ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಹುದ್ದೆಗಳ ಬಗ್ಗೆ ಕನಸು ಹೊಂದಿರುವಂತೆ ಕೆಲವರಿಗೆ ಬ್ಯಾಂಕಿಂಗ್ ಹುದ್ದೆಗಳನ್ನು ಹೊಂದಬೇಕು ಎನ್ನುವ ಇಚ್ಛೆ ಇರುತ್ತದೆ. ಸಾಮಾನ್ಯವಾಗಿ ಪದವಿ ಮುಗಿಸಿದ ಮೇಲೆ ಪ್ರತಿಯೊಬ್ಬರಿಗೂ ಕೂಡ ಈ ರೀತಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸರ್ಕಾರಿ ಅಥವಾ ಬ್ಯಾಂಕಿಂಗ್ ಹುದ್ದೆಗಳನ್ನು ಪಡೆದುಕೊಳ್ಳಲು ಪ್ರಯತ್ನಿಸುತ್ತಾರೆ.
ನೀವು ಕೂಡ ಅದೇ ಹಾದಿಯಲ್ಲಿ ಇದ್ದರೆ ನಿಮಗೆ ಸಿಹಿ ಸುದ್ದಿ ಇದೆ. ಅದೇನೆಂದರೆ, ಈ ಬಾರಿ ಭಾರತದಾದ್ಯಂತ 8283 ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು SBI ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಅಧಿಕೃತ ಅಧಿಸೂಚನೆ ಕೂಡ ಹೊರ ಬಿದ್ದಿದ್ದು ಅರ್ಜಿ ಸಲ್ಲಿಸಲು ಇಚ್ಚಿಸುವವರಿಗಾಗಿ ಹೆಚ್ಚಿನ ಮಾಹಿತಿ ಹೀಗಿದೆ ನೋಡಿ.
ಉದ್ಯೋಗ ಸಂಸ್ಥೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಒಟ್ಟು ಹುದ್ದೆಗಳ ಸಂಖ್ಯೆ:-
* 8283 (ಭಾರತದಲ್ಲಿ)
* 450 (ಕರ್ನಾಟಕಕ್ಕೆ)
ಹುದ್ದೆಗಳ ವಿವರ:- ಜೂನಿಯರ್ ಅಸೋಸಿಯೇಟ್ಸ್.
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:- ಈ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 17,900 ರಿಂದ 47,920 ವೇತನ ಸಿಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:-
* ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿದ್ಯಾಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
* ಮತ್ತೊಂದು ಅನುಕೂಲತೆ ಏನೆಂದರೆ ಪದವಿಯ ಅಂತಿಮ ವರ್ಷ/ಸೆಮಿಸ್ಟರ್‌ನಲ್ಲಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. ಆದರೆ ಸಂದರ್ಶನ / ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅವರು 31-12-2023 ರಂದು ಅಥವಾ ಅದಕ್ಕೂ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಒದಗಿಸಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 20 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 28 ವರ್ಷಗಳು
ವಯೋಮಿತಿ ಸಡಿಲಿಕೆ:-
* SC / ST ಅಭ್ಯರ್ಥಿಗಳಿಗೆ 5 ವರ್ಷಗಳು
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* PWD ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
https://bank.sbi/web/careers/current-openings ಅಥವಾ https://sbi.co.in/web/careers/current-openings ವೆಬ್ ಸೈಟ್ ಗೆ ಭೇಟಿ ಕೊಡಿ.
* ಅರ್ಜಿ ಲಿಂಕ್ ಕ್ಲಿಕ್ ಮಾಡಿ ಕೇಳಲಾಗುವ ಎಲ್ಲ ವಿವರಗಳನ್ನು ಭರ್ತಿ ಮಾಡಿ, ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
* ಅರ್ಜಿ ಶುಲ್ಕ ಪಾವತಿ ಮಾಡಿರುವ ವಿವರವನ್ನು ಸಲ್ಲಿಸಿ, ಅರ್ಜಿ ಸಲ್ಲಿಕೆ ಯಶಸ್ವಿಯಾದ ಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪತ್ರದ ಪ್ರಿಂಟ್ ಪಡೆದುಕೊಳ್ಳಿ.
ಅರ್ಜಿ ಶುಲ್ಕ:-
* SC/ST, PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ
* ಉಳಿದ ಅಭ್ಯರ್ಥಿಗಳಿಗೆ 750ರೂ.
* ಅರ್ಜಿ ಶುಲ್ಕವನ್ನು ಆನ್ಲೈನಲ್ಲಿಯೇ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
ಆಯ್ಕೆ ವಿಧಾನ:-
* ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೂ ಪ್ರಿಲಿಮಿನರಿ ಪರೀಕ್ಷೆ ಕೊಡಲಾಗುತ್ತದೆ
* ಪ್ರಿಲಿಮಿನರಿ ಪರೀಕ್ಷೆ ಉತ್ತೀಣರಾದವರಿಗೆ ಮುಖ್ಯ ಪರೀಕ್ಷೆ ಇರುತ್ತದೆ
* ಮುಖ್ಯ ಪರೀಕ್ಷೆಯಲ್ಲಿ ಆಯ್ಕೆ ಆದವರನ್ನು ಸಂದರ್ಶನ ಮಾಡಿ, ಅವರ ದಾಖಲೆಗಳನ್ನು ಪರಿಶೀಲನೆ ಮಾಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
* ಕನ್ನಡದಲ್ಲೂ ಈ ಪರೀಕ್ಷೆಗಳನ್ನು ಬರೆಯಲು ಅವಕಾಶ ಇರುತ್ತದೆ.
ಪರೀಕ್ಷಾ ಕೇಂದ್ರಗಳು:- (ಕರ್ನಾಟಕದಲ್ಲಿ)
* ಬಳ್ಳಾರಿ
* ಬೆಂಗಳೂರು
* ಬೆಳಗಾವಿ
* ದಾವಣಗೆರೆ
* ಕಲ್ಬುರ್ಗಿ
* ಹಾಸನ
* ಹುಬ್ಬಳ್ಳಿ
* ಧಾರವಾಡ
* ಮಂಗಳೂರು
* ಮೈಸೂರು
* ಶಿವಮೊಗ್ಗ
* ಉಡುಪಿ
ಪ್ರಮುಖ ದಿನಾಂಕಗಳು:–
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 17 ನವೆಂಬರ್, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 07 ಡಿಸೆಂಬರ್, 2023.
ಬೇಕಾಗುವ ದಾಖಲೆಗಳು:-
* ಇತ್ತೀಚಿನ ಭಾವಚಿತ್ರ ಮತ್ತು ಸಹಿ
* ಮೊಬೈಲ್ ನಂಬರ್ ಮತ್ತು ಇಮೇಲ್ ಐಡಿ
* ಆಧಾರ್ ಕಾರ್ಡ್
* ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ