ಕರ್ನಾಟಕ ರಾಜ್ಯದ ನೂತನ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದು ದೇಶದಾದ್ಯಂತ ಸುದ್ದಿಯಲ್ಲಿದೆ. ಈ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾಗಿ ಕೂಡ ಹಲವು ಕಲ್ಯಾಣ ಯೋಜನೆಗಳನ್ನು ಸರ್ಕಾರ ಕೈಗೆತ್ತಿಕೊಂಡಿದೆ. ಆ ಪ್ರಯುಕ್ತವಾಗಿ ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ ಮಾಡಿರುವ ಕುರಿತು ಅಧಿಕೃತ ಪ್ರಕಟಣೆ ಕೂಡ ಹೊರ ಬಿತ್ತಿದೆ.
ಇಲಾಖೆ ವತಿಯಿಂದ ಮಹಿಳೆಯರಿಗೆ ಯಾವೆಲ್ಲ ಯೋಜನೆಗಳ ಸೌಲಭ್ಯಗಳು ಲಭ್ಯವಿದೆ? ಈ ಯೋಜನೆಗಳಿಂದ ಸಿಗುವ ಪ್ರಯೋಜನಗಳೇನು? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವುದು ಹೇಗೆ? ಹಾಗೂ ಕೊನೆಯ ದಿನಾಂಕ ಎಂದು? ಎನ್ನುವುದರ ಕುರಿತು ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.
ಉದ್ಯೋಗಿನಿ ಯೋಜನೆ:-
1. ಈ ಯೋಜನೆಯಲ್ಲಿ 18 ರಿಂದ 55 ವರ್ಷದ ಒಳಗಿನ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಇಚ್ಚಿಸಿದಲ್ಲಿ ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮಗಳ ಮೂಲಕ ಸಹಾಯಧನ ಪಡೆಯಬಹುದು
ಸಹಾಯಧನ:-
* ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಘಟಕ ವೆಚ್ಚ 1 ಲಕ್ಷದಿಂದ ಗರಿಷ್ಠ 3 ಲಕ್ಷದವರೆಗೆ ಸಾಲ ಲಭ್ಯವಿರುತ್ತದೆ. * ಇದರಲ್ಲಿ 50%ರಷ್ಟು ಸಹಾಯಧನ (ಆದಾಯ ಮಿತಿ 2 ಲಕ್ಷದ ಒಳಗಿರಬೇಕು)
* ಸಾಮಾನ್ಯ ವರ್ಗದ ಮಹಿಳೆಯರಿಗೆ ಘಟಕ ವೆಚ್ಚ ಗರಿಷ್ಠ 3 ಲಕ್ಷದವರೆಗೂ ಸಾಲ ಸೌಲಭ್ಯ, ಇದರಲ್ಲಿ 30%ರಷ್ಟು ಸಹಾಯಧನ (ಆದಾಯದ ಮಿತಿ 1.5 ಲಕ್ಷದ ಒಳಗಿರಬೇಕು).
2. ಚೇತನ ಯೋಜನೆ:-
ಈ ಯೋಜನೆಯಲ್ಲಿ 18 ವರ್ಷ ಮೇಲ್ಪಟ್ಟ ದಮನಿತ ಮಹಿಳೆಯರಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30,000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.
3. ಧನಶ್ರೀ ಯೋಜನೆ:-
ಈ ಯೋಜನೆಯಡಿ 18 ವರ್ಷ ಮೇಲ್ಪಟ್ಟ 60 ವರ್ಷ ಒಳಗಿನ ವಯಸ್ಸಿನ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 30,000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.
4. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:-
ಈ ಯೋಜನೆಯಲ್ಲಿ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ
5. ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:-
1993-94 ಮತ್ತು 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30,000 ಗಳ ಪ್ರೋತ್ಸಾಹ ಧನ ನೀಡಲಾಗುತ್ತದೆ.
ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ವಿಶೇಷ ಸೂಚನೆಗಳು:-
* ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು
* ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟನಲ್ಲಿಯೇ ಅರ್ಜಿ ಸಲ್ಲಿಸಬೇಕು.
* ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
ಈ ಎಲ್ಲ ಯೋಜನೆಗಳಿಗೆ ಅರ್ಜಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ.
* ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ / ಗ್ರಾಮ ಒನ್ / ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
* ಸರ್ಕಾರದ ಕೋಟ ಮತ್ತು ನಿಗಮದ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾನುಭವಿಗಳು ಮಾನ್ಯ ಸಚಿವರು / ಮಾನ್ಯ ಶಾಸಕರು / ಕರ್ನಾಟಕ ಸರ್ಕಾರದ ಮಾನ್ಯ ಅಧ್ಯಕ್ಷರು /ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 22.11.2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22.12.2023
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
* ಜಿಲ್ಲಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಥವಾ ಜಿಲ್ಲೆಯ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರನ್ನು ಸಂಪರ್ಕಿಸಿ
* https://kswdc.karnataka.gov.in ವೆಬ್ಸೈಟ್ ನಲ್ಲಿ ಪಡೆಯಿರಿ.