ಕಾಂಗ್ರೆಸ್ (Congress) ಸರ್ಕಾರವು ಚುನಾವಣೆ ಪೂರ್ವವಾಗಿ ಕೊಟ್ಟಿದ್ದ ಭರವಸೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು (Gruhalakshmi Scheme) ಕೂಡ ಒಂದು. ಲಿಂಗ ಸಮಾನತೆ ಕಾಪಾಡುವ ಮತ್ತು ಮಹಿಳೆಯರನ್ನು ಆರ್ಥಿಕವಾಗಿ ಸದೃಢಿಸುವ ಉದ್ದೇಶದಿಂದ ಕರ್ನಾಟಕದ ಎಲ್ಲಾ ಕುಟುಂಬದ ಯಜಮಾನಿ ಖಾತೆಗೂ ಕೂಡ ಪ್ರತಿ ತಿಂಗಳು 2000ರೂ. ಸಹಾಯಧನವನ್ನು ನೀಡಲು ಸರ್ಕಾರ ನಿರ್ಧರಿಸಿದೆ.
ಈ ಯೋಜನೆಗೆ ಜುಲೈ 19 ರಿಂದ ಅರ್ಜಿ ಸಲ್ಲಿಸಲು ಸರ್ಕಾರ ಸೂಚಿಸಿದೆ. ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥ ಸ್ಥಾನದಲ್ಲಿರುವ ಮಹಿಳೆಯು ಆಧಾರ್ ಕಾರ್ಡ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನೀಡುವ ಮೂಲಕ ಸರ್ಕಾರ ಸೂಚಿಸಿರುವ ಸೇವಾ ಕೇಂದ್ರಗಳಾದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಹೋಗಿ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.
ಸರ್ಕಾರದ ಅಂಕಿ ಅಂಶಗಳ ಪ್ರಕಾರ 1.10 ಕೋಟಿ ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಇದಕ್ಕಿಂತಲೂ ಹೆಚ್ಚಿನ ಮಂದಿ ಈ ಯೋಜನೆಗೆ ಅರ್ಹರಾಗಿದ್ದಾರೆ ಆದರೆ ಪಡಿತರ ಚೀಟಿ ಮಾಹಿತಿಯಲ್ಲಿ ಹೊಂದಾಣಿಕೆ ಆಗದಿರುವುದು ಅಥವಾ ಕುಟುಂಬದ ಮುಖ್ಯಸ್ಥನದಲ್ಲಿ ಮಹಿಳೆಯ ಹೆಸರು ಇಲ್ಲದಿರುವುದು ಆಧಾರ್ ಕಾರ್ಡ್ ನಲ್ಲಿ ಸಮಸ್ಯೆ ಆಗಿರುವುದು ಇನ್ನಿತರ ಕಾರಣಗಳಿಂದಾಗಿ ಅರ್ಜಿ ಸಲ್ಲಿಸಲಾಗದೆ ವಂಚಿತರಾಗಿದ್ದಾರೆ.
ಇವರಿಗೆಲ್ಲ ಸಮಾಧಾನಕರ ಸಂಗತಿ ಏನೆಂದರೆ, ಈಗಷ್ಟೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಅವರು ಗೃಹಲಕ್ಷ್ಮಿ ಯೋಜನೆಗೆ ಕಡೆಯ ದಿನಾಂಕ ಇಲ್ಲ ದಾಖಲಾತಿಗಳಲ್ಲಿ ಸಮಸ್ಯೆ ಉಂಟಾಗಿರುವವರು ಅವುಗಳನ್ನು ಸರಿಪಡಿಸಿಕೊಂಡ ನಂತರ ಅರ್ಜಿ ಸಲ್ಲಿಸಬಹುದು ಅವರಿಗೆ ಮುಂದಿನ ತಿಂಗಳಿನಿಂದ ಸಹಾಯಧನ ಸಿಗುತ್ತದೆ ಎನ್ನುವ ಸಮಾಧಾನಕರವಾದ ಉತ್ತರವನ್ನು ನೀಡಿದ್ದಾರೆ.
ಮನೆ ಬಾಡಿಗೆ ಕೊಟ್ಟಿರುವವರಿಗೆ ಮಹತ್ವದ ಸೂಚನೆ, ಕೋರ್ಟ್ ನಿಂದ ಬಂತು ಹೊಸ ಆದೇಶ ತಪ್ಪದೆ ಈ ಸುದ್ದಿ ನೋಡಿ.!
ಸರ್ಕಾರ ಮೊದಲು ಹೊರಡಿಸಿದ್ದ ಆದೇಶ ಪತ್ರದ ಅನುಸಾರ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಸಹಾಯಧನ ಮಹಿಳೆಯರ ಖಾತೆಗೆ ವರ್ಗಾವಣೆ ಆಗಬೇಕಿತ್ತು, ಆದರೆ ಕಾರಣಾಂತರಗಳಿಂದ ಪದೇಪದೇ ಯೋಚನೆ ಲಾಂಚ್ ಆಗುವ ದಿನಾಂಕ ( Gruhalakshmi launching) ಮುಂದಕ್ಕೆ ಹೋಗುತ್ತಿದೆ. ಅಂತಿಮವಾಗಿ ಕಾಂಗ್ರೆಸ್ ಸರ್ಕಾರಕ್ಕೆ 100 ದಿನ ತುಂಬಿರುವ ಸಂಭ್ರಮದಲ್ಲಿ ಆಗಸ್ಟ್ 30 ರಂದು ಮೈಸೂರಿನಲ್ಲಿ (Mysore) ಕಾರ್ಯಕ್ರಮ ನಡೆಸಿ ನೋಂದಣಿ ಆಗಿರುವ ಎಲ್ಲಾ ಮಹಿಳೆಯರ ಖಾತೆಗೂ ಹಣ ವರ್ಗಾವಣೆ ಮಾಡಲು ಸರ್ಕಾರ ಪ್ಲಾನ್ ಮಾಡಿಕೊಂಡಿದೆ.
ನೀವು ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದರೆ ನಿಮ್ಮ ಯಾವ ಬ್ಯಾಂಕ್ ಖಾತೆಗೆ ಹಣ ಬರುತ್ತದೆ ಎನ್ನುವುದನ್ನು ಮೊಬೈಲ್ ಮೂಲಕ ಚೆಕ್ ಮಾಡಿ ತಿಳಿದುಕೊಳ್ಳಬಹುದು.
1. ಈಗಾಗಲೇ ಅನೇಕರು ಅನ್ನಭಾಗ್ಯ ಯೋಜನೆ (Annabhagya amount) ಹೆಚ್ಚುವರಿ ಅಕ್ಕಿ ಹಣವನ್ನು ಪಡೆದಿದ್ದಾರೆ. ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ಗೆ ಭೇಟಕೊಟ್ಟು DBT ಸ್ಟೇಟಸ್ ಚೆಕ್ ಮಾಡುವ ಮೂಲಕ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಿರುವ ಬ್ಯಾಂಕ್ ಮಾಹಿತಿಯನ್ನು ಪಡೆದುಕೊಳ್ಳಬಹುದು. ಗೃಹಲಕ್ಷ್ಮಿ ಯೋಜನೆ ಹಣ ಕೂಡ ನೀವು ಅನ್ನ ಭಾಗ್ಯ ಯೋಜನೆ ಹಣ ಪಡೆದಿದ್ದ ಬ್ಯಾಂಕ್ ಅಕೌಂಟ್ ಗೆ ವರ್ಗಾವಣೆ ಆಗುತ್ತದೆ.
2. ನೀವು UIDAI ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ನಿಮ್ಮ ಆಧಾರ್ ಕಾರ್ಡ್ ಯಾವ ಬ್ಯಾಂಕ್ ಖಾತೆಗೆ ಲಿಂಕ್ ಆಗಿ, NPCI ಮ್ಯಾಪಿಂಗ್ (Aadhar Seeding, NPCI mapping ) ಆಗಿದೆ ಎಂದು ಚೆಕ್ ಮಾಡಿ ನೋಡಿ, ನಿಮ್ಮ ಆಧಾರ್ ಕಾರ್ಡ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿರುವ ಅಕೌಂಟಿಗೆ ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆ ಆಗುತ್ತದೆ.