ರಾಷ್ಟ್ರೀಯ ವಿದ್ಯಾರ್ಥಿವೇತನ 2023 ಈ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಈ ಯೋಜನೆಗೆ ದೇಶದಾದ್ಯಂತ ಯಾವುದೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ವಿದ್ಯಾರ್ಥಿ ಯೋಜನೆಯಲ್ಲಿ UGC ಯೋಜನೆಗಳು ಅಂದರೆ UGCಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು, AICTE ಯೋಜನೆಗಳು.
ಅಂದರೆ MHRD ನಿಯಮ ಗಡಿ ಭಾರತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಂತ್ರಿಕ ಮತ್ತು ನಿರ್ವಹಣಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಮತ್ತು ರಾಜ್ಯ ಸರ್ಕಾರದ ಶಿಕ್ಷಣ ಮಂಡಳಿ ನಿಯಮಗಳಡಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ರಾಷ್ಟ್ರೀಯ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.
ಈ ಅಂಕಣದಲ್ಲಿ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪಡೆಯುವುದಕ್ಕೆ ಸಂಬಂಧಪಟ್ಟ ಹಾಗೆ ಏನೆಲ್ಲಾ ಅರ್ಹತೆಗಳಿರಬೇಕು ಯಾವ ರೀತಿ ಅರ್ಜಿ ಸಲ್ಲಿಸಬೇಕು, ಯಾವ ದಾಖಲೆಗಳನ್ನು ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎನ್ನುವ ಪೂರ್ತಿ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ.
ಈ ಉಪಯುಕ್ತ ಮಾಹಿತಿಯನ್ನು ತಪ್ಪದೆ ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೆ ಹಂಚಿಕೊಳ್ಳಿ. ಹೆಚ್ಚಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಅನುಕೂಲತೆ ಸಿಗುವಂತೆ ಮಾಡಿ.
ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:-
● ಅರ್ಜಿ ಸಲ್ಲಿಸುವ ವಿಧ್ಯಾರ್ಥಿಯು ಭಾರತದ ನಿವಾಸಿಯಾಗಿರಬೇಕು.
● ನೀವು ಭಾರತದ ಯಾವುದೇ ರಾಜ್ಯದ ವಿದ್ಯಾರ್ಥಿಯಾಗಿದ್ದರೂ ಮತ್ತು 10ನೇ ತರಗತಿ ನಂತರ ಯಾವುದೇ ತರಗತಿಯಲ್ಲಿ ಓದುತ್ತಿದ್ದರೂ ಅರ್ಜಿ ಸಲ್ಲಿಸಬಹುದು.
● 10ನೇ ತರಗತಿ, 12ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಶಿಕ್ಷಣದ, ವೃತ್ತಿಪರ ಶಿಕ್ಷಣದ ಕೋರ್ಸ್ ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಬಹುದು.
● ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮಾತ್ರ ಅವಕಾಶ.
● ಈ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್‌ನಲ್ಲಿ 31, ಅಕ್ಟೋಬರ್ 2023ರ ಒಳಗೆ ಅರ್ಜಿ ಸಲ್ಲಿಸಬೇಕು,
ಕಡೆ ದಿನಾಂಕದ ನಂತರ ಬಂದ ಅರ್ಜಿಗಳು ಮಾನ್ಯ ವಾಗುವುದಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
● 10ನೇ ಮತ್ತು 12ನೇ ತರಗತಿ ಅಂಕಪಟ್ಟಿ
● ಬ್ಯಾಂಕ್ ಪಾಸ್ಬುಕ್ ವಿವರ
● ಆಧಾರ್ ಕಾರ್ಡ್ ಪ್ರತಿ
● ಮೊಬೈಲ್ ಸಂಖ್ಯೆ
● ಅರ್ಜಿದಾರರ / ಪೋಷಕರ ಆದಾಯ ಪ್ರಮಾಣಪತ್ರ
● ಅರ್ಜಿದಾರರ ಜಾತಿ ಪ್ರಮಾಣ ಪತ್ರ
● ವಿಳಾಸ ಪುರಾವೆ
● ನಿವಾಸ ಧೃಡೀಕರಣ ಪತ್ರ
● ಪಾಸ್ಪೋರ್ಟ್ ಗಾತ್ರದ ಫೋಟೋ
ರಾಷ್ಟ್ರೀಯ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸುವ ವಿಧಾನ:-
● ರಾಷ್ಟ್ರೀಯ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ ಅಡ್ರೆಸ್ ಗೆ ಭೇಟಿ ನೀಡಬೇಕು.
● ಮೊದಲ ಪುಟದಲ್ಲಿಯೇ ಸ್ಕಾಲರ್‌ಶಿಪ್‌ನಲ್ಲಿ ಹೊಸ ಅಪ್ಲಿಕೇಶನ್ ಹಾಕಲು ರಾಷ್ಟ್ರೀಯ ವಿದ್ಯಾರ್ಥಿವೇತನ 2023 ಅಪ್ಲಿಕೇಶನ್ ಫಾರಂ ಫ್ರೆಶ್ ಆಯ್ಕೆಯನ್ನು ನೀವು ಪಡೆಯುತ್ತೀರಿ. ಆ ಆಯ್ಕೆಯನ್ನು ಕ್ಲಿಕ್ ಮಾಡಿ.
● ಇದರ ನಂತರ ಅರ್ಜಿ ನಮೂನೆಯು ನಿಮ್ಮ ಸ್ಕ್ರೀನ್ ಅಲ್ಲಿ ಓಪನ್ ಆಗುತ್ತದೆ.
● ರಾಷ್ಟ್ರೀಯ ವಿದ್ಯಾರ್ಥಿ ವೇತನ ಅರ್ಜಿ ಫಾರಂ ಅಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾದ ಮಾಹಿತಿಗಳೊಂದಿಗೆ ಭರ್ತಿ ಮಾಡಿ.
● ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
● ಅಂತಿಮವಾಗಿ ಸಲ್ಲಿಸು ಕ್ಲಿಕ್ ಮಾಡಿ.
● ಯಶಸ್ವಿಯಾಗಿ ಸಲ್ಲಿಕೆಯಾದ ನಂತರ ಭವಿಷ್ಯದ ಬಳಕೆಗಾಗಿ ಅರ್ಜಿ ಸಲ್ಲಿಸಿರುವ ರೆಫೆರೆನ್ಸ್ ನಂಬರ್ ನೋಟ್ ಮಾಡಿ ಇಟ್ಟುಕೊಳ್ಳಿ ಅಥವಾ ಸ್ವೀಕೃತಿ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.