2023-24 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ತಾತ್ಕಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಬಗ್ಗೆ ಸರ್ಕಾರದಿಂದ ಆದೇಶ ಹೊರ ಬಿದ್ದಿದೆ. 27,000 ಅತಿಥಿ ಶಿಕ್ಷಕರುಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದ್ದು ಇದರಲ್ಲಿ 6ರಿಂದ 8ನೇ ತರಗತಿಗೆ 15,000 ಪದವೀಧರ ಪ್ರಾಥಮಿಕ ಶಿಕ್ಷಕರ ಅಗತ್ಯತೆ ಇದೆ.
2023-24ನೇ ಸಾಲಿನಲ್ಲಿ ಪ್ರತಿ ಶಾಲೆಗೂ ಅಗತ್ಯವಿರುವ ಶಿಕ್ಷಕರ ಸಂಖ್ಯೆಗಳನ್ನು ಜಿಲ್ಲೆಗನುಸಾರವಾಗಿ ಮಂಜೂರಾತಿ ಮಾಡಲು, ಇದಕ್ಕೆ ಸಂಬಂಧಿಸಿದಂತೆ ನಿಯಮಾನುಸಾರ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದ್ದು ಈ ಪ್ರಕ್ರಿಯೆಯನ್ನು ಕೆಲವು ಶರತ್ತುಗಳನ್ನು ವಿಧಿಸಿ ನಡೆಸಲಾಗುತ್ತಿದೆ. ಅದರ ಬಗ್ಗೆ ಪೂರ್ತಿ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ.
ಅತಿಥಿ ಶಿಕ್ಷಕರ ನೇಮಕಾತಿಗೆ ವಿಧಿಸಿರುವ ಷರತ್ತುಗಳು:-
● 2023-24ನೇ ಸಾಲಿನಲ್ಲಿ ಹಾಜರಾಗುವ ಶಿಕ್ಷಕರ ಸಂಖ್ಯೆಗಳಿಗೆ ಅನುಗುಣವಾಗಿ ಒಟ್ಟು ಶಿಕ್ಷಕರ ಸಂಖ್ಯೆಯನ್ನು ಕಡಿತಗೊಳಿಸಲಾಗುತ್ತದೆ.
● ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ತ್ವರಿತವಾಗಿ ನೇಮಕಾತಿ ಮಾಡಲಾಗುತ್ತದೆ, ಆದರೆ ಇವು ತಾತ್ಕಾಲಿಕ ಹುದ್ದೆಗಳಾಗಿರುತ್ತವೆ.
● ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಜವಾಬ್ದಾರಿಯನ್ನು ಆಯಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಹಿಸಲಾಗಿದೆ.
● ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರನ್ನು ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶದಲ್ಲಿರುವ ಖಾಲಿ ಹುದ್ದೆಗೆ ಅಥವಾ ಶಿಕ್ಷಕರ ರಹಿತ ಶಾಲೆಗಳಿಗೆ ಅಥವಾ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯಲ್ಲಿರುವ ಖಾಲಿ ಹುದ್ದೆಗಳಿಗೆ ನೇಮಿಸಲಾಗುವುದು.
● ರಾಜ್ಯದಲ್ಲಿರುವ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು ಮತ್ತು ಬೆಂಗಳೂರು ಪಬ್ಲಿಕ್ ಶಾಲೆಗಳು ಮತ್ತು ಆದರ್ಶ ಶಾಲೆಗಳಿಗೆ ನೂರಕ್ಕೆ ನೂರರಷ್ಟು ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಲಾಗುತ್ತದೆ.
● ಶಿಕ್ಷಕರಿಗೆ ಆಯಾ ಹುದ್ದೆಗಳಿಗೆ ಸೂಚಿಸಿರುವ ಕನಿಷ್ಠ ವಿದ್ಯಾರ್ಹತೆ ಕೇಳಲಾಗಿದ್ದು ಹೆಚ್ಚಿನ ಅರ್ಜಿಗಳು ಬಂದಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
● ಅತಿಥಿ ಶಿಕ್ಷಕರ ಹಾಜರಾತಿ ವಹಿಯನ್ನು ಪ್ರತ್ಯೇಕವಾಗಿ ನಿರ್ವಹಿಸಲಾಗುತ್ತದೆ.
ವೇತನ:-
● ಪ್ರತಿ ತಿಂಗಳು ಗೌರವ ದಿನವಾಗಿ 10,000 ರೂ.ಗಳನ್ನು ಅತಿಥಿ ಶಿಕ್ಷಕರಾಗಿ ನೇಮಕಗೊಳ್ಳುವವರಿಗೆ ನೀಡಲಾಗುತ್ತದೆ.
● ಅತಿಥಿ ಶಿಕ್ಷಕರ ಗೌರವಧನ ಪಾವತಿಸಲು ಅತಿಥಿ ಶಿಕ್ಷಕರಾಗಿ ನೇಮಕಗೊಂಡವರ ಮಾಹಿತಿಯನ್ನು ತಾಲೂಕುವಾರು ಕ್ರೋಢೀಕರಿಸಿ, ಜಿಲ್ಲೆಯಿಂದ ಬೇಡಿಕೆ ಮತ್ತು ಅನುದಾನವನ್ನು ಸಲ್ಲಿಸಿ ವಿಭಾಗ ಮಾಡಲಾಗುವುದು ನಂತರ ತಾಲೂಕು ಪಂಚಾಯಿತಿಗಳಿಗೆ ಆರ್ಥಿಕ ಇಲಾಖೆಯಿಂದ ಹಣ ಬಿಡುಗಡೆ ಆಗುತ್ತದೆ.
● ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿ ಲೋಪ ದೋಷಗಳು ಕಂಡುಬಂದರೂ ಕೂಡ ಸಂಬಂಧಿಸಿದ ಅಧಿಕಾರಿಯನ್ನೇ ನೇರ ಹೊಣೆಗಾರಿಕೆಯನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎನ್ನುವ ಕಟ್ಟುನಿಟ್ಟಿನ ಆದೇಶವನ್ನು ಕೂಡ ಸರ್ಕಾರ ಹೊರಡಿಸಿದೆ.
ಈ ಆದೇಶ ಪ್ರತಿಯನ್ನು ಶಾಲಾ ಶಿಕ್ಷಣ ಇಲಾಖೆ, ಎಲ್ಲಾ ಜಿಲ್ಲಾ ಉಪನಿರ್ದೇಶಕರುಗಳಿಗೆ ಆಡಳಿತ ಇಲಾಖೆ ಮೂಲಕ ಮತ್ತು ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಜಿಲ್ಲಾ ಉಪ ನಿರ್ದೇಶಕರ ಮೂಲಕ ತರಲುಪಿಸಲಾಗಿದ್ದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟಲ್ಲಿ ಕೂಡ ಆದೇಶ ಪ್ರತಿಯನ್ನು ಹೊರಡಿಸಲಾಗಿದೆ.
ಇದರ ಜೊತೆಗೆ ಜಿಲ್ಲಾ ವಾರು ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಶಿಕ್ಷಕರ ಬೇಡಿಕೆ ಇದೆ ಎನ್ನುವ ಪಟ್ಟಿಯನ್ನು ಕೂಡ ಸಲ್ಲಿಸಲಾಗಿದೆ. ಆಕಾಂಕ್ಷಿಗಳು ಇಲಾಖೆ ವೆಬ್ಸೈಟ್ಗೆ ತೆರಳಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಮಾಹಿತಿಯನ್ನು ಓದಿ ಅರ್ಥೈಸಿಕೊಂಡು ಆ ಮೂಲಕ ಅರ್ಜಿ ಸಲ್ಲಿಸಿ ಆಸಕ್ತಿ ಇದ್ದರೆ ಅತಿಥಿ ಶಿಕ್ಷಕರ ಹುದ್ದೆ ನಿರ್ವಹಿಸಬಹುದು.