ಕಳೆದ ಒಂದು ವರ್ಷದಿಂದ ಅದರಲ್ಲೂ ನೂತನ ಸರ್ಕಾರ ಜಾರಿಯಾದ ಮೇಲೆ ಕಂದಾಯ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಪುಸ್ತುತವಾಗಿ ಕಂದಾಯ ಸಚಿವರಾಗಿರುವ ಕೃಷ್ಣ ಬೈರೇಗೌಡ ರವರು (Minister Krishna Bairegowda) ಅಧಿಕಾರ ವಹಿಸಿಕೊಂಡ ನಂತರ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ನಿಯಮಗಳ ಬದಲಾವಣೆ.
ಕೆಲ ನಿಯಮಗಳಿಗೆ ತಿದ್ದುಪಡಿ ಕೂಡ ತಂದಿದ್ದಾರೆ ಮತ್ತು ಜನಸಾಮಾನ್ಯರಿಗೆ ಕಂದಾಯ ಇಲಾಖೆಯ ಎಲ್ಲಾ ಸೇವೆಗಳು ಶೀಘ್ರವಾಗಿ ಮತ್ತು ಸಮಯಕ್ಕೆ ಸರಿಯಾಗಿ ರೈತರಿಗೆ ತಲುಪುವಂತೆ ಮಾಡಬೇಕು ಎಂದು ಅನೇಕ ಕ್ರಮ ಕೈಗೊಂಡಿದ್ದಾರೆ.
ಈಗ ಅದೇ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟು ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಜನ ಸಾಮಾನ್ಯರ ಎಲ್ಲಾ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸಲು ಅನುಕೂಲವಾಗುವಂತೆ ಸದ್ಯದಲ್ಲೇ ರಾಜ್ಯಾದ್ಯಂತ ಕಂದಾಯ ಅದಾಲತ್ ಗೆ (Adalath) ಮರುಚಾಲನೆ ನೀಡಲು ಇಲಾಖೆ ಮುಂದಾಗಿದೆ.
ಈ ಸುದ್ದಿ ಓದಿ:-ಈ ಬೆಲೆ ಬೆಳೆದರೆ ಎಕರೆಗೆ 30 ಲಕ್ಷ ಆದಾಯ ಗ್ಯಾರಂಟಿ.!
ಇದರ ಕುರಿತು ಕಂದಾಯ ಸಚಿವರೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ಕಂದಾಯ ಅದಾಲತ್ ಕಾರ್ಯಕ್ರಮಕ್ಕೆ ಮರುಚಾಲನೆ ನೀಡುವ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರವರು ಸೋಮವಾರ ವಿಕಾಸಸೌಧದ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಸರಕಾರದ ಆದೇಶದಲ್ಲಿ ಗಣಕೀಕೃತ ಪಹಣಿಗಳಲ್ಲಿರುವ ಲೋಪದೋಷ ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಆಂದೋಲನ ಕೈಗೊಳ್ಳಬೇಕು ಮತ್ತು ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಸೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರಿಸಿಕೊಂಡು ಬರಲಾಗುತ್ತಿದೆ.
ಅದರಂತೆ ಅಧಿಕಾರ ಪ್ರತ್ಯಾಯೋಜನೆಯ ಕಳೆದ ಡಿಸೆಂಬರ್ 31ಕ್ಕೆ ಮುಕ್ತಾಯಗೊಂಡಿದೆ. ಅದಾಲತ್ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ಅವಧಿ ವಿಸ್ತರಿಸಲಾಗಿದೆ. ಸದ್ಯದಲ್ಲೇ ಅದಾಲತ್‌ನ ದಿನಾಂಕ ಘೋಷಿಸಲಾಗುವುದು ಎಂದು ಹೇಳಿದ್ದಾರೆ. ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರರು, ಉಪತಹಶೀಲ್ದಾರರು, ಗ್ರಾಮ ಪಂಚಾಯಿತಿಯ ಸದಸ್ಯರು ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.
ಈ ಸುದ್ದಿ ಓದಿ:- ವಿದ್ಯಾಸಿರಿ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ಸ್ಕಾಲರ್ಷಿಪ್ ಪಡೆಯಿರಿ.!
ಈ ಅದಾಲತ್ ಕಾರ್ಯಕ್ರಮದಲ್ಲಿ ರೈತರು ಪಹಣಿ ಪತ್ತ ಸೇರಿದಂತೆ ಜಮೀನಿನ ರೆಕಾರ್ಡ್ ಗಳಲ್ಲಿ ಹೆಸರಿನ ವ್ಯತ್ಯಾಸಗಳಾಗಿದ್ದರೆ ತಿದ್ದುಪಡಿ ಮಾಡಿಸಿಕೊಳ್ಳಬೇಕು ಮತ್ತು ತಾವು ಉಳಿಮೆ ಮಾಡುತ್ತಿರುವ ಜಮೀನು ಇನ್ನು ಮೃ’ತ ಹೊಂದಿರುವ ಪೂರ್ವಿಕರ ಹೆಸರಿನಲ್ಲಿ ಇದ್ದರೆ ಅದನ್ನು ಬದಲಾಯಿಸಿಕೊಳ್ಳಬೇಕು ಎಂದು ಕಂದಾಯ ಇಲಾಖೆ ಸಚಿವರು ತಿಳಿಸಿದ್ದಾರೆ.
ಯಾಕೆಂದರೆ ಈ ರೀತಿ ತಿದ್ದುಪಡಿ ಮಾಡಿಸಿಕೊಳ್ಳದಿದ್ದರೆ ಅಥವಾ ಹೆಸರಿನಲ್ಲಿ ವ್ಯತ್ಯಾಸ ಆಗಿರುವುದನ್ನು ಆಧಾರ್ ಕಾರ್ಡ್ ನಲ್ಲಿ ಇರುವಂತೆ ತಿದ್ದುಪಡಿ ಮಾಡಿಸಿಕೊಳ್ಳದೆ ಹೋದರೆ ರೈತರಿಗೆ ಸರ್ಕಾರದಿಂದ ಸಿಗುವ ಯಾವುದೇ ಯೋಜನೆಗಳ ಅನುದಾನ ಸಿಗುವುದಿಲ್ಲ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಥವಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಸಬ್ಸಿಡಿ ರೂಪದಲ್ಲಿ ಸಿಗುವ ಬಿತ್ತನೆ ಬೀಜಗಳು, ರಸಗೊಬ್ಬರ, ಪೈಪ್ ಗಳು ಮತ್ತು ಕಡಿಮೆ ಬಡ್ಡಿದರಕ್ಕೆ ಸಿಗುವ ಕೃಷಿ ಯಂತ್ರೋಪಕರಣಗಳು, ಕೃಷಿ ಸಾಲ ಇನ್ನು ಮುಂತಾದ ರೈತರಿಗಾಗಿ ರೂಪಿಸಿರುವ ಯಾವುದೇ ಯೋಜನೆ ನೆರವು ಕೂಡ ರೈತನ ಹೆಸರಿನಲ್ಲಿ ಜಮೀನು ಇರದೆ ಇದ್ದರೆ ಅಥವಾ ಪಹಣಿ ಪತ್ರ ಮತ್ತು ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯಲ್ಲಿ ಒಂದೇ ರೀತಿ ಹೆಸರು ಇಲ್ಲದಿದ್ದರೆ ಸಿಗುವುದಿಲ್ಲ.
ಈ ಸುದ್ದಿ ಓದಿ:- ಗೃಹ ಜ್ಯೋತಿ ಉಚಿತ ಕರೆಂಟ್ ಬಳಸುತ್ತಿರುವವರಿಗೆ ಬಿಗ್ ಅಪ್ಡೇಟ್.!
ಹಾಗಾಗಿ ರೈತರು ತಪ್ಪದೇ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಿ . ಬಲವಾದ ಮೂಲಗಳ ಮಾಹಿತಿ ಪ್ರಕಾರ ಫೆಬ್ರವರಿ ತಿಂಗಳಲ್ಲಿಯೇ ಈ ಅದಾಲತ್ ಕಾರ್ಯಕ್ರಮ ನಡೆಯಲಿದೆ, ಈಗ ಕುರಿತು ಹೆಚ್ಚಿನ ಮಾಹಿತಿ ಬೇಕಿದ್ದರೆ ಹತ್ತಿರದ ಗ್ರಾಮ ಪಂಚಾಯಿತಿ ಅಥವಾ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸಿ.