Deprecated: strtolower(): Passing null to parameter #1 ($string) of type string is deprecated in /home/u302298408/domains/rishithepower.com/public_html/wp-content/plugins/taboola/simple_html_dom.php on line 712
ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ (Government job Aspirants) ಸಿಹಿ ಸುದ್ದಿ, ಕೇಂದ್ರ ಸರ್ಕಾರದ (Central Government) ವತಿಯಿಂದ ಈಗ ಮತ್ತೊಂದು ಅಧಿಸೂಚನೆ ಹೊರಬಿದ್ದಿದೆ. ಆದಾಯ ತೆರಿಗೆ ಇಲಾಖೆಯು ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ಪ್ರಕಟಣೆ ಹೊರಡಿಸಿದೆ (Incometax department recruitment). ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ನೇಮಕಾತಿಗೆ ಸಂಬಂಧ ಪಟ್ಟ ಪ್ರಮುಖ ಅಂಶಗಳ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಆದಾಯ ತೆರಿಗೆ ಇಲಾಖೆ (Income Tax Department)
ಹುದ್ದೆಯ ಹೆಸರು:-
* ಆದಾಯ ತೆರಿಗೆಯ ಇನ್ಸ್ಪೆಕ್ಟರ್
* ಸ್ಟೆನೋಗ್ರಾಫರ್
* ತೆರಿಗೆ ಸಹಾಯಕ
* ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ
* ಕ್ಯಾಂಟೀನ್ ಅಟೆಂಡೆಂಟ್
ಹುದ್ದೆಗಳ ವಿವರ:-
* ಆದಾಯ ತೆರಿಗೆಯ ಇನ್ಸ್ಪೆಕ್ಟರ್ – 14 ಹುದ್ದೆಗಳು
* ಸ್ಟೆನೋಗ್ರಾಫರ್ – 18 ಪೋಸ್ಟ್ಗಳು
* ತೆರಿಗೆ ಸಹಾಯಕ – 119 ಹುದ್ದೆಗಳು
* ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ – 137 ಹುದ್ದೆಗಳು
* ಕ್ಯಾಂಟೀನ್ ಅಟೆಂಡೆಂಟ್ – 3 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 291 ಹುದ್ದೆಗಳು
ಉದ್ಯೋಗ ಸ್ಥಳ:- ಮಹಾರಾಷ್ಟ್ರ(ಮುಂಬೈ)
ವೇತನ ಶ್ರೇಣಿ:- ಈ ನೇಮಕಾತಿಯಲ್ಲಿ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಅವರವರ ಹುದ್ದೆಗಳಿಗೆ ಅನುಸಾರವಾಗಿ ಮಾಸಿಕವಾಗಿ ರೂ.18,000 ದಿಂದ ರೂ.1,42,400 ಸಿಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:-
* ಆದಾಯ ತೆರಿಗೆಯ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು
* ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು
* ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು
* ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 12ನೇ ತರಗತಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ತೆರಿಗೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:-
* ಇನ್ಸ್ಪೆಕ್ಟರ್ ಆಫ್ ಇನ್ಕಮ್ ಟ್ಯಾಕ್ಸ್ ಹುದ್ದೆಗಳಿಗೆ 18 ರಿಂದ 30 ವಯೋಮಾನದ ಒಳಗಿನವರು ಅರ್ಜಿ ಸಲ್ಲಿಸಬಹುದು
* ಸ್ಟೆನೋಗ್ರಾಫರ್ ಹುದ್ದೆಗಳಿಗೆ 18 ರಿಂದ 27 ವಯೋಮಾನದ ಒಳಗಿನವರು ಅರ್ಜಿ ಸಲ್ಲಿಸಬಹುದು
* ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ 18 ರಿಂದ 25 ವಯೋಮಾನದ ಒಳಗಿನವರು ಅರ್ಜಿ ಸಲ್ಲಿಸಬಹುದು
* ಕ್ಯಾಂಟೀನ್ ಅಟೆಂಡೆಂಟ್ ಹುದ್ದೆಗಳಿಗೆ 18 ರಿಂದ 25 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದು
* ತೆರಿಗೆ ಸಹಾಯಕ ಹುದ್ದೆಗಳಿಗೆ 18 ರಿಂದ 27 ವರ್ಷ ಒಳಗಿನವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ ಸಡಿಲಿಕೆ:-
* ಕ್ರೀಡಾ ಕೋಟದಡಿ ಅರ್ಜಿ ಸಲ್ಲಿಸುವವರಿಗೆ 5 ವರ್ಷಗಳ ಸಡಿಲಿಕೆ ಇರುತ್ತದೆ
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:-
* https://incometaxmumbai.gov.in ವೆಬ್ ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು
* ಅರ್ಜಿಫಾರಂ ಗಳಲ್ಲಿ ಸ್ವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು, ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು
* ಅರ್ಜಿ ಶುಲ್ಕ ಪಾವತಿ ಮಾಡಿ ತಪ್ಪದೆ ಇ-ರಸೀದಿ ಮತ್ತು ಅರ್ಜಿ ಸಲ್ಲಿಕೆ ಆದ ಬಳಿಕ ಅರ್ಜಿ ಸ್ವೀಕೃತಿ ಪ್ರತಿಯನ್ನು ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇದರ ಅವಶ್ಯಕತೆ ಇರುತ್ತದೆ.
ಆಯ್ಕೆ ವಿಧಾನ:-
* ಮೆರಿಟ್ ಲಿಸ್ಟ್
* ಸ್ಕಿಲ್ ಟೆಸ್ಟ್
* ಸಂದರ್ಶನ
* ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕವೇ ಪಾವತಿ ಮಾಡಬೇಕು
* ಎಲ್ಲ ವರ್ಗದ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ರೂ.200
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 22 ಡಿಸೆಂಬರ್, 2023.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 19 ಜನವರಿ, 2024.