ದೇಶದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಭಾರತದ ಹಲವು ಭಾಗಗಳ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿರುವ (EMRS Recuitments) 4062 ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನ ಮಾಡಲಾಗಿದೆ. ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸೇರಿ ಒಟ್ಟು ಖಾಲಿ ಇರುವ ಎಲ್ಲಾ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಇದರ ಪೈಕಿ 669 ಹಾಸ್ಟೆಲ್ ವಾರ್ಡನ್ (Hostel wardens) ಪೋಸ್ಟ್ ಗಳು ಖಾಲಿಯಿವೆ. ಈ ಹುದ್ದೆಗಳಿಗೆ ಅರ್ಹತೆ ಇರುವ ಎಲ್ಲಾ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಲು ಪ್ರಯತ್ನಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಬಗ್ಗೆ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುವ ಪ್ರಯತ್ನ ಮಾಡುತ್ತಿದ್ದೇವೆ.
ಉದ್ಯೋಗ ಸಂಸ್ಥೆ:- ಏಕಲವ್ಯ ಮಾದರಿ ವಸತಿ ಶಾಲೆ
ಉದ್ಯೋಗ ಸ್ಥಳ:- ಭಾರತದಾತ್ಯಂತ
ಹುದ್ದೆಯ ಹೆಸರು:- ಹಾಸ್ಟೆಲ್ ವಾರ್ಡನ್ (ಪುರುಷ ಮತ್ತು ಮಹಿಳೆ).
ಒಟ್ಟು ಹುದ್ದೆಗಳ ಸಂಖ್ಯೆ:- 669
● ಹಾಸ್ಟೆಲ್ ವಾರ್ಡನ್ ಪುರುಷ – 335
● ಹಾಸ್ಟೆಲ್ ವಾರ್ಡನ್ ಮಹಿಳೆ – 334
ವೇತನ ಶ್ರೇಣಿ:- 29,200 ರಿಂದ 92,300 ಮಾಸಿಕವಾಗಿ…
ಶೈಕ್ಷಣಿಕ ವಿದ್ಯಾರ್ಹತೆ:-
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:-
● ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 21 ವರ್ಷಗಳು
● ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು.
ವಯೋಮಿತಿ ಸಡಿಲಿಕೆ:-
● OBC ಅಭ್ಯರ್ಥಿಗಳಿಗೆ 3 ವರ್ಷಗಳು
● SC/ST ಅಭ್ಯರ್ಥಿಗಳಿಗೆ 5 ವರ್ಷಗಳು
● ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಶುಲ್ಕ:-
● ಆನ್ಲೈನ್ ನಲ್ಲಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.
● SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
● ಉಳಿದ ಅಭ್ಯರ್ಥಿಗಳಿಗೆ 1000ರೂ.
ಅರ್ಜಿ ಸಲ್ಲಿಸುವ ವಿಧಾನ:-
● ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಏಕಲವ್ಯ ಮಾದರಿ ವಸತಿ ಶಾಲೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು.
● ಅರ್ಜಿ ಫಾರಂ ಕಾಲಂನಲ್ಲಿ ಕೇಳುವ ವಿವರಗಳಲ್ಲಿ ಸರಿಯಾದ ಮಾಹಿತಿಗಳನ್ನು ತುಂಬಿಸಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
● ಅರ್ಜಿ ಶುಲ್ಕ ಪಾವತಿಯಾದ ಬಳಿಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ತಿಗೊಳ್ಳುತ್ತದೆ.
● ಭವಿಷ್ಯದ ಬಳಕೆಗಾಗಿ ಸಲ್ಲಿಸಿರುವ ರೆಫರೆನ್ಸ್ ನಂಬರನ್ನು ಬರೆದು ಇಟ್ಟುಕೊಳ್ಳಬೇಕು ಅಥವಾ ಅರ್ಜಿ ಸಲ್ಲಿಕೆ ಪತ್ರವನ್ನು ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಬೇಕು.
ಸಲ್ಲಿಸಬೇಕಾದ ಪ್ರಮುಖ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಮೊಬೈಲ್ ಸಂಖ್ಯೆ ಮತ್ತು e-mail ID
● ಆಧಾರ್ ಕಾರ್ಡ್
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ನಿವಾಸ ದೃಢೀಕರಣ ಪತ್ರ
● ಇನ್ನಿತರ ಪ್ರಮುಖ ದಾಖಲೆಗಳು.
ಆಯ್ಕೆ ವಿಧಾನ:-
● ಲಿಖಿತ ಪರೀಕ್ಷೆ
● ಸಂದರ್ಶನ
● ದಾಖಲೆಗಳ ಪರಿಶೀಲನೆ.
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 18.07.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 18.08.2023
● ಅರ್ಜಿ ಶುಲ್ಕ ಪಾವತಿಗೆ ಕಡೇ ದಿನಾಂಕ – 18.08.2023.