ಭಾರತದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೂ ಸಿಹಿ ಸುದ್ದಿ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪನಿಯಾದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ 115 ಹುದ್ದೆಗಳಿಗೆ ಡಿಪ್ಲೋಮಾ ಮತ್ತು ತತ್ಸಮಾನ ವಿದ್ಯಾರ್ಹತೆ ಆಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ತರಬೇತಿ ಭತ್ಯೆಯೊಂದಿಗೆ ಅಪ್ರೆಂಟಿಸ್ ಆಗಿ ತರಬೇತಿ ಪಡೆದುಕೊಳ್ಳಲು ಕಂಪನಿ ಅರ್ಜಿ ಆಹ್ವಾನ ಮಾಡಿದೆ. ಇದಕ್ಕೆ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸುವ ಯಾವುದೇ ಪುರುಷ ಅಥವಾ ಮಹಿಳಾ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಆಸಕ್ತಿಕ್ಕಾಗಿ ಹೆಚ್ಚಿನ ವಿವರಗಳು ಈ ರೀತಿ ಇದೆ ನೋಡಿ ಮತ್ತು ಈ ಉಪಯುಕ್ತ ಮಾಹಿತಿಯನ್ನು ತಪ್ಪದೆ ನಿಮ್ಮ ಸ್ನೇಹಿತರ ಜೊತೆಗೂ ಶೇರ್ ಮಾಡಿ.
ಡ್ರೈವಿಂಗ್ ಲೈಸನ್ಸ್ ಇಲ್ಲದವರಿಗೆ ಗುಡ್ ನ್ಯೂಸ್.! ಹೈಕೋರ್ಟ್ ನಿಂದ ಹೊಸ ಆದೇಶ.!
ನೇಮಕಾತಿ ಸಂಸ್ಥೆ:- ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಒಟ್ಟು ಹುದ್ದೆಗಳ ಸಂಖ್ಯೆ:- 115 ಹುದ್ದೆಗಳು
ಹುದ್ದೆಯ ಮಾದರಿ:- ಶಿಶಿಕ್ಷು ಹುದ್ದೆಗಳು (Apprentice)
ಹುದ್ದೆಗಳ ವಿವರ:-
* ಮೆಕ್ಯಾನಿಕಲ್ ಇಂಜಿನಿಯರಿಂಗ್ – 30 ಹುದ್ದೆಗಳು
* ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್, ಕಂಪ್ಯೂಟರ್ ಇಂಜಿನಿಯರಿಂಗ್ – 15 ಹುದ್ದೆಗಳು
* ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಷನ್, ಕಮ್ಯುನಿಕೇಷನ್, ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್ – 30 ಹುದ್ದೆಗಳು
* ಸಿವಿಲ್ ಇಂಜಿನಿಯರಿಂಗ್ – 20 ಹುದ್ದೆಗಳು
* ಮಾಡರ್ನ್ ಆಫೀಸ್ ಮ್ಯಾನೇಜ್‌ಮೆಂಟ್ & ಸೆಕ್ರೆಟೇರಿಯಲ್ ಪ್ರಾಕ್ಟೀಸ್ – 20 ಪೋಸ್ಟ್‌ಗಳು
ವೇತನ ಶ್ರೇಣಿ:-
ತಮ್ಮ ತರಬೇತಿ ಅವಧಿ ಮುಗಿಯುವವರೆಗೂ ಪ್ರತಿ ತಿಂಗಳು 8000 ಸ್ಟೈ ಫೆಂಡ್ ಸಿಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು
ಸಂಬಂಧಪಟ್ಟ ಕ್ಷೇತ್ರದಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು.
ಬ್ಯಾಂಕ್ ಖಾತೆ ಹೊಂದಿರುವ ಎಲ್ಲರಿಗೂ RBI ಖಡಕ್ ಎಚ್ಚರಿಕೆ.! ಖಾತೆಯಲ್ಲಿ ಇಷ್ಟು ಮಿನಿಮಮ್ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ಫಿಕ್ಸ್.!
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ – 16 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ – 23 ವರ್ಷಗಳು
ವಯೋಮಿತಿ ಸಡಿಲಿಕೆ:-
* SC/ST/ ಅಭ್ಯರ್ಥಿಗಳಿಗೆ 5 ವರ್ಷಗಳು
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
* ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು BEL ನ ಅಧಿಕೃತ ವೆಬ್‌ಸೈಟ್ https://bel-india.in ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸಬೇಕು
* ಮೊದಲಿಗೆ ವೆಬ್ಸೈಟ್ ಪ್ರವೇಶಿಸಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ ಅರ್ಥೈಸಿಕೊಳ್ಳಿ
* ನಂತರ ಅರ್ಜಿ ಸಲ್ಲಿಸಲು ಇರುವ ಆಪ್ಷನ್ ಕ್ಲಿಕ್ ಮಾಡಿ ಸ್ವ ವಿವರಗಳನ್ನು ತುಂಬಿಸಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.
ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! SSLC ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!
ಆಯ್ಕೆ ವಿಧಾನ:-
* ಆಯ್ಕೆಯು ಮೆರಿಟ್ ಆಧರಿಸಿ ನಡೆಯುತ್ತಿದೆ
* BEL ಘಾಜಿಯಾಬಾದ್ ನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ಇದರಲ್ಲಿ ಭಾಗವಹಿಸಿ ಅಭ್ಯರ್ಥಿಗಳು ಪಡೆದ ಶೇಕಡಾವಾರು ಅಂಕಗಳ ಮೂಲಕ ನೇಮಕಾತಿ ನಿರ್ಧರಿಸಲಾಗುತ್ತದೆ. * ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಅವರ ನೋಂದಾಯಿತ ಇಮೇಲ್ ವಿಳಾಸಗಳ ಮೂಲಕ ಸೂಚಿಸಲಾಗುತ್ತದೆ.
* ನಂತರ ಅವರ ನೇರ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಗೆ ಹಾಜರಾಗುವ ಮೂಲಕ ನೇಮಕಾತಿ ದೃಢಪಡಿಸಿಕೊಳ್ಳಬಹುದು.
ಅರ್ಜಿ ಶುಲ್ಕ:-
ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಜನವರಿ 1, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 15, 2024
* ಪರೀಕ್ಷೆ ನಡೆಯುವ ದಿನಾಂಕ – ಫೆಬ್ರವರಿ ಮೊದಲನೇ ವಾರದಲ್ಲಿ