Deprecated: strtolower(): Passing null to parameter #1 ($string) of type string is deprecated in /home/u302298408/domains/rishithepower.com/public_html/wp-content/plugins/taboola/simple_html_dom.php on line 712
ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆಲ್ಲಾ ಸರ್ಕಾರ ಕಡೆಯಿಂದ ನೇಮಕಾತಿ ಕುರಿತಂತೆ ಮತ್ತೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಭಾರತೀಯ ರೈಲ್ವೆ ರಕ್ಷಣಾ ಪಡೆಯಲ್ಲಿ (RPF Recruitment) ಹಲವಾರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ.
ಅಧಿಸೂಚನೆಯಲ್ಲಿ ನೀಡಿರುವ ಮಾನದಂಡಗಳನ್ನು ಪೂರೈಸುವ ಭಾರತದ ಯಾವುದೇ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪ್ರಯತ್ನಿಸಬಹುದಾಗಿದೆ. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಲೇಖನದಲ್ಲಿ ನೇಮಕಾತಿ ಕುರಿತಂತೆ ಕೆಲ ಪ್ರಮುಖ ಅಂಶಗಳ ಬಗ್ಗೆ ವಿವರಿಸುತ್ತಿದ್ದೇವೆ. ತಪ್ಪದೇ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:- ಮನೆಯಿಂದಲೇ ಪೆನ್ ಮೇಕಿಂಗ್ ಬಿಜಿನೆಸ್ ಮಾಡಿ, ದಿನಕ್ಕೆ 6000 ಸಂಪಾದಿಸಿ ರಿಸ್ಕ್ ಇಲ್ಲದ ವ್ಯಾಪಾರ ಇದು.!
ನೇಮಕಾತಿ ಸಂಸ್ಥೆ:- ರೈಲ್ವೆ ರಕ್ಷಣಾ ಪಡೆ (RPF)
ಹುದ್ದೆ ಹೆಸರು:- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 4660 ಹುದ್ದೆಗಳು
ಹುದ್ದೆಗಳ ವಿವರ:-
* ಸಬ್ ಇನ್ಸ್ಪೆಕ್ಟರ್ – 452
* ಕಾನ್ಸ್ಟೇಬಲ್ – 4208
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:-
* ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನದ ಜೊತೆಗೆ ಇನ್ನಿತರ ಸರ್ಕಾರಿ ಸೌಲಭ್ಯಗಳು ಕೂಡ ಇರುತ್ತವೆ
* ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮಾಸಿಕ ವೇತನ ರೂ.35,400 ರಿಂದ ಆರಂಭ
* ಕಾನ್ಸ್ಟೇಬಲ್ ಹುದ್ದೆಗಳಿಗೆ ಮಾಸಿಕ ವೇತನ ರೂ.21,700 ರಿಂದ ಆರಂಭ
ಶೈಕ್ಷಣಿಕ ವಿದ್ಯಾರ್ಹತೆ:-
* ಆಯಾ ಹುದ್ದೆಗಳಿಗೆ ಅನುಸಾರವಾಗಿ SSLC / PUC / ITI / ಡಿಪ್ಲೋಮೋ / ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಸುದ್ದಿ ಓದಿ:-ಗೃಹಲಕ್ಷ್ಮಿ 8ನೇ ಕಂತಿನ & ಪೆಂಡಿಂಗ್ ಇರುವ ಎಲ್ಲಾ ಹಣ ಪಡೆಯಲು ಮತ್ತೊಂದು ಅವಕಾಶ.!
ವಯೋಮಿತಿ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 28 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ವರ್ಗಕ್ಕೆ ಸೇರುವ ಅಭ್ಯರ್ಥಿಗಳಿಗೆ 03 ವರ್ಷಗಳು
* SC / ST ವರ್ಗಕ್ಕೆ ಸೇರುವ ಅಭ್ಯರ್ಥಿಗಳಿಗೆ 05 ವರ್ಷಗಳು
ಅರ್ಜಿ ಶುಲ್ಕ:-
* SC / ST, ಮಾಜಿ ಸೈನಿಕ, ಮಹಿಳೆ, ಅಲ್ಪಸಂಖ್ಯಾತ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರುವ ಅಭ್ಯರ್ಥಿಗಳಿಗೆ ರೂ.250
* ಇತರೆ ಅಭ್ಯರ್ಥಿಗಳಿಗೆ ರೂ.500
ಅರ್ಜಿ ಸಲ್ಲಿಸುವ ವಿಧಾನ:-
https://indianrailways.gov.in/railwayboard/view_section.jsp?lang=0&id=0,7,1281 ಇದು ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಸಲುವಾಗಿ ಸೂಚಿಸಿರುವ ಅಧಿಕೃತ ಲಿಂಕ್ ಆಗಿದೆ, ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
* ಕೇಳಲಾಗುವ ಎಲ್ಲಾ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅಥವಾ ಪೂರಕ ದಾಖಲೆಗಳಿಗೆ ದಾಖಲೆಗಳ ಸಂಖ್ಯೆಯನ್ನು ಕೇಳಿದ್ದರೆ ಸರಿಯಾಗಿ ನಮೂದಿಸಿ
* ಆಯಾವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿಸಿ ಇ-ರಸೀದಿ ಪಡೆಯಿರಿ.
* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೇ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ ಮುಂದಿನ ದಿನಗಳಲ್ಲಿ ಇವುಗಳ ಅವಶ್ಯಕತೆ ಇರುತ್ತದೆ
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ದೇಹದಾಢ್ಯತೆ ಮತ್ತು ದೈಹಿಕ ಸಾಮರ್ಥ್ಯದ ಪರೀಕ್ಷೆ
* ಸಂದರ್ಶನ
* ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 15 ಏಪ್ರಿಲ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 14 ಮೇ, 2024.