ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸ್ಥಳೀಯ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದರ ಸಲುವಾಗಿ ಇಲಾಖೆ ವತಿಯಿಂದ ಅಧಿಕೃತ ಅಧಿಸೂಚನೆ ಕೂಡ ಬಿಡುಗಡೆ ಮಾಡಲಾಗಿದ್ದು.
ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆ ಹಾಗೂ ಇನ್ನಿತರ ಮಾನದಂಡಗಳು ಏನಿದೆ ಎನ್ನುವ ಮಾಹಿತಿ ಮತ್ತು ಈ ನೇಮಕಾತಿ ಪ್ರಕ್ರಿಯೆ ಕುರಿತು ಅಧಿಸೂಚನೆಯಲಿರುವ ಕೆಲವು ಪ್ರಮುಖ ಅಂಶಗಳ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ.
ಒಟ್ಟು ಹುದ್ದೆಗಳ ಸಂಖ್ಯೆ:- 384 ಹುದ್ದೆಗಳು.
ಹುದ್ದೆಗಳ ವಿವರ:-
* ಅಂಗನವಾಡಿ ಕಾರ್ಯಕರ್ತೆ: 106
* ಅಂಗನವಾಡಿ ಸಹಾಯಕಿ: 278
ಉದ್ಯೋಗ ಸ್ಥಳ:- ತುಮಕೂರು ಜಿಲ್ಲೆಯ ಕೆಲವು ಆಯ್ದ ಗ್ರಾಮಗಳು
ವೇತನ ಶ್ರೇಣಿ:-
ರೂ. 6,600 ರಿಂದ ರೂ. 10,000 ಮಾಸಿಕವಾಗಿ…
ಶೈಕ್ಷಣಿಕ ವಿದ್ಯಾರ್ಹತೆ:-
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
* ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ
ಇತರೆ ಮಾನದಂಡಗಳು:-
* ಕನಿಷ್ಠ 18 ವರ್ಷ ಪೂರೈಸಿರಬೇಕು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು
* ಹುದ್ದೆಗಳು ಖಾಲಿ ಇರುವ ಗ್ರಾಮ ಪಂಚಾಯಿತಿಯಲ್ಲಿ ಅಥವಾ 3km ವ್ಯಾಪ್ತಿ ಒಳಗೆ ಕಾರ್ಯನಿರ್ವಹಿಸುತ್ತಿರುವವರಿಗೆ ಆದ್ಯತೆ ಇರುತ್ತದೆ
* ವಿಧವಾ / ವಿಚ್ಛೇದಿತ ಮಹಿಳೆಯರು ಅಥವಾ ಆತ್ಮಹತ್ಯೆಗೆ ಒಳಗಾದ ರೈತನ ಪತ್ನಿಯರು / ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದರೆ ಅವರಿಗೆ ಆದ್ಯತೆ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:-
* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕೃತ ವೆಬ್ಸೈಟ್ ಆದ https://karnemakaone.kar.nic.in ಕ್ಕೆ ಭೇಟಿ ನೀಡಿ.
* ನೇಮಕಾತಿ ಬಯಸುವ ಜಿಲ್ಲೆ ಆರಿಸಿ ಶಿಶು ಅಭಿವೃದ್ಧಿ ಯೋಜನೆ ಮತ್ತು ನೇಮಕಾತಿ ಬಯಸುವ ಹುದ್ದೆಯನ್ನು ಸೆಲೆಕ್ಟ್ ಮಾಡಿ.
* ನೀವು ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ.
* ಅಪ್ಲಿಕೇಶನ್ ಫಾರ್ಮ್ ತೆರೆಯುತ್ತದೆ.
* ಕೇಳಿರುವ ಎಲ್ಲಾ ವೈಯಕ್ತಿಕ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ ಕೊನೆಯಲ್ಲಿ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.
ಅರ್ಜಿ ಶುಲ್ಕ:- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ…
ಆಯ್ಕೆ ವಿಧಾನ:-
ಕೇಳಿರುವ ಅರ್ಹತಾ ಮಾನದಂಡಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಅಂತಹ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಬೇಕಾಗುವ ದಾಖಲೆಗಳು:-
* ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ SSLC / PUC ಅಂಕಪಟ್ಟಿ.
* ವಾಸಸ್ಥಳ ದೃಢೀಕರಣ ಪತ್ರ.
* ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
* ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ, ಈ ಅಭ್ಯರ್ಥಿಗಳು ಸಂಬಂಧಪಟ್ಟ ಪ್ರಮಾಣ ಪತ್ರ ಸಲ್ಲಿಸುವುದು.
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 10 ಜನವರಿ, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 05 ಫೆಬ್ರವರಿ, 2024.