ಇತ್ತೀಚಿಗೆ ಯುವ ಜನತೆ ಬ್ಯಾಂಕಿಂಗ್ ಸೆಕ್ಟರ್ ನಲ್ಲಿ ಉದ್ಯೋಗ ಮಾಡಲು ಬಯಸುತ್ತಿದ್ದಾರೆ. ಇದಕ್ಕೆ ಅತಿ ದೊಡ್ಡ ಸ್ಪರ್ಧೆ ಇದ್ದರೂ ಕೂಡ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಈ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಲು ವರ್ಷಗಟ್ಟಲೇ ಅಭ್ಯಾಸದಲ್ಲಿ ತಲ್ಲೀನರಾಗಿರುತ್ತಾರೆ. ಪದವಿ ಮುಗಿಸುವ ಅನೇಕ ವಿದ್ಯಾರ್ಥಿಗಳು ಮೊದಲಿಗೆ ಈ ಕ್ಷೇತ್ರದಲ್ಲಿ ಉದ್ಯೋಗ ಇದೆಯೇ ಎಂದು ಹುಡುಕುತ್ತಾರೆ.
ಈಗಾಗಲೇ ಬೇರೆ ಕಡೆ ಉದ್ಯೋಗ ಮಾಡುತ್ತಿದ್ದರು ಈ ರೀತಿ ಬ್ಯಾಂಕ್ ನಲ್ಲಿ ಉದ್ಯೋಗ ಬೇಕು ಎನ್ನುವ ಇಚ್ಛೆ ಯಾವುದಾದರೂ ಕಾರಣದಿಂದ ಉಂಟಾಗಿರುತ್ತದೆ. ಈ ರೀತಿ ಅಭಿಪ್ರಾಯಗಳು ನಿಮಗೂ ಇದ್ದರೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಒಳ್ಳೆಯ ಹುದ್ದೆ ಪಡೆದುಕೊಳ್ಳಲು ಇದೊಂದು ಸದಾವಕಾಶ. IDBI ಬ್ಯಾಂಕ್ ತನ್ನಲ್ಲಿರುವ ಖಾಲಿ ಹುದ್ದೆಗಳ (IDBI Recruitment 2023) ನೇಮಕಾತಿ ಕುರಿತು ಅಧಿಸೂಚನೆಯನ್ನು ಹೊರಡಿಸಿದೆ.
ಮಹಿಳೆಯರಿಗೆ ಪ್ರತಿ ತಿಂಗಳು 2500 ರೂಪಾಯಿ ಹಣ ಹಾಗೂ ಉಚಿತ ಸಿಲಿಂಡರ್ ಘೋಷಣೆ ಮಾಡಿದ ಸೋನಿಯಾ ಗಾಂಧಿ.!
ಈ ಉದ್ಯೋಗಗಳ ಬಗ್ಗೆ ಆಸಕ್ತಿ ಇರುವವರು ಪ್ರಕಟಣೆಯಲ್ಲಿ ಇರುವ ಪ್ರಮುಖ ಅಂಶಗಳ ಬಗ್ಗೆ ತಿಳಿದುಕೊಳ್ಳಲು ಅಂಕಣವನ್ನು ಪೂರ್ತಿಯಾಗಿ ಓದಿ.
ಸಂಸ್ಥೆ:- ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI Bank)
ಒಟ್ಟು ಹುದ್ದೆಗಳ ಸಂಖ್ಯೆ:- 600
ಹುದ್ದೆ ಹೆಸರು:- ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:- 61,400 ರಿಂದ 65,000 ಮಾಸಿಕವಾಗಿ…
ಶೈಕ್ಷಣಿಕ ವಿದ್ಯಾರ್ಹತೆ:- IDBI ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಗೃಹಲಕ್ಷ್ಮಿ ಯೋಜನೆ 2000 ಹಣ ಪಡೆಯದವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ.!
ವಯೋಮಿತಿ
● ಕನಿಷ್ಠ 20 ವರ್ಷಗಳು
● ಗರಿಷ್ಠ 25 ವರ್ಷಗಳು
ವಯೋಮಿತಿ ಸಡಿಲಿಕೆ:-
● SC / ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳು
● OBC ಅಭ್ಯರ್ಥಿಗಳಿಗೆ 3 ವರ್ಷಗಳು.
● ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು.
ಅರ್ಜಿ ಶುಲ್ಕ:-
● SC / ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 200 ರೂ.
● ಉಳಿದ ಅಭ್ಯರ್ಥಿಗಳಿಗೆ 1000ರೂ.
● ಅರ್ಜಿ ಶುಲ್ಕವನ್ನು IDBI ಅಧಿಕೃತ ವೆಬ್ಸೈಟ್ಗೆ ತೆರಳಿ ಆನ್ಲೈನ್ ಪೇಮೆಂಟ್ ವಿಧಾನದ ಮೂಲಕ ಪಾವತಿ ಮಾಡಬೇಕು.
ಕುಡಿತದ ಚಟ ಬಿಡಿಸಲು, ಬೀಡಿ, ಸಿಗರೇಟ್, ತಂಬಾಕು, ಗುಟ್ಕಾ ಅಭ್ಯಾಸ ಬಿಡಿಸಲು ಈ ಮನೆ ಮದ್ದು ಮಾಡಿ.!
ಅರ್ಜಿ ಸಲ್ಲಿಸುವ ವಿಧಾನ:-
● IDBI ವೆಬ್ ಸೈಟ್ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸುವ ಲಿಂಕ್ ಕ್ಲಿಕ್ ಮಾಡಬೇಕು.
● ಎಲ್ಲಾ ವಿವರಗಳನ್ನು ಭರ್ತಿ ಮಾಡಬೇಕು ಪೂರಕ ದಾಖಲೆಗಳ ಕಾಪಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
● ಅರ್ಜಿ ಶುಲ್ಕ ಪಾವತಿ ಮಾಡಿದ ಮೇಲೆ ತಪ್ಪದೆ ಇ-ರಸೀದಿ ಪಡೆದುಕೊಳ್ಳಿ ಮತ್ತು ಅರ್ಜಿ ಸಲ್ಲಿಕೆ ಪೂರ್ತಿಗೊಂಡ ಬಳಿಕ ಅರ್ಜಿ ಸ್ವೀಕೃತಿ ಪ್ರತಿಯನ್ನು ಕೂಡ ಪಡೆದುಕೊಳ್ಳಬೇಕು.
ಆಯ್ಕೆ ವಿಧಾನ :-
● ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.
● ಇದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ಇರುತ್ತದೆ.
● ಕೊನೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡಿ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ.
ಕರ್ನಾಟಕದಲ್ಲಿ ಪರೀಕ್ಷಾ ಕೇಂದ್ರಗಳು:-
● ಬೆಂಗಳೂರು
● ಹಾಸನ
● ಹುಬ್ಬಳ್ಳಿ
● ಮಂಗಳೂರು
● ಮೈಸೂರು
● ಶಿವಮೊಗ್ಗ
● ಬೆಳಗಾವಿ
● ಧಾರವಾಡ
● ಕಲ್ಬುರ್ಗಿ
● ಉಡುಪಿ
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 15.09.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30.09.2023
ಬೇಕಾಗುವ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆ
● ಆಧಾರ್ ಕಾರ್ಡ್
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ.