ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಅದೇನೆಂದರೆ, ರೇಷ್ಮೆ ಬೆಳೆಗಾರ ಮತ್ತು ರೈತ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಇದು ಖಾಯಂ ಸರ್ಕಾರಿ ಹುದ್ದೆಗಳು ಆಗಿರುತ್ತವೆ. ಈ ಹುದ್ದೆಗಳಿಗೆ ಕರ್ನಾಟಕದಲ್ಲಿರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಿ ಹುದ್ದೆ ಪಡೆದುಕೊಳ್ಳಲು ಪ್ರಯತ್ನಿಸಬಹುದು.
ಆದರೆ ಅರ್ಜಿ ಸಲ್ಲಿಸುವುದಕ್ಕೆ ಕೆಲವೊಂದು ಮಾನದಂಡಗಳನ್ನು ವಿಧಿಸಲಾಗಿದೆ. ವಯಸ್ಸಿನ ಮಿತಿ ಮತ್ತು ಕಡ್ಡಾಯವಾಗಿ ಪಡೆದಿರಲೇಬೇಕಾದ ಶೈಕ್ಷಣಿಕ ವಿದ್ಯಾರ್ಹತೆ ಬಗ್ಗೆ ಮತ್ತು ನೇಮಕಾತಿಗೆ ಸಂಬಂಧಪಟ್ಟ ಸಂಪೂರ್ಣ ವಿವರವನ್ನು ಕೂಡ ತಿಳಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಸುವವರೆಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ನಾವು ಸಹ ಈ ನೇಮಕಾತಿಗೆ ಸಂಬಂಧಪಟ್ಟ ಹಾಗೆ ನೋಟಿಫಿಕೇಶನ್ ನಲ್ಲಿ ಇರುವ ಕೆಲವು ಪ್ರಮುಖ ಅಂಶಗಳ ಬಗ್ಗೆ ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ತಪ್ಪದೆ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಹೆಚ್ಚಿನ ಸ್ನೇಹಿತರ ಜೊತೆ ಹಂಚಿಕೊಳ್ಳಿ.
ಇನ್ಮುಂದೆ ಗೂಗಲ್ ಪೇ, ಫೋನ್ ಪೇ ಮಾಡೋಕೆ ಲಿಮಿಟ್ ಫಿಕ್ಸ್.! ಈ ಲಿಮಿಟ್ ಕ್ರಾಸ್ ಮಾಡಿದರೆ ಕಟ್ ಆಗುತ್ತದೆ ಹೆಚ್ಚು ಹಣ.!
ನೇಮಕಾತಿ ಸಂಸ್ಥೆ:- ರೇಷ್ಮೆ ಬೆಳೆಗಾರ ಮತ್ತು ರೈತ ಸೇವಾ ಸಹಕಾರ ಸಂಘ ನಿಯಮಿತ (Silk Growers and Farmers Service Co-Operative Society).
ಒಟ್ಟು ಹುದ್ದೆಗಳು:- 5 ಹುದ್ದೆಗಳು.
ಹುದ್ದೆಗಳ ವಿವರ:-
* ಕಿರಿಯ ಸಹಾಯಕ
* ಮಾರಾಟ ಗುಮಾಸ್ತ
ಉದ್ಯೋಗ ಸ್ಥಳ:- ಆನೇಕಲ್ (ಬೆಂಗಳೂರು)
ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 21,400 ರಿಂದ 42,000 ವೇತನ ಶ್ರೇಣಿ ಇರುತ್ತದೆ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಸಿಹಿ ಸುದ್ದಿ ಮೊದಲ ಕಂತಿನ ಹಣ 3000 ಜಮೆ.!
ಶೈಕ್ಷಣಿಕ ವಿದ್ಯಾರ್ಹತೆ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಯಾವುದಾದರೂ ಒಂದು ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಲೇಬೇಕು
* ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕಡ್ಡಾಯವಾಗಿ ಕನ್ನಡ ಭಾಷಾ ಜ್ಞಾನ ಹೊಂದಿರಬೇಕು.
* ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ ತರಬೇತಿ ಹಾಗೂ ಜ್ಞಾನ ಹೊಂದಿರಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* SC / ST, ಪ್ರವರ್ಗ – 1ರ ಅಭ್ಯರ್ಥಿಗಳಿಗೆ 5 ವರ್ಷಗಳು
* OBC ಅಭ್ಯರ್ಥಿಗಳಿಗೆ 3 ವರ್ಷಗಳು.
ಅರ್ಜಿ ಸಲ್ಲಿಸುವ ವಿಧಾನ:-
* ಆಫ್ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
* ಈ ಕೆಳಗಿನ ವಿಳಾಸಕ್ಕೆ ಹೋಗಿ ಅರ್ಜಿ ಶುಲ್ಕ ಪಾವತಿಸಿ, ಅರ್ಜಿ ನಮೂನೆ ಸ್ವೀಕರಿಸಿ ವಿವರಗಳನ್ನು ಭರ್ತಿ ಮಾಡಿ, ದಾಖಲೆಗಳ ಪ್ರತಿ ಜೊತೆಗೆ ಅರ್ಜಿ ಸಲ್ಲಿಸಬೇಕು.
ವೃದ್ಯಾಪ, ವಿಧಾವ, ಮನಸ್ವಿನಿ, ಯಾವುದೇ ಪಿಂಚಣಿ ಪಡೆಯುತ್ತಿದ್ದರು ಪೋಸ್ಟ್ ಆಫೀಸ್ ನಿಂದ ಬ್ಯಾಂಕ್ ಗೆ ನೇರ ಹಣ ವರ್ಗಾವಣೆ ಮಾಡುವ ವಿಧಾನ.!
ವಿಳಾಸ:-
ಸದಸ್ಯ ಕಾರ್ಯದರ್ಶಿ,
ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ
ಮುಖ್ಯ ಕಾರ್ಯನಿರ್ವಹಣಾಧಿಕಾರಿ,
ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ,
ಬಸ್ ನಿಲ್ದಾಣ ಪಕ್ಕ, ಸರ್ಜಾಪುರ
ಆನೇಕಲ್ ತಾಲೂಕು,
ಬೆಂಗಳೂರು ನಗರ,
ಬೆಂಗಳೂರು ಜಿಲ್ಲೆ – 562125.
ಅರ್ಜಿ ಶುಲ್ಕ:-
ಅಭ್ಯರ್ಥಿಗಳು ರೂ.1000 ಪಾವತಿಸಿ ಅರ್ಜಿ ನಮೂನೆ ಪಡೆದುಕೊಳ್ಳಬೇಕು
ಆಯ್ಕೆ ವಿಧಾನ:-
* ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ.
* ಲಿಖಿತ ಪರೀಕ್ಷೆಯಲ್ಲಿ ಆಯ್ಕೆ ಆದವರಿಗೆ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆದು ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು
* ನಂತರ ಅವರ ದಾಖಲೆಗಳ ಪರಿಶೀಲನೆ ಮಾಡಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 15 ಜನವರಿ, 2024.