1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ.!

 

WhatsApp Group Join Now
Telegram Group Join Now

ಗ್ರಾಮೀಣ ಭಾಗದಲ್ಲಿ ರೈತರಿಗೆ ಇರುವ ಸಾಮಾನ್ಯ ಸಮಸ್ಯೆಗಳ ಜೊತೆಗೆ ಇತ್ತೀಚಿನ ದಿನಗಳಲ್ಲಿ ಕಚೇರಿಯ ಕೆಲಸಗಳು ಕೂಡ ಸಮಯಕ್ಕೆ ಸರಿಯಾಗಿ ಆಗದೆ ಬಹಳ ತೊಂದರೆಯಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಆಗದಿರುವುದೇ ಇದಕ್ಕೆಲ ಕಾರಣ ಎಂದು ಜನಸಾಮಾನ್ಯರಿಂದ ಆಕ್ರೋಶವಿದೆ.

ಸರ್ಕಾರವು ಈ ವರ್ಷ ಕಂದಾಯ ಇಲಾಖೆಗೆ (Revenue Department) ಸಂಬಂಧಿಸಿದಂತೆ ನೇಮಕಾತಿ ಮಾಡಿಕೊಳ್ಳಲಾಗುವುದು ಹಾಗೂ ಗ್ರಾಮ ಲೆಕ್ಕಾಧಿಕಾರಿ, ಸರ್ವೆಯರ್ ಇನ್ನು ಮುಂತಾದ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗುವುದು ಎಂದು ಭರವಸೆ ನೀಡುತ್ತಿದ್ದೆಯಾದರೂ ಇದರ ನಡುವೆ ಇಲಾಖೆ ನೌಕರರನ್ನು ಬೇರೆ ಕಡೆ ವರ್ಗಾಯಿಸುತ್ತಿರುವುದರ ಬಗ್ಗೆಯೂ ಕೂಡ ಬೇಸರವಿದೆ.

ಇದಕ್ಕೆಲ್ಲ ಕಲಾಪದಲ್ಲಿ ಕಂದಾಯ ಸಚಿವರನ್ನೇ ಪ್ರಶ್ನಿಸಲಾಗಿದೆ ಇದು ಉತ್ತರಿಸಿದ ಸಚಿವರು ನೇಮಕಾತಿ ಬಗ್ಗೆ ಸಿಹಿ ಸುದ್ದಿ ಕೂಡ ನೀಡಿದ್ದಾರೆ. ಕುಂದಾಪುರ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳನ್ನು ಸೇರಿದಂತೆ ಕಂದಾಯ ಇಲಾಖೆಯ ವಿವಿಧ ಹಂತದ ನೌಕರರನ್ನು ಬೇರೆ ಕಾರ್ಯಗಳಿಗಾಗಿ ನಿಯೋಜನೆ ಮಾಡಲಾಗುತ್ತಿದೆ ಎನ್ನುವ ಆರೋಪವನ್ನು ಮಾಡಿ ಸ್ಥಳೀಯ ಶಾಸಕ ಕಿರಣ್ ಕುಮಾರ್ ಕೂಡ್ಲಿ ರವರು ಅಸಮಾಧಾನ ವ್ಯಕ್ತಪಡಿಸಿ ದೂರಿದ್ದರು.

ಈ ಸುದ್ದಿ ಓದಿ:- ದೇವಸ್ಥಾನದಿಂದ ಹಿಂದಿರುಗಿ ಬರುವಾಗ ಈ ನಾಲ್ಕು ತಪ್ಪುಗಳನ್ನು ಮಾಡಲೇಬೇಡಿ.!

ಕಂದಾಯ ಇಲಾಖೆಯಲ್ಲಿ ಉದ್ಯೋಗಿಗಳ ಕೊರತೆ ಇದೆ, ಇದರಿಂದ ಜನರಿಗೆ ಸಮಯಕ್ಕೆ ಸರಿಯಾಗಿ ಕೆಲಸಗಳು ಆಗದೆ ತೊಂದರೆಯಾಗುತ್ತಿದೆ ಎಂದು ಶಾಸಕ ಕೂಡ್ಲಿ ಅವರು ಟೀಕಿಸಿದರು. ಇದಕ್ಕೆ ಉತ್ತರಿಸಿದ ಸಚಿವರು ನಿಮ್ಮ ಪರವಾಗಿ ನಾವಿದ್ದೇವೆ. ಇದರಲ್ಲಿ ಯಾವ ರಾಜಕೀಯವೂ ಇಲ್ಲ.

ಕುಂದಾಪುರ ತಾಲೂಕಿನ ಕಂದಾಯ ಇಲಾಖೆಯಲ್ಲಿ ಖಾಲಿ ಇದ್ದ 110 ಹುದ್ದೆಗಳ ಪೈಕಿ 70 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಆ ಪ್ರಕಾರವಾಗಿ 65% ರಷ್ಟು ಸ್ಥಾನಗಳನ್ನು ಭರ್ತಿ ಮಾಡಿದ್ದೇವೆ. ಇನ್ನುಳಿದ ಸ್ಥಾನಗಳನ್ನೂ ಭರ್ತಿ ಮಾಡಲು ನಮ್ಮ ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ (Revenue Minister Krishna Bairegowda) ಭರವಸೆ ನೀಡಿದ್ದಾರೆ.

ಇತರ ಇಲಾಖೆಗಳಿಗೆ ಹೋಲಿಸಿದರೆ ಕಂದಾಯ ಇಲಾಖೆಯಲ್ಲಿ ಉದ್ಯೋಗಿಗಳ ಸಂಖ್ಯೆಯೇ ಹೆಚ್ಚು ಮತ್ತು ರೈತರು ಹಾಗೂ ಜನಸಾಮಾನ್ಯರಿಗೆ ಕಂದಾಯ ಇಲಾಖೆಯ ಸೇವೆಗಳು ಆದಷ್ಟು ಶೀಘ್ರವಾಗಿ ದೊರೆತರೆ ಹೆಚ್ಚಿನ ಅನುಕೂಲ ಹೀಗಾಗಿ ತ್ವರಿತ ಮತ್ತು ಸುಲಭ ಸೇವೆ ಒದಗಿಸಬೇಕು ಎಂಬ ಉದ್ದೇಶದಿಂದ ಇನ್ನು 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಈ ಸುದ್ದಿ ಓದಿ:- ಕೇವಲ 10 ಸಾವಿರ ಹೂಡಿಕೆ ಮಾಡಿ ತಿಂಗಳಿಗೆ 1.95 ಲಕ್ಷ ಪಿಂಚಣಿ ಪಡೆಯಿರಿ.! ಇಲ್ಲಿದೆ ಸಂಪೂರ್ಣ ಮಾಹಿತಿ

ಇದರ ಕುರಿತಾದ ಅಧಿಸೂಚನೆಯು ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎನ್ನುವ ಭರವಸೆ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿಯೇ ಸರ್ಕಾರಿ ಸೇವೆಗಳು ಸುಲಭವಾಗಿ ಸಿಗುವಂತಾಗಲು ಸಹಾಯವಾಗಲಿ ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಈ 1000 ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಒಪ್ಪಿಗೆ ನೀಡಿದ್ದಾರೆ.

ಈ ಅಧಿಸೂಚನೆಯಿಂದ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಇರುವ ಸಾವಿರ ಅರ್ಹರಿಗೆ ಉದ್ಯೋಗಾವಕಾಶ ಸೃಷ್ಟಿಸಿದಂತಾಗುತ್ತದೆ ಎಂದು ಸಚಿವರು ಉತ್ತರಿಸಿದ್ದಾರೆ. ಪ್ರಜೆಗಳ ಹಿತಾಸಕ್ತಿಯೇ ಸರ್ಕಾರದ ಶ್ರೇಯಸ್ಸು, ಈ ಉದ್ದೇಶದಿಂದ ಕಂದಾಯ ಇಲಾಖೆಯ ನೌಕರರು ನಿಯೋಜನೆಗೊಂಡ ಸ್ಥಳದಲ್ಲಿಯೇ ಕಾರ್ಯನಿರ್ವಹಿಸುವುದು ಸೂಕ್ತ, ಈ ರೀತಿ ಮಾಡಿದ್ದಲ್ಲಿ ಸರ್ಕಾರ ನೀಡಿದ ಜವಾಬ್ದಾರಿಯನ್ನು ಸಮರ್ಪಣೆಯಿಂದ ನಿರ್ವಹಿಸಲು ಅನುಕೂಲವಾಗುತ್ತದೆ ಮತ್ತು ನಿರೀಕ್ಷಿಸಬಹುದು.

ಆದರೆ ಕಳೆದ ಸರ್ಕಾರದ ಅವಧಿಯಲ್ಲಿ ಕಂದಾಯ ಇಲಾಖೆ ನೌಕರರನ್ನು ಅವರ ಮೂಲ ಸ್ಥಾನದಿಂದ ಬೇರೆಡೆ ನಿಯೋಜಿಸಲಾಗಿತ್ತು. ಇದೇ ಕಾರಣವು ಸಾರ್ವಜನಿಕರಿಗೆ ಸಮರ್ಪಕ ಸೇವೆ ಒದಗಿಸುವಲ್ಲಿ ಅಡಚಣೆ ಉಂಟು ಮಾಡಿದ್ದು. 2000ಕ್ಕೂ ಹೆಚ್ಚು ಉದ್ಯೋಗ ಭರ್ತಿಗೆ ಮನವಿಗಳು ಸಲ್ಲಿಕೆಯಾಗಿತ್ತು ಸದ್ಯಕ್ಕೆ 1000 ಹುದ್ದೆಗಳಿಗೆ ನೇಮಕಾತಿ ಮಾಡಿ ಮುಂದಿನ ದಿನಗಳಲ್ಲಿ ಹುದ್ದೆಗಳ ಸಂಖ್ಯೆ ಹೆಚ್ಚಿಸಲು ಪ್ರಯತ್ನಿಸುತ್ತೇವೆ. ಯಾವುದೇ ಕಾರಣಕ್ಕೂ ಯಾವುದೇ ನೌಕರರನ್ನು ಅವರ ಮೂಲ ಸ್ಥಾನದಿಂದ ಬೇರೆಡೆ ನಿಯೋಜಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಸಚಿವರು ನುಡಿದಿದ್ದಾರೆ.

ಈ ಸುದ್ದಿ ಓದಿ:- ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ 32,044 ಬಡ್ಡಿ ಸಿಗುತ್ತೆ.!

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now