ಕರ್ನಾಟಕ ಸರ್ಕಾರವು ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿ ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಸಾಕಷ್ಟು ಅನುಕೂಲತೆಯನ್ನು ಮಾಡಿಕೊಡುತ್ತಿದೆ. ಕಟ್ಟಡ ಕಾರ್ಮಿಕರಿಗೆ ಮಾತ್ರವಲ್ಲದೆ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮತ್ತು ಅವರ ಭವಿಷ್ಯದ ಬಗ್ಗೆ ಕೂಡ ಮುಂದಾಲೋಚನೆಯನ್ನು ಹೊಂದಿರುವ ಸರ್ಕಾರವು.
ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್, ಶಾಲಾ ಕಿಟ್, ಉಚಿತ ಲ್ಯಾಪ್ ಟಾಪ್ ವಿತರಣೆ ಮುಂತಾದ ಕಾರ್ಯಗಳನ್ನು ಕೈಗೊಂಡಿದೆ. ಹಾಗೆಯೇ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮದುವೆ ಸಂದರ್ಭದಲ್ಲಿ ಕೂಡ ವಿವಾಹ ಪ್ರೋತ್ಸಾಹ ಧನವನ್ನು ನೀಡುತ್ತಿದೆ. ಈ ಪ್ರಯೋಜನಗಳನ್ನು ಪಡೆಯಲು ಕಾರ್ಮಿಕರರು ತಮ್ಮ ಜಿಲ್ಲೆ ಅಥವಾ ತಾಲೂಕಿನಲ್ಲಿ ಬರುವ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಅಥವಾ ಆನ್ಲೈನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
2023-24ನೇ ಸಾಲಿನ ಶೈಕ್ಷಣಿಕ ವರ್ಷವು ಆರಂಭಗೊಂಡಿದೆ, ಈ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕಾರ್ಮಿಕರ ಮಕ್ಕಳುಗಳಿಗೆ ಶಾಲಾ ಕಿಟ್ ಪಡೆಯುವುದಕ್ಕೆ ಅರ್ಜಿ ಸಲ್ಲಿಸಲು ಏಪ್ರಿಲ್ ತಿಂಗಳಿನಲ್ಲಿ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಏಪ್ರಿಲ್ ತಿಂಗಳಿನಿಂದ ಅನೇಕ ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿತ್ತು ನಂತರ ಆ ಗಡುವನ್ನು ಇನ್ನೂ ಹೆಚ್ಚಿಸಿತ್ತು.
ಆ ಸಮಯದಲ್ಲಿ ಇಲಾಖೆ ಕೇಳಿದ ಪೂರಕ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಿದ್ದ ಕಾರ್ಮಿಕರ ಮಕ್ಕಳುಗಳಿಗೆ ಈಗ ಶಾಲಾ ಕಿಟ್ ನೀಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅದರ ಅಂಗವಾಗಿ ಶಾಲೆ ಶುರುವಾದ ಮೊದಲ ತಿಂಗಳಿನಲ್ಲಿ ಅಂದರೆ ಜೂನ್ ತಿಂಗಳ ಮೊದಲ ವಾರಗಳಲ್ಲಿಯೇ ಎಲ್ಲಾ ತಾಲೂಕು ನಲ್ಲೂ ಕೂಡ ವಿದ್ಯಾರ್ಥಿಗಳಿಗೆ ಅವಶ್ಯಕ ಸಾಮಗ್ರಿಗಳನ್ನು ಹೊಂದಿರುವ ಕಿಟ್ ತಲುಪಿಸುವ ಕೆಲಸಕ್ಕೆ ಮುಂದಾಗಿದೆ.
ಜೂನ್ 2ನೇ ತಾರೀಕಿನಂದು ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಿದ್ದ ಕಾರ್ಮಿಕರ ಮಕ್ಕಳುಗಳಿಗೆ ಮಂಡಳಿ ವತಿಯಿಂದ ಮಾನ್ಯ ಶಾಸಕರಾದ ಶ್ರೀ ಕೆ.ಷಡಕ್ಷರಿ ಅವರು ಕಾರ್ಮಿಕ ಇಲಾಖೆ ಇತರ ಅಧಿಕಾರಿಗಳ ಸಮ್ಮುಖದಲ್ಲಿ ವಿತರಣೆ ಮಾಡಿದರು. ಜೂನ್ 9ನೇ ತಾರೀಕಿನಂದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಅಲ್ಲಿನ ಶಾಸಕರಾದ ಶ್ರೀ ರಾಜುಕಾಗೆ ಅವರು ಕಾರ್ಮಿಕ ಇಲಾಖೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿದ್ಯಾರ್ಥಿ ಕಿಟ್ ವಿತರಣೆ ಮಾಡಿದರು.
ಜೂನ್ 14ನೇ ತಾರೀಕಿನಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ತಾಲೂಕಿನಲ್ಲಿ ಅರ್ಜಿ ಸಲ್ಲಿಸಿದ್ದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕರಾದ ಶ್ರೀ ಲಕ್ಷ್ಮಣ ಸವದಿ ಅವರು ಶಾಲಾ ಕಿಟ್ ವಿತರಣೆ ಮಾಡಿದರು. ಜೂನ್ 15ನೇ ತಾರೀಕಿನಂದು, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕಾರ್ಮಿಕ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ಗಳನ್ನು ಅಲ್ಲಿನ ಮಾನ್ಯ ಶಾಸಕರಾದ ಶ್ರೀ ಟಿ.ಬಿ ಜಯಚಂದ್ರ ಅವರು ಕಾರ್ಮಿಕ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿತರಣೆ ಮಾಡಿದರು.
ನೀವು ಲೇಬರ್ ಕಾರ್ಡ್ ಹೊಂದಿರುವ ನೊಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಾಗಿದ್ದರೆ ಈ ಕೂಡಲೇ ನಿಮ್ಮ ತಾಲೂಕಿನಲ್ಲಿರುವ ಕಟ್ಟಡ ಕಾರ್ಮಿಕ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ ಅಥವಾ ಆನ್ಲೈನಲ್ಲಿ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದ್ದು ಅರ್ಜಿ ಸಲ್ಲಿಕೆ ಓಪನ್ ಆದಾಗ ಅರ್ಜಿ ಸಲ್ಲಿಸಿ ಈ ಪ್ರಯೋಜನವನ್ನು ಪಡೆದುಕೊಳ್ಳಿ.