ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಮಹಿಳೆಯರಿಗಾಗಿ (for Womens) ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ ಈ ಬಾರಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು (Congress party Guarantee Schemes) ನೀಡಿರುವ ಗ್ಯಾರಂಟಿ ಭರವಸೆಗಳಲ್ಲಿ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಉಪಯೋಗ ಮಹಿಳೆಯರಿಗೆ ಹೆಚ್ಚಾಗಿ ಸಿಗುತ್ತಿದೆ.
ಮುಂದುವರೆದು ಗ್ಯಾರಂಟಿಯೇತರವಾಗಿ ಕೂಡ ಮಹಿಳೆಯರಿಗಾಗಿ ಉದ್ಯೋಗಿನಿ ಯೋಜನೆ, ಶ್ರಮಶಕ್ತಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ ಮತ್ತು ಸಬ್ಸಿಡಿ ರೂಪದ ಸಾಲ ಸೌಲಭ್ಯ ಇತ್ಯಾದಿ ಅನುಕೂಲತೆಗಳನ್ನು ಒದಗಿಸಿದೆ. ಈಗ ಮುಂದುವರೆದು ಗೆಳತಿ ಯೋಜನೆಯಡಿ (Gelathi Schemes) ಕೂಡ ಸಾಲ ಸೌಲಭ್ಯ ನೀಡಲು ಸರ್ಕಾರ ಆದೇಶ ಹೊರಡಿಸಿದೆ.
ಈ ಸುದ್ದಿ ಓದಿ:- ಪೋಸ್ಟ್ ಆಫೀಸ್ ನಾ ಈ ಸ್ಕೀಮ್ ನಲ್ಲಿ ಹೂಡಿಕೆ ಮಾಡಿದ್ರೆ ಪ್ರತಿ ತಿಂಗಳು 9250 ಬಡ್ಡಿ ಸಿಗುತ್ತೆ.!
ಇದರ ಸಂಬಂಧಿತ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ ಈ ಹಿಂದೆಯೂ ಕೂಡ ಗೆಳತಿ ಯೋಜನೆ ರಾಜ್ಯದಲ್ಲಿ ಚರ್ಚೆಯಲ್ಲಿತ್ತು. ರಾಜ್ಯ ಸರ್ಕಾರವು 2017-18ರ ಬಜೆಟ್‌ನಲ್ಲಿ ಘೋಷಿಸಿದಂತೆ ದೌರ್ಜನ್ಯಕ್ಕೊಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ ಮತ್ತಿತರ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ.
ರಾಜ್ಯದ 145 ತಾಲೂಕುಗಳಲ್ಲಿ ಗೆಳತಿ ವಿಶೇಷ ಚಿಕಿತ್ಸಾ ಘಟಕ ತೆರೆಯಲು ಅನುಮತಿ ನೀಡಿತ್ತು. ಈ ಗೆಳತಿ ವಿಶೇಷ ಚಿಕಿತ್ಸಾ ಘಟಕ ಯೋಜನೆಯಡಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸಮಗ್ರ ಸೌಲಭ್ಯ ಅಂದರೆ, ವೈದ್ಯಕೀಯ ಚಿಕಿತ್ಸೆ ಮತ್ತು ನೆರವು, ಪೋಲೀಸ್ ನೆರವು, ಕಾನೂನು ನೆರವು ಹಾಗೂ ಸಮಾಲೋಚನೆ ವ್ಯವಸ್ಥೆಗಳನ್ನು ಒದಗಿಸಲು.
ಗೃಹಲಕ್ಷ್ಮಿ ಯೋಜನೆ ಹಣ ಪಡೆಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್, ಇನ್ಮುಂದೆ 2000 ಅಲ್ಲ 4000 ಹಣ ನೀಡಲು ನಿರ್ಧರಿಸಿರುವ ಸರ್ಕಾರ, ತಪ್ಪದೇ ಈ ಕೆಲಸ ಮಾಡಿ.!
ಗೆಳತಿ ವಿಶೇಷ ಚಿಕಿತ್ಸಾ ಘಟಕವನ್ನು ಜಿಲ್ಲಾ ಆಸ್ಪತ್ರೆ ಕೆ. ಸಿ. ಜನರಲ್ ಆಸ್ಪತ್ರೆ, ಮಲ್ಲೇಶ್ವರಂ, ಬೆಂಗಳೂರು ಈ ಸ್ಥಳಗಳಲ್ಲಿ ಪ್ರಾರಂಭಿಸಲಾಗಿತ್ತು. ಈಗ ಮತ್ತೊಮ್ಮೆ ರಾಜ್ಯ ಸರ್ಕಾರದ ವತಿಯಿಂದ ಗೆಳತಿ ಯೋಜನೆಗೆ ಮತ್ತಷ್ಟು ಅನುದಾನ ಸಿಗುತ್ತಿದೆ. ಈ ಬಾರಿ ಗೆಳತಿ ಯೋಜನೆಯಡಿ ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ (Acid attack) ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ.
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ (KWCWD) ಸಹಾಯ ಧನ ಪಡೆಯಲು ಅರ್ಜಿ ಆಹ್ವಾನ ಮಾಡಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಜಾರಿಗೆ ತರುತ್ತಿರುವ ಈ ಗೆಳತಿ ಯೋಜನೆಯಡಿ ಆಸಿಡ್ ದಾಳಿಗೆ ಒಳಗಾದ ಮಹಿಳೆಯರಿಗೆ ಸ್ವ ಉದ್ಯೋಗ ಸ್ಥಾಪಿಸಲು ಈ ಮೂಲಕ ಆರ್ಥಿಕವಾಗಿ ಸದೃಢರಾಗಿ ಉತ್ತಮ ಜೀವನ ನಿರ್ವಹಣೆ ಮಾಡಲು ಪ್ರತಿ ಫಲಾನುಭವಿಗೆ ಘಟಕ ವೆಚ್ಚ ₹5 ಲಕ್ಷ ಸಾಲವನ್ನು ನೀಡಲಾಗುತ್ತಿದೆ.
ಈ ಸುದ್ದಿ ಓದಿ:- ಕೇವಲ 2496 ರೂಪಾಯಿಗೆ ಸ್ಪಿಂಕ್ಲರ್ ಸೆಟ್ ಪಡೆಯಿರಿ.! ಕೃಷಿ ಇಲಾಖೆಯಿಂದ ರೈತರಿಗೆ ಬಂಪರ್ ಕೊಡುಗೆ ಮೊಬೈಲ್ ನಲ್ಲೇ ಈ ರೀತಿ ಅರ್ಜಿ ಹಾಕಿ.!
ಇದರಲ್ಲಿ 2.5 ಲಕ್ಷ ಮಾತ್ರ ಮರುಪಾವತಿ ಮಾಡಬೇಕಾಗಿರುವ ಸಾಲವಾಗಿದ್ದು, ಉಳಿದ 2.5 ಲಕ್ಷ ಹಣವನ್ನು ಸಬ್ಸಿಡಿ (Subsidy) ನೀಡಲಾಗುತ್ತಿದೆ. ಗೆಳತಿ ಯೋಜನೆಯ ಈ ಸಾಲ ಸೌಲಭ್ಯವನ್ನು ಪಡೆಯಲು ಆಸಿಡ್ ದಾಳಿಗೊಳಗಾದ ಸಂತ್ರಸ್ತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ಆಫ್ ಲೈನ್ ನಲ್ಲಿಯೇ ಸಲ್ಲಿಸಬೇಕು. ಸಾಲ ಪಡೆಯಲು ಬೇಕಾಗಿರುವ ಸೂಕ್ತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬೇಕು.
ವಿಳಾಸ:-
ವ್ಯವಸ್ಥಾಪಕ ನಿರ್ದೇಶಕರು,
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ,
6ನೇ ಮಹಡಿ,
ಜಯನಗರ ವಾಣಿಜ್ಯ ಸಂಕೀರ್ಣ,
4ನೇ ಬ್ಲಾಕ್,
ಜಯನಗರ,
ಬೆಂಗಳೂರು- 560011.
ಈ ಸುದ್ದಿ ಓದಿ:- ರೈತರಿಗೆ ಬಂಪರ್ ನ್ಯೂಸ್ ಈ ಬ್ಯಾಂಕ್ ನಲ್ಲಿ ಸಾಲ ಮಾಡಿದ ರೈತರ ಸಾಲ ಮನ್ನಾ.! 440 ಕೋಟಿ ಬಡ್ಡಿ ಮನ್ನಾ.!
* ಹೆಚ್ಚಿನ ಮಾಹಿತಿಗಾಗಿ:- ಆಯಾ ಜಿಲ್ಲೆಯ ಉಪ ನಿರ್ದೇಶಕರನ್ನು ಸಂಪರ್ಕಿಸುವಂತೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.