ಕರ್ನಾಟಕ ರಾಜ್ಯದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೂ ಸಿಹಿ ಸುದ್ದಿ ಇದೆ. ರಾಯಚೂರು ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ನಲ್ಲಿ 63 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗಾಗಿ ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ KMF ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಹುದ್ದೆ ಪಡೆಯಲು ಪ್ರಯತ್ನಿಸಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ಅಧಿಸೂಚನೆಗೆ ಸಂಬಂಧಪಟ್ಟ ಹಾಗೆ ಕೆಲವು ಪ್ರಮುಖ ಅಂಶಗಳ ಬಗ್ಗೆ ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ಉದ್ಯೋಗ ಸಂಸ್ಥೆಯ ಹೆಸರು:- ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್.
ಒಟ್ಟು ಹುದ್ದೆಗಳ ಸಂಖ್ಯೆ:- 63
ಹುದ್ದೆಗಳ ಹೆಸರು:-
* ಉಪ ವ್ಯವಸ್ಥಾಪಕರು
* ಸಹಾಯಕ ವ್ಯವಸ್ಥಾಪಕರು
* ತಾಂತ್ರಿಕ ಅಧಿಕಾರಿ
* ಮಾರುಕಟ್ಟೆ ಅಧಿಕಾರಿ
* ಲೆಕ್ಕಪತ್ರ ಅಧಿಕಾರಿ
* ಸಾರ್ವಜನಿಕ ಸಂಪರ್ಕ ಅಧಿಕಾರಿ
* IM/ಅಂಗಡಿ ಅಧಿಕಾರಿ
* MIS/ಸಿಸ್ಟಮ್ ಅಧಿಕಾರಿ
* ಕಿರಿಯ ತಂತ್ರಜ್ಞ
* ಡೈರಿ ಮೇಲ್ವಿಚಾರಕರು
* ಕ್ಷೇತ್ರ ಸಹಾಯಕ
* ಚಾಲಕ ಮತ್ತು ವಿವಿಧ ಹುದ್ದೆಗಳು.
ಉದ್ಯೋಗ ಸ್ಥಳ:-
* ರಾಯಚೂರು
* ಬಳ್ಳಾರಿ
* ಕೊಪ್ಪಳ
* ವಿಜಯನಗರ.
ವೇತನ ಶ್ರೇಣಿ:-
ಆಯಾ ಹುದ್ದೆಗಳಿಗೆ ಅನುಸಾರ ಮಾಸಿಕವಾಗಿ ರೂ.21,400 ರಿಂದ ರೂ.99,600 ವೇತನ ಸಿಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:-
* ಅರ್ಜಿದಾರರು ಆಯಾ ಹುದ್ದೆಗಳ ಅನುಸಾರ SSLC/ B.Sc/ BVSc/ ಪದವಿ/ PG ಪದವಿ/ MBA/ M.Com/ M.Sc/ BE/ B.tech ವಿದ್ಯಾಭ್ಯಾಸ ಹೊಂದಿರಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು.
ವಯೋಮಿತಿ ಸಡಿಲಿಕೆ:-
* 2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳು.
* Sc/ST ಅಭ್ಯರ್ಥಿಗಳಿಗೆ 5 ವರ್ಷಗಳು.
ಅರ್ಜಿ ಶುಲ್ಕ:-
SC/ST, ಪ್ರವರ್ಗ -1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 750ರೂ. + ಬ್ಯಾಂಕ್ ಶುಲ್ಕ ಪ್ರತ್ಯೇಕ
ಉಳಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 1500ರೂ. + ಬ್ಯಾಂಕ್ ಶುಲ್ಕ ಪ್ರತ್ಯೇಕ.
* ಆನ್ಲೈನ್ ಪೇಮೆಂಟ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಿ ಇ-ರಸೀದಿ ಪಡೆದುಕೊಳ್ಳಬೇಕು.
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
* ಅಧಿಕೃತ ವೆಬ್ಸೈಟ್ www.rbkmul.in ಗೆ ಭೇಟಿ ಕೊಡಿ.
* ಅರ್ಜಿ ಲಿಂಕ್ ಕಾಣುತ್ತದೆ ಕ್ಲಿಕ್ ಮಾಡಿ, ಅದರಲ್ಲಿ ವಿವರಗಳನ್ನು ಭರ್ತಿ ಮಾಡಿ ಕೇಳಲಾಗುವ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
* ಅರ್ಜಿ ಸಲ್ಲಿಕೆ ಪೂರ್ತಿಯಾದ ಬಳಿಕ ತಪ್ಪದೇ ಅರ್ಜಿ ಸ್ವೀಕೃತಿ ಪತ್ರ ಪಡೆದುಕೊಳ್ಳಿ.
ಆಯ್ಕೆ ವಿಧಾನ:-
* ಲಿಖಿತ ಪರೀಕ್ಷೆ
* ಸಂದರ್ಶನ
* ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 07 ನವೆಂಬರ್, 2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 07 ನವೆಂಬರ್, 2023.
ಬೇಕಾಗುವ ದಾಖಲೆಗಳು:-
* ಆಧಾರ್ ಕಾರ್ಡ್
* ಇತ್ತೀಚಿನ ಭಾವಚಿತ್ರ ಮತ್ತು ಸಹಿ
* ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
* ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಇನ್ನಿತರ ಪ್ರಮುಖ ದಾಖಲೆಗಳು.