ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (Industrial Development Bank of India) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ (IDBI Recruitment) ಅರ್ಹರಿಂದ ಅರ್ಜಿ ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಉದ್ಯೋಗ ಮಾಡಲು ಬಯಸುತ್ತಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಯಹುದ್ದೆಗಳಿಗೆ ದೇಶದಾದ್ಯಂತ ಇರುವ ಯಾವುದೇ ನಿರುದ್ಯೋಗ ವ್ಯಕ್ತಿ ಅಥವಾ ಈಗಷ್ಟೇ ವಿದ್ಯಾಭ್ಯಾಸ ಮುಗಿಸಿರುವ ಯುವ ಜನತೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಬಗ್ಗೆ ಕೆಲ ಪ್ರಮುಖ ಅಂಶಗಳನ್ನು ತಿಳಿದುಕೊಂಡಿರಬೇಕು ಹಾಗಾಗಿ ಈ ಅಂಕಣದಲ್ಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು? ಮನದಂಡಗಳೇನು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು? ವೇತನ ಶ್ರೇಣಿ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಪ್ರಮುಖ ಅಂಶಗಳ ಬಗ್ಗೆ ತಿಳಿಸುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI)
ಹುದ್ದೆಗಳ ಹೆಸರು:- ಜೂನಿಯರ್ ಅಸಿಸ್ಟೆಂಟ್ (Junior Assistant)
ಒಟ್ಟು ಹುದ್ದೆಗಳ ಸಂಖ್ಯೆ:- 500
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ರೂ.14,000 ದಿಂದ ರೂ.65,000 ವೇತನ ಸಿಗುತ್ತದೆ.
ಈ ಸುದ್ದಿ ಓದಿ:- ಮನೆ ಕಟ್ಟಿಸುವಾಗ ಯಾವ ಯಾವ ಪರ್ಮಿಷನ್ ತೆಗೆದುಕೊಳ್ಳಬೇಕು ಗೊತ್ತಾ.?
ಶೈಕ್ಷಣಿಕ ವಿದ್ಯಾರ್ಹತೆ:-
ನೇಮಕಾತಿ ಅಧಿಸೂಚನೆ ಪ್ರಕಾರ ಭಾರತದಲ್ಲಿ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 20 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 24 ವರ್ಷಗಳು.
ವಯೋಮಿತಿ ಸಡಿಲಿಕೆ:-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ 05 ವರ್ಷಗಳು
* ಒಬಿಸಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 03 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.
ಈ ಸುದ್ದಿ ಓದಿ:- ಮೆಡಿಸನ್ ಇಲ್ಲದೆ ಕ್ಯಾನ್ಸರ್ ವಾಸಿ ಮಾಡಬಹುದು.! ಒಮ್ಮೆ ಈ ಮಾಹಿತಿ ನೋಡಿ…
ಅರ್ಜಿ ಸಲ್ಲಿಸುವ ವಿಧಾನ:-
* https://ibpsonline.ibps.in/idbijan24/ ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು
* ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ, ಬೇಕಿದ್ದಲ್ಲಿ ಮತ್ತೊಮ್ಮೆ ಅಧಿಸೂಚನೆ ಓದಿಕೊಳ್ಳಿ
* ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡಿ ಓಪನ್ ಆಗುವ ಫಾರ್ಮೆಟ್ ನಲ್ಲಿ ನಿಮ್ಮ ವೈಯಕ್ತಿಕ ವಿವರಗಳನ್ನು ಸರಿಯಾಗಿ ನಮೂದಿಸಿ ಮತ್ತು ಕೇಳಲಾಗುವ ಪೂರಕ ದಾಖಲೆಗಳ ಸಂಖ್ಯೆಗಳನ್ನು ನಮೂದಿಸಿ ಅಥವಾ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
* ಅರ್ಜಿ ಶುಲ್ಕ ಪಾವತಿ ಮಾಡಿ ತಪ್ಪದೆ ಇ-ರಸೀದಿ ಪಡೆದುಕೊಳ್ಳಿ ಮತ್ತು ಕೊನೆಯಲ್ಲಿ ಅರ್ಜಿ ಸಲ್ಲಿಕೆ ಪೂರ್ತಿಯಾದ ಮೇಲೆ ತಪ್ಪದೇ ಅರ್ಜಿ ಸ್ವೀಕೃತಿ ಪಡೆದುಕೊಳ್ಳಿ. ಭವಿಷ್ಯದಲ್ಲಿ ಇವೆರಡನ್ನು ಕೂಡ ಕೇಳುತ್ತಾರೆ.
ಈ ಸುದ್ದಿ ಓದಿ:- ಪಿಂಚಣಿ ಹಣ ನಿಯಮ ಬದಲಾವಣೆ ಇನ್ನು ಮುಂದೆ 60 ವರ್ಷ ಮೇಲ್ಪಟ್ಟವರ ಪಿಂಚಣಿ 5% ರಷ್ಟು ಹೆಚ್ಚಳ…
ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿ ಮಾಡಬೇಕು
* SC / ST / PWD ಅಭ್ಯರ್ಥಿಗಳಿಗೆ ರೂ.200
* ಇತರ ಅಭ್ಯರ್ಥಿಗಳಿಗೆ ರೂ.1000
ಆಯ್ಕೆ ವಿಧಾನ:-
* ಕಂಪ್ಯೂಟರೈಜ್ ಅನ್ಲೈನ್ ಪರೀಕ್ಷೆ
* ದಾಖಲೆಗಳ ಪರಿಶೀಲನೆ
* ಸಂದರ್ಶನ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – 12 ಫೆಬ್ರವರಿ, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 26 ಫೆಬ್ರವರಿ, 2024
* ಆನ್ಲೈನ್ ನಲ್ಲಿ ಟೆಸ್ಟ್ ನಡೆಯುವ ದಿನಾಂಕ – 17 ಮಾರ್ಚ್, 2024.