ಹೌದು, ಈ ಸುದ್ದಿ ನಿಜ. ನೀವು ಎಂಟನೇ ತರಗತಿ ಪಾಸ್ ಆಗಿದ್ದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬಹುದು. ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು ಕುಶಲಕರ್ಮಿ ಹುದ್ದೆಗೆ ಎಂಟನೇ ತರಗತಿ ಆದವರು ಹಾಗೂ ಅದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸ ಹೊಂದಿದ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದಕ್ಕಾಗಿ ಭಾರತೀಯ ಅಂಚೆ ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಕೂಡ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕಡೆ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸರ್ಕಾರಿ ಹುದ್ದೆ ಹೊಂದಬೇಕು ಎನ್ನುವ ಆಸೆ ಇಟ್ಟುಕೊಂಡಿರುವ ಅಭ್ಯರ್ಥಿಗಳಿಗಾಗಿ ಈ ಅಂಕಣದಲ್ಲಿ ಅಧಿಸೂಚನೆಯಲ್ಲಿರುವ ಕೆಲವು ಪ್ರಮುಖ ಅಂಶಗಳ ಬಗ್ಗೆ ತಿಳಿಸುವ ಪ್ರಯತ್ನ ಮಾಡಲಾಗಿದೆ.
ಈ ಲೇಖನದಲ್ಲಿ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ಹುದ್ದೆಗಳ ವಿವರ ವೇತನ ಶ್ರೇಣಿ ಅರ್ಜಿ ಸಲ್ಲಿಕೆಗೆ ಕಡೆ ದಿನಾಂಕ ಅರ್ಜಿ ಶುಲ್ಕ ವಯೋಮಿತಿ ಶೈಕ್ಷಣಿಕ ಅರ್ಹತೆ ಇತ್ಯಾದಿ ವಿಷಯಗಳನ್ನು ತಿಳಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ತಿಳಿದುಕೊಳ್ಳಿ. ಜೊತೆಗೆ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗೂ ಕುಟುಂಬದವರ ಜೊತೆಗೂ ಕೂಡ ಹಂಚಿಕೊಳ್ಳಿ.
ಇಲಾಖೆ:- ಭಾರತೀಯ ಅಂಚೆ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ :- 100
ಹುದ್ದೆಗಳ ವಿವರ :- ಕುಶಲಕರ್ಮಿ (skilled artisan)
ಉದ್ಯೋಗ ಸ್ಥಳ :- ಚಂಡೀಗಢ
ಶೈಕ್ಷಣಿಕ ವಿದ್ಯಾರ್ಹತೆ :- ಈ ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆ ಹೊರಡಿಸುವ ಅಧಿಸೂಚನೆ ಪ್ರಕಾರ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕನಿಷ್ಠ 8ನೇ ತರಗತಿಯನ್ನು ಉತ್ತೀರ್ಣ ಆಗಿರಬೇಕು.
ವೇತನ ಶ್ರೇಣಿ :- 19,900 – 63,200
ವಯೋಮಿತಿ :- ಭಾರತೀಯ ಅಂಚೆ ಇಲಾಖೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಜುಲೈ 1, 2023 ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :-
●SC & ST ಅಭ್ಯರ್ಥಿಗಳಿಗೆ 5 ವರ್ಷ
●OBC ಅಭ್ಯರ್ಥಿಗಳಿಗೆ 3 ವರ್ಷ
ಅರ್ಜಿ ಶುಲ್ಕ :-
●SC & ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
●ಉಳಿದ ಅಭ್ಯರ್ಥಿಗಳು 100.ರೂ ಅರ್ಜಿ ಶುಲ್ಕ ಹಾಗೂ 400.ರೂ ಪರೀಕ್ಷಾ ಶುಲ್ಕ ಪಾವತಿಸಬೇಕು.
●ಇಂಡಿಯನ್ ಪೋಸ್ಟಲ್ ಆರ್ಡರ್ ಮೂಲಕ ಶುಲ್ಕ ಪಾವತಿಸಬೇಕು.
ಆಯ್ಕೆ ವಿಧಾನ :-
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಟ್ರೇಡಿಂಗ್ ಟೆಸ್ಟ್ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ :-
●ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಕಡ್ಡಾಯವಾಗಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
●ಅರ್ಜಿ ಸಲ್ಲಿಕೆಗೆ ಕೇಳಲಾದ ಅರ್ಹತ ಮಾನದಂಡಗಳಿಗೆ ಸಂಬಂಧಪಟ್ಟ ಪ್ರಮಾಣಪತ್ರಗಳ ಪ್ರತಿಯೊಂದಿಗೆ ಇತ್ತೀಚಿನ ಭಾವಚಿತ್ರದ ಸಮೇತ ಅರ್ಜಿ ಬರೆದು ಸಹಿ ಮಾಡಿ ಅಧಿಸೂಚನೆಯಲ್ಲಿ ತಿಳಿಸಲಾದ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಕಳುಹಿಸಬೇಕಾದ ವಿಳಾಸ :-
ಮ್ಯಾನೇಜರ್,
ಮೇಲ್ ಮೋಟರ್ ಸೇವೆ,
GPO ಕಟ್ಟಡ ಸೆಕ್ಟರ್ 17D,
ಚಂಡೀಗಢ – 160017
ಪ್ರಮುಖ ದಿನಾಂಕಗಳು :-
●ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 15.03.2023
●ಅರ್ಜಿ ಸಲ್ಲಿಕೆಗೆ ಕಡೆ ದಿನಾಂಕ – 15.04.2023