PUC ಪಾಸ್ ಆದವರಿಗೆ ಜಿಲ್ಲಾ ನ್ಯಾಯಾಲಯಗಳಲ್ಲಿ ಉದ್ಯೋಗವಕಾಶ, ವೇತನ 52,650/- ಯಾವುದೇ ಪರೀಕ್ಷೆ ಇಲ್ಲ ನೇರ ನೇಮಖಾತಿ ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

 

WhatsApp Group Join Now
Telegram Group Join Now

ಕರ್ನಾಟಕದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಜಿಲ್ಲಾ ನ್ಯಾಯಾಲಯಗಳಲ್ಲಿ ಉದ್ಯೋಗ ಮಾಡುವಂತಹ ಸುವರ್ಣವಕಾಶ ಸಿಗುತ್ತಿದೆ. ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಬಾರಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಇದಕ್ಕಾಗಿ ಜಿಲ್ಲಾ ಸತ್ರ ನ್ಯಾಯಾಲಯ ಹೊರಡಿಸಿರುವ ಆದೇಶದ ಪ್ರಕಾರ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಳ್ಳುವ ಸಲುವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ, ಒಟ್ಟು ಹುದ್ದೆಗಳ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇತ್ಯಾದಿ ಮಾಹಿತಿಗಳ ಬಗ್ಗೆ ಈ ಅಂಕಣದಲ್ಲಿ ತಿಳಿಸಿಕೊಡುತ್ತಿದ್ದೇವೆ.

ಉದ್ಯೋಗ ಸಂಸ್ಥೆ:- ಜಿಲ್ಲಾ ನ್ಯಾಯಾಲಯ
ಉದ್ಯೋಗ ಸ್ಥಳ:- ಬೆಳಗಾವಿ
ಹುದ್ದೆ ಹೆಸರು:- ಶೀಘ್ರ ಲಿಪಿಗಾರರು
ಒಟ್ಟು ಹುದ್ದೆಗಳ ಸಂಖ್ಯೆ:- 13

ವೇತನ ಶ್ರೇಣಿ:-
27,650 – 52,650 ರೂ. ಮಾಸಿಕವಾಗಿ…

ಶೈಕ್ಷಣಿಕ ವಿದ್ಯಾರ್ಹತೆ:-

● ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

● ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರಲಿಪಿ ಪರೀಕ್ಷೆಯಲ್ಲಿ ಹಿರಿಯ ದರ್ಜೆ ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯದರ್ಜೆ ಪಡೆದಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

● ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರ ಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯಗಳಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:-

● ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
● ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷಗಳು.
● 2A,2B,3A,3B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷಗಳು.
● SC / ST ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳು.

ಅರ್ಜಿ ಶುಲ್ಕ:-

● ಸಾಮಾನ್ಯ, 2A,2B,3A,3B ಅಭ್ಯರ್ಥಿಗಳಿಗೆ 300ರೂ.
● SC / ST, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರುವುದಿಲ್ಲ.
● ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿಶುಲ್ಕ ಪಾವತಿಸಬಹುದು.
● ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಖಾತೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸುವ ವಿಧಾನ:-

● ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
● ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
● ಅರ್ಜಿ ಶುಲ್ಕ ಪಾವತಿ ಮಾಡಿದ ಬಳಿಕ ಅರ್ಜಿ ಸ್ವೀಕೃತಿ ಸಿಗುತ್ತದೆ ಅದನ್ನು ಭವಿಷ್ಯದ ಬಳಕೆಗಾಗಿ ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಬೇಕು.

ಆಯ್ಕೆ ವಿಧಾನ:-

ಶೀಘ್ರಲಿಪಿಗಾರರ ಹುದ್ದೆಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳ ಹಾಗೂ ಅವರ ನಿಗದಿ ಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು:-

● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 21.07.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21.08.2023
● ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ – 24.08.2023.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now