ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಮತ್ತೊಂದು ಹುದ್ದೆಗಳ ನೇಮಕಾತಿ ಸಲುವಾಗಿ ಅಧಿಸೂಚನೆ ಬಿಡುಗಡೆಯಾಗಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರು (Surveyor) ಗ್ರೂಪ್ ಸಿ ಹುದ್ದೆಗಳ ಭರ್ತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಅಧಿಸೂಚನೆಯಲ್ಲಿ ಸೂಚಿಸಿರುವ ಮಾನದಂಡಗಳನ್ನು ಪೂರೈಸುವ ಕರ್ನಾಟಕದ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಳ್ಳುವ ಸಲುವಾಗಿ ನಾವು ಸಹ ಈ ಅಂಕಣದಲ್ಲಿ ಹುದ್ದೆಗಳ ಕುರಿತಂತೆ ಪ್ರಮುಖ ಸಂಗತಿಗಳಾದ.
ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಉದ್ಯೋಗ ಸ್ಥಳ, ಶೈಕ್ಷಣಿಕ ವಿದ್ಯಾರ್ಹತೆ, ವೇತನ ಶ್ರೇಣಿ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಇತ್ಯಾದಿ ಮಾಹಿತಿಯನ್ನು ತಿಳಿಸುತ್ತಿದ್ದೇವೆ. ತಪ್ಪದೆ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೆ ಹಂಚಿಕೊಳ್ಳಿ.
ಈ ಸುದ್ದಿ ಓದಿ:- ಪ್ರಾಪರ್ಟಿ ಟ್ರಾನ್ಸ್ಫರ್ ಹೇಗೆಲ್ಲಾ ಮಾಡುತ್ತಾರೆ ಗೊತ್ತಾ.? ಮನೆ, ಜಮೀನು, ಸೈಟ್ ಇನ್ನಿತರ ಆಸ್ತಿ ಇದ್ದವರು ನೋಡಿ.!
ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆ:- ಭೂ ಮಾಪಕರು (Surveyor)
ಒಟ್ಟು ಹುದ್ದೆಗಳ ಸಂಖ್ಯೆ:- 364 ಹುದ್ದೆಗಳು
ಹುದ್ದೆಗಳ ವಿವರ:-
* ಉಳಿಕೆ ಮೂಲ ವೃಂದ – 264
* ಹೈದರಾಬಾದ್ ಕರ್ನಾಟಕ ವೃಂದ – 100
ಉದ್ಯೋಗ ಸ್ಥಳ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳು ಕರ್ನಾಟಕದಾದ್ಯಂತ ಯಾವುದೇ ವಿಭಾಗದಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರಬೇಕು
ವೇತನ ಶ್ರೇಣಿ:-
ಮಾಸಿಕವಾಗಿ ರೂ.23,500 ರಿಂದ ರೂ.47,650
ಈ ಸುದ್ದಿ ಓದಿ:-ಸಂಪಿನ ಸೈಜ್ ಎಷ್ಟಿರಬೇಕು.? ಯಾವ ಸಂಪ್ ಹೆಚ್ಚು ಬಾಳಿಕೆ ಬರುತ್ತೆ ನೋಡಿ.!
ಶೈಕ್ಷಣಿಕ ವಿದ್ಯಾರ್ಹತೆ:-
* B.E (ಸಿವಿಲ್) / B.Tec (ಸಿವಿಲ್) / ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
* PUC ಯಲ್ಲಿ ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇಕಡಾ 60% ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅಥವಾ
* ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೆ ಯ ಪದವಿ ಪೂರ್ವ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು. ಅಥವಾ
* ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐಟಿಐ ಇನ್ ಸರ್ವೇ ಟ್ರೇಡ್ ನಲ್ಲಿ ಉತ್ತೀರ್ಣರಾಗಿರಬೇಕು
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು.
ಈ ಸುದ್ದಿ ಓದಿ:-ಸಂಪಿನ ಸೈಜ್ ಎಷ್ಟಿರಬೇಕು.? ಯಾವ ಸಂಪ್ ಹೆಚ್ಚು ಬಾಳಿಕೆ ಬರುತ್ತೆ ನೋಡಿ.!
ವಯೋಮಿತಿ ಸಡಲಿಕೆ:-
* 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳು
* SC / ST, ಪ್ರವರ್ಗ – 1 ರ ಅಭ್ಯರ್ಥಿಗಳಿಗೆ 4 ವರ್ಷಗಳ ಸಡಿಲಿಕೆ ಇರುತ್ತದೆ
ಅರ್ಜಿ ಸಲ್ಲಿಸುವ ವಿಧಾನ:-
https://kpsconline.karnataka.gov.in/HomePage/index.html ಲಿಂಕ್ ಕ್ಲಿಕ್ ಮಾಡುವ ಮೂಲಕ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಹೋಗುತ್ತೀರಿ
* ಅರ್ಜಿ ಸಲ್ಲಿಸಲು ಇರುವ ಲಿಂಕ್ ಕ್ಲಿಕ್ ಮಾಡಿ ಎಲ್ಲಾ ಸ್ವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ
* ಪೂರಕ ದಾಖಲೆಗಳ ಸಂಖ್ಯೆ ನಮೂದಿಸಿ ಅಥವಾ ದಾಖಲೆ ಕಾಪಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
* ನಿಮ್ಮ ವರ್ಗದ ಅನುಸಾರ ವಿಧಿಸಿರುವ ಅರ್ಜಿ ಶುಲ್ಕವನ್ನು ಪಾವತಿಸಿ ಇ-ರಸೀದಿ ಪಡೆಯಿರಿ ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪ್ರತಿಯನ್ನು ಕೂಡ ಪಡೆಯಿರಿ
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ನೇರ ಸಂದರ್ಶನ
* ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಅಥವಾ UPIನಲ್ಲಿ ಪಾವತಿ ಮಾಡಬಹುದು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600
* 2A, 2B, 3A, 3B ಅಭ್ಯರ್ಥಿಗಳಿಗೆ ರೂ.300
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
* SC / ST, ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 11 ಮಾರ್ಚ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10 ಏಪ್ರಿಲ್, 2024
* ಕನ್ನಡ ಭಾಷಾ ಪರೀಕ್ಷೆ ನಡೆಯುವ ದಿನಾಂಕ – 20 ಜುಲೈ, 2024
* ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ – 21 ಜುಲೈ, 2024.