ರಾಜ್ಯದ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಬಿಗ್ ಅಪ್ ಡೇಟ್ ಇದೆ. ಅದೇನೆಂದರೆ, ಕರ್ನಾಟಕ ರೇಷ್ಮೆ ಮಂಡಳಿ (CSB Recruitment) ಕಡೆಯಿಂದ ಸುಮಾರು 120ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಅಧಿಸೂಚನೆಯಲ್ಲಿರುವಂತಹ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ನೋಟಿಫಿಕೇಶನ್ ನಲ್ಲಿ ತಿಳಿಸಿರುವ ಪ್ರಕಾರವಾಗಿ ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು ಪಡೆದುಕೊಳ್ಳುವುದಕ್ಕೆ ಪ್ರಯತ್ನಿಸಬಹುದು.
ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗಾಗಿ ನೋಟಿಫಿಕೇಶನ್ ನಲ್ಲಿ ಇರುವ ಪ್ರಮುಖ ಅಂಶಗಳಾದ ಹುದ್ದೆ, ಹುದ್ದೆಗಳ ವಿವರ, ಉದ್ಯೋಗ ಸ್ಥಳ, ವೇತನ ಶ್ರೇಣಿ, ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ನಿಗದಿ, ಅರ್ಜಿ ಶುಲ್, ಕ ಆಯ್ಕೆ ವಿಧಾನ ಮತ್ತು ಪ್ರಮುಖ ದಿನಾಂಕಗಳು ಇತ್ಯಾದಿ ಮಾಹಿತಿ ಬಗ್ಗೆ ಈ ಲೇಖನದಲ್ಲಿ ವಿವರಿಸುತ್ತಿದ್ದೇವೆ. ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ನೇಮಕಾತಿ ಸಂಸ್ಥೆ:- ಕೇಂದ್ರೀಯ ರೇಷ್ಮೆ ಮಂಡಳಿ (CSB)
ಹುದ್ದೆ ಹೆಸರು:- ಗ್ರೂಪ್ ಬಿ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 122 ಹುದ್ದೆಗಳು
ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಹುದ್ದೆಗೆ ಸೂಕ್ತವಾದ ಉತ್ತಮ ವೇತನದ ಜೊತೆಗೆ ಇನ್ನಿತರ ಸರ್ಕಾರಿ ಸೌಲಭ್ಯಗಳು ಕೂಡ ಸಿಗುತ್ತವೆ.
ಉದ್ಯೋಗ ಸ್ಥಳ:- ಬೆಂಗಳೂರು …
ಶೈಕ್ಷಣಿಕ ವಿದ್ಯಾರ್ಹತೆ:-
* ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ವಿಜ್ಞಾನ ಅಥವಾ ಕೃಷಿ ವಿಜ್ಞಾನ ಅಥವಾ ಸಂಬಂಧಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು
ವಯೋಮಿತಿ
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* SC / ST / ಪ್ರವರ್ಗ-1 ರ ಅಭ್ಯರ್ಥಿಗಳಿಗೆ 05 ವರ್ಷಗಳು
* OBC ಅಭ್ಯರ್ಥಿಗಳಿಗೆ 03 ವರ್ಷಗಳು
* ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು
* ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ https://exams.nta.ac.in/ICAR/ ಲಿಂಕ್ ಕ್ಲಿಕ್ ಮಾಡಿ
* ನೋಟಿಫಿಕೇಶನ್ ಓದಿಕೊಂಡು ಅರ್ಜಿ ಸಲ್ಲಿಸಲು ಇರುವ ಲಿಂಕ್ ಕ್ಲಿಕ್ ಮಾಡಿ ಫಾರಂ ನಲ್ಲಿ ಕೇಳಿರುವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
* ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ವಿದ್ಯಾರ್ಹತೆ ಇವುಗಳಿಗೆ ಸಂಬಂಧಪಟ್ಟ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅಥವಾ ದಾಖಲೆಗಳ ಸಂಖ್ಯೆಯನ್ನು ನಮೂದಿಸಿ
* ನಿಮ್ಮ ಕೆಟಗರಿಗೆ ಅನ್ವಯವಾಗಿ ಅರ್ಜಿ ಶುಲ್ಕವನ್ನು ಕೂಡ ಪಾವತಿಸಿ ಇ-ರಸೀದಿ ಪಡೆಯಬೇಕು
* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ
ಆಯ್ಕೆ ವಿಧಾನ:-
* ಲಿಖಿತ ಪರೀಕ್ಷೆ
* ನೇರ ಸಂದರ್ಶನ
* ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:-
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.1900
* SC / ST, ಪ್ರವರ್ಗ-1, ತೃತಿಯ ಲಿಂಗ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.975
* OBC ಅಭ್ಯರ್ಥಿಗಳಿಗೆ ರೂ.1,800
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- 11 ಏಪ್ರಿಲ್, 2024.
* ಅರ್ಜಿ ಸಲ್ಲಿಸಲು ಕಡೆಯ ದಿನಾಂಕ:- 11 ಮೇ, 2024.