನಮೂನೆಯನ್ನು ಕಡ್ಡಾಯ ಮಾಡಿದೆ.

ಅರ್ಜಿ ನಮೂನೆಯ ಮೇಲ್ಭಾಗದಲ್ಲಿ ಸಿಎಂ, ಡಿಸಿಎಂ, ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಸೇರಿಂತೆ ಮೂವರ ಭಾವಚಿತ್ರವಿರುವ ‘ಗೃಹಲಕ್ಷ್ಮೀ’ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದೆ. ಆಧಾರ್ ಗೆ ಲಿಂಕ್ ಹೊಂದಿರುವ ಫೋನ್ ನಂಬರ್ ಕಡ್ಡಾಯವಾಗಿ ನಮೂದು ಮಾಡಬೇಕಿದೆ. ಅರ್ಜಿಯಲ್ಲಿ ಪತಿಯ ಆಧಾರ್ ಕಾರ್ಡ್, ವೋಟರ್ ಐಡಿ ಕೇಳಲಾಗಿದೆ. ಜೂನ್‌ 15 ರಿಂದ ಜುಲೈ 15 ರತನಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೇ ಫಲಾನುಭವಿಯು ತಾನು ಮತ್ತು ತನ್ನ ಪತಿ ಜಿಎಸ್‌ಟಿ ಪಾವತಿದಾರರು ಅಲ್ಲ ಎಂದು ಘೋಷಣೆ ಮಾಡಬೇಕಿದೆ. ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚು ಮಹಿಳೆಯರಿದ್ದರೆ ಅರ್ಜಿದಾರರೇ ಯಜಮಾನಿ ಯಾರು ಎಂದು ಘೋಷಣೆ ಮಾಡಿ ಅರ್ಜಿ ಸಲ್ಲಿಸಬೇಕು.

ಗೃಹಲಕ್ಷ್ಮೀ ಯೋಜನೆಗೆ ಪ್ರಮುಖ ಷರತ್ತುಗಳೇನು?

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್‌ ಖಾತೆ ಮತ್ತು ಆಧಾರ ಕಾರ್ಡ್‌ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.

ಯಾವೆಲ್ಲ ದಾಖಲೆಗಳು ಬೇಕು ?

* ಅರ್ಜಿಯಲ್ಲಿ ಮನೆಯ ಯಜಮಾನಿ ಹಾಗೂ ಪತಿಯ ದಾಖಲೆಗಳನ್ನು ಕೇಳಲಾಗಿದೆ. ಪತಿಯ ಆಧಾರ್ ಕಾರ್ಡ್ ವೋಟರ್ ಐಡಿ ದಾಖಲೆ ಕೂಡ ಅರ್ಜಿ ಸಲ್ಲಿಕೆ ವೇಳೆ ಅಗತ್ಯವಾಗಿದೆ.
* ಅರ್ಜಿಯಲ್ಲಿ ಮೊದಲಿಗೆ ಹೆಸರು, ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಚೀಟಿ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಹಾಗೂ ವೋಟರ್ ಐಡಿ ಮುಂತಾದ ಮಾಹಿತಿಯನ್ನು ಕೇಳಲಾಗಿದೆ.
* ಅದರೊಂದಿಗೆ ಜಾತಿ ಪ್ರಮಾಣಪತ್ರ, ಆಧಾರ್ ಜತೆ ಲಿಂಕ್ ಆಗಿರುವ ಮೊಬೈಲ್ ನಂ. ಬ್ಯಾಂಕ್ ಖಾತೆ ಮಾಹಿತಿಯನ್ನು ನಮೂದಿಸಲು ಜಾಗ ನೀಡಲಾಗಿದೆ.

* ಈ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ, ಮನೆಯ ಯಜಮಾನಿ ಹಾಗೂ ಆಕೆಯ ಪತಿಯ ಆಧಾರ್ ಕಾರ್ಡ್ ಪ್ರತಿ ಹಾಗೂ ವೋಟರ್ ಐಡಿ ಜೆರಾಕ್ಸ್‌ ಪ್ರತಿಯನ್ನು ಲಗತ್ತಿಸಬೇಕು. * ಅದರೊಂದಿಗೆ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್‌ ಪ್ರತಿಯನ್ನೂ ಲಗತ್ತಿಸಬೇಕು.
ಫಲಾನುಭವಿಯ ಹೆಸರನ್ನು ಬಿಪಿಎಲ್ ಅಥವಾ ಎಪಿಎಲ್ ಅಥವಾ ಅಂತ್ಯೋದಯ ಕಾರ್ಡ್‌ಗಳಲ್ಲಿ ಕುಟುಂಬದ ಮುಖ್ಯಸ್ಥ ಎಂದು ನಮೂದಿಸರಬೇಕು. ಈ ಬಿಪಿಎಲ್‌ / ಎಪಿಎಲ್‌/ ಅತ್ಯೋದಯ ಕಾರ್ಡ್‌ಗಳಿಲ್ಲದ ಜನರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಿದೆ.

ಅರ್ಜಿ ಸಲ್ಲಿಕೆ ಹೇಗೆ?

ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್‌ ಮೂಲಕ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಒಂದು ವೇಳೆ ಅರ್ಜಿದಾರರು ತಪ್ಪು ಮಾಹಿತಿ ನೀಡಿದ್ದೇ ಆದರೆ, ಸರ್ಕಾರ ನೀಡಿದ್ದ ಹಣವನ್ನು ವಾಪಸ್ ನೀಡಬೇಕಾಗುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಬ್ಯಾಂಕ್ ಖಾತೆಗಳನ್ನು ತಮ್ಮ ಆಧಾರ್‌ಗೆ ಲಿಂಕ್ ಮಾಡಿರಬೇಕು.

https://drive.google.com/file/d/1-14JW0nJ2hfXT-TAHsIykVdha9D9_eZC/view

ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now