ಕರ್ನಾಟಕದಲ್ಲಿ ಬಹು ನಿರೀಕ್ಷಿತ ನೋಟಿಫಿಕೇಶನ್ ಒಂದು ಕರ್ನಾಟಕ ಲೋಕಸೇವಾ ಆಯೋಗದ (KPSC) ಕಡೆಯಿಂದ ಬಿಡುಗಡೆಯಾಗಿದೆ. ಹಲವು ವರ್ಷಗಳಿಂದ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿಯಲ್ಲಿ (Department of Rural Development and Panchayat Raj, Government of Karnataka) ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳ (PDO Recruitment ) ನೇಮಕಾತಿ ಅಧಿಸೂಚನೆಗಾಗಿ ಸಹಸ್ರಾರು ವಿದ್ಯಾರ್ಥಿಗಳು ಕಾಯುತ್ತಿದ್ದರು.
ಸುಮಾರು ವರ್ಷಗಳಿಂದ ಖಾಲಿ ಇರುವ ಈ ಹುದ್ದೆಗಳಿಗೆ ನೇಮಕಾತಿ ನಡೆದಿರಲಿಲ್ಲ. ಅಂತಿಮವಾಗಿ ಈಗ ಅಧಿಸೂಚನೆ ಬಿಡುಗಡೆಯಾಗಿದ್ದು ಎಲ್ಲಾ ಅರ್ಹ ಆಸಕ್ತ ಆಕಾಂಕ್ಷಿಗಳು ಈಗ ತಮ್ಮ ಅಧ್ಯಯನವನ್ನು ಚುರುಕುಗೊಳಿಸಿ ಕೊಳ್ಳಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ನಾವು ಕೂಡ ಈ ಲೇಖನದಲ್ಲಿ ನೇಮಕಾತಿ ಕುರಿತಂತೆ ಇರುವ ಪ್ರಮುಖ ಸಂಗತಿಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತಿದ್ದೇವೆ. ತಪ್ಪದೆ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:- SBI ಬ್ಯಾಂಕ್ ಗ್ರಾಹಕರಿಗೆ ಬೇಸರಸ ಸುದ್ದಿ.!
ನೇಮಕಾತಿ ಇಲಾಖೆ:- ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಸಂಸ್ಥೆ:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR)
ಹುದ್ದೆಗಳ ಹೆಸರು:- ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO)
ಒಟ್ಟು ಹುದ್ದೆಗಳ ಸಂಖ್ಯೆ:- 247 ಹುದ್ದೆಗಳು
* ಹೈದರಾಬಾದ್ ಕರ್ನಾಟಕ – 97 ಪೋಸ್ಟ್
* ಉಳಿದ ಪೋಷಕ ವರ್ಗ – 150 ಪೋಸ್ಟ್
ಉದ್ಯೋಗ ಸ್ಥಳ:- ಕರ್ನಾಟಕದಾದ್ಯಂತ…
ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿರೂ.37,900 ರಿಂದ ರೂ.70,850 ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:-
ಕರ್ನಾಟಕದಲ್ಲಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು.
ಈ ಸುದ್ದಿ ಓದಿ:- ರೈತರ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ಉಚಿತ ಶಿಕ್ಷಣ.!
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* SC / ST / Cat-1 ಅಭ್ಯರ್ಥಿಗಳಿಗೆ 05 ವರ್ಷಗಳು
* 2A / 2B / 3A / 3B ಅಭ್ಯರ್ಥಿಗಳಿಗೆ 03 ವರ್ಷಗಳು
* ಅಂಗವಿಕಲ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
* ಮೊದಲಿಗೆ ಈ ಲಿಂಕ್ ಕ್ಲಿಕ್ ಮಾಡುವ ಮೂಲಕ
https://kpsc.kar.nic.in/ ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ಗೆ ಭೇಟಿ ನೀಡಿ
* ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿವರಗಳನ್ನು ತುಂಬಿಸಿ ಪೂರಕ ದಾಖಲೆಗಳನ್ನು ಸಲ್ಲಿಸಿ, ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಪ್ಪದೇ ಇದಕ್ ಇ-ರಸೀಪಿ ಪಡೆದುಕೊಳ್ಳಲಿ ಅರ್ಜಿ ಸ್ವೀಕೃತಿ ಪ್ರತಿ ಕೂಡ ಪಡೆಯಿರಿ.
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ದಾಖಲೆಗಳ ಪರಿಶೀಲನೆ
* ಸಂದರ್ಶನ
ಈ ಸುದ್ದಿ ಓದಿ:- ರೈಲ್ವೆ ಇಲಾಖೆ ನೇರ ನೇಮಕಾತಿ, 10ನೇ ತರಗತಿ ITI ಆದವರು ಅರ್ಜಿ ಸಲ್ಲಿಸಿ.!
ಅರ್ಜಿ ಶುಲ್ಕ:-
* SC / ST / Cat-I / PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
* 2A / 2B / 3A / 3B ಅಭ್ಯರ್ಥಿಗಳು: ರೂ.300/-
* ಸಾಮಾನ್ಯ ಅಭ್ಯರ್ಥಿಗಳು – ರೂ.600
* ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಅಥವಾ ಮೂಲಕ ಪಾವತಿ ಮಾಡಬಹುದು.
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 15 ಏಪ್ರಿಲ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 15 ಮೇ, 2024.