ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ವತಿಯಿಂದ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಣೆ ಆಗಿದೆ. ಈ ಹುದ್ದೆಗಳಿಗೆ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಯ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಅಧಿಸೂಚನೆಯಲ್ಲಿರುವ ಅಂಶಗಳನ್ನು ಓದಿಕೊಂಡು ಅರ್ಥೈಸಿಕೊಳ್ಳಬೇಕು.
ಅಧಿಸೂಚನೆಯಲ್ಲಿರುವ ಅರ್ಹತೆಗಳನ್ನು ಹೊಂದಿದ್ದ ಪಕ್ಷದಲ್ಲಿ ಅರ್ಜಿ ಸಲ್ಲಿಸಿ ಪರೀಕ್ಷೆ ಎದುರಿಸುವ ಮೂಲಕ ಹುದ್ದೆ ಪಡೆದುಕೊಳ್ಳಬಹುದು. ಈ ಅಂಕಣದಲ್ಲೂ ಸಹ ಈ ಹುದ್ದೆಗಳ ಬಗ್ಗೆ ಆಸಕ್ತಿ ಇರುವವರ ಅನುಕೂಲಕ್ಕಾಗಿ ಹುದ್ದೆಗಳ ಕುರಿತು ಅಧಿಸೂಚನೆಯಲ್ಲಿರುವ ಪ್ರಮುಖ ಅಂಶಗಳನ್ನು ತಿಳಿಸುವ ಪ್ರಯತ್ನವನ್ನು ಮಾಡಿದ್ದೇವೆ.
ಹುದ್ದೆಗಳು:-
● ಶೀಘ್ರಲಿಪಿದಾರರು ಗ್ರೇಡ್ 3
● ಬೆರಳಚ್ಚುಗಾರರು
● ಸೇವಕರು
ಉದ್ಯೋಗ ಸ್ಥಳ:- ಮೈಸೂರು ಜಿಲ್ಲಾ ನ್ಯಾಯಾಲಯ, ಮೈಸೂರು.
ಒಟ್ಟು ಹುದ್ದೆಗಳ ಸಂಖ್ಯೆ:- 59.
● ಶೀಘ್ರಲಿಪಿದಾರರು ಗ್ರೇಡ್ 3 – 11
● ಬೆರಳಚ್ಚುಗಾರರು – 03
● ಸೇವಕರು – 45
ವೇತನ ಶ್ರೇಣಿ:-
● ಶೀಘ್ರಲಿಪಿದಾರರು ಗ್ರೇಡ್ 3 – 27,650 ದಿಂದ 52,650.
● ಬೆರಳಚ್ಚುಗಾರರು – 21,400 ದಿಂದ 42,000
● ಸೇವಕರು – 17,000 ದಿಂದ 28,950
ಶೈಕ್ಷಣಿಕ ವಿದ್ಯಾರ್ಹತೆ:-
● ಶೀಘ್ರಲಿಪಿಗಾರರು ಗ್ರೇಡ್ 3
1. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೋಮೋ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನವಾದ ವಿದ್ಯಾರ್ಹತೆ ಹೊಂದಿರಬೇಕು.
2. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (typewriting senior) ಕನ್ನಡ ಹಾಗೂ ಆಂಗ್ಲ ಶೀಘ್ರಲಿಪಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ (shorthand senior) ಅಥವಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
● ಬೆರಳಚ್ಚುಗಾರರು:-
1. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೋಮೋ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನವಾದ ವಿದ್ಯಾರ್ಹತೆ ಹೊಂದಿರಬೇಕು.
2. ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (typewriting senior) ಅಥವಾ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.
●ಸೇವಕರು:-
ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದವರು ಅಥವಾ ತತ್ಸಮಾನವಾದ ವಿದ್ಯಾರ್ಹತೆ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಯೋಮಿತಿ:-
● ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕಡ್ಡಾಯವಾಗಿ ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು.
● SC&ST ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು.
● 2A, 2B, 3A, 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು.
● ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು.
ಆಯ್ಕೆ ವಿಧಾನ:-
● ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅವರು ಶೈಕ್ಷಣಿಕ ಪರೀಕ್ಷೆಗಳಲ್ಲಿ ಗಳಿಸಿರುವ ಶೇಕಡವಾರು ಅಂಕಗಳು ಮತ್ತು ಉಕ್ತಲೇಖನವನ್ನು ಅನುಲಿಪಿ ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಶೇಕಡವಾರು ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
● ಸೇವಕರು ಹುದ್ದೆಗಳಿಗೆ SSLC ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:-
● ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 200 ರೂ.
● 2A,2B,3A,3B ಅಭ್ಯರ್ಥಿಗಳಿಗೆ 100ರೂ.
● SC&ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ:-
● ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಈ ರೀತಿ ಆನ್ಲೈನ್ ಮೂಲಕ.
● ಆಫ್ಲೈನ್ನಲ್ಲಿ ಸಲ್ಲಿಸುವುದಾದರೆ ನ್ಯಾಯಾಲಯದ ವೆಬ್ಸೈಟ್ ಇಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 05 ಜೂನ್, 2023.
● ಅರ್ಜಿ ಸಲ್ಲಿಸಲು ಕೊನೆ ದಿನಾಂಕ – 04 ಜುಲೈ, 2023.
● ಶುಲ್ಕ ಪಾವತಿಗೆ ಕೊನೆ ದಿನಾಂಕ – 08 ಜುಲೈ, 2023.