ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಎಲ್ಲಾ ಗಣ್ಯರ ಸಮ್ಮುಖದಲ್ಲಿ ನೀಡಲಾಗಿದೆ ಈ ಒಂದು ಪ್ರಶಸ್ತಿಯನ್ನು ಅಶ್ವಿನಿ ಅವರು ಅಪ್ಪು ಅವರ ಪರವಾಗಿ ಪಡೆದುಕೊಂಡಿದ್ದಾರೆ ಈ ಒಂದು ಪ್ರಶಸ್ತಿ ಪಡೆದುಕೊಂಡ ನಂತರ ಮನೆಯಲ್ಲಿ ಅಪ್ಪು ಅವರ ಫೋಟೋ ಮುಂದೆ ಅಶ್ವಿನಿ ಹಾಗೂ ಅವರ ಮಗಳು ಮೆಡಲ್ ಇಟ್ಟು ಪುನೀತ್ ಅವರಿಗೆ ಸಮರ್ಪಣೆಯನ್ನು ಮಾಡಿದ್ದಾರೆ, ಈ ಒಂದು ದೃಶ್ಯವನ್ನು ನೋಡುತ್ತಿದ್ದರೆ ನಿಜಕ್ಕೂ ಕಣ್ತುಂಬಿ ಬರುತ್ತದೆ. ಅತಿ ಚಿಕ್ಕ ವಯಸ್ಸಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮೊದಲ ಬಾರಿಗೆ ನಮ್ಮ ಅಪ್ಪು ಅವರು ಪಡೆದುಕೊಂಡಿದ್ದಾರೆ ಇನ್ನು ಇವರ ಸಾಧನೆಯನ್ನು ನೋಡಿದರೆ ಹೆಮ್ಮೆಯಾಗುತ್ತದೆ.
ಅವರು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಸಹ ಮಾನಸಿಕವಾಗಿ ನಮ್ಮ ಜೊತೆಯಲ್ಲಿ ಇದ್ದೇ ಇರುತ್ತಾರೆ ಅವರ ಮಾರ್ಗದರ್ಶನದಲ್ಲಿ ಎಲ್ಲವೂ ಸಾಗುತ್ತದೆ ಅಪ್ಪು ಅವರನ್ನು ಕುರಿತಾದಂತಹ ಸಾಕಷ್ಟು ಕಾರ್ಯಕ್ರಮಗಳು ನಮ್ಮ ಕನ್ನಡ ಚಿತ್ರರಂಗದವರು ನಡೆಸಿಕೊಡುತ್ತಿದ್ದಾರೆ. ಇನ್ನು ದೊಡ್ಡ ಮನೆ ಕುಟುಂಬಕ್ಕೆ ಇದೊಂದು ದೊಡ್ಡ ಉಡುಗೊರೆ ಎಂದು ಹೇಳಬಹುದು ನಮ್ಮ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವಂತಹ ಸಂದರ್ಭದಲ್ಲಿ ರಾಜ್ ಕುಟುಂಬದ ಎಲ್ಲಾ ಸದಸ್ಯರು ಸಹ ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಪುನೀತ್ ರಾಜ್‌ಕುಮಾರ್ ಅವರ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಗಣ್ಯರ ಸಮ್ಮುಖದಲ್ಲಿ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಳೆಯನ್ನೂ ಕೂಡ ಲೆಕ್ಕಿಸದೇ ಸಹಸ್ರಾರು ಮಂದಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದನ್ನು ಕಣ್ತುಂಬಿಕೊಂಡಿದ್ದು ಕಾರ್ಯರ್ಕಮದಲ್ಲಿ ಡಾ.ಸುಧಾಮೂರ್ತಿ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಪ್ರಶಸ್ತಿ ನೀಡುವ ಮಾಡುವ ಮೂಲಕ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಇನ್ನು ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ನಟ ರಜನಿಕಾಂತ ಅಪ್ಪು ಸಾಧಾರಣ ವ್ಯಕ್ತಿಯಲ್ಲ ಆತ ಅಪಾರವಾದದ್ದನ್ನು ಸಾಧಿಸಿದ್ದಾರೆ. ಕಲಿಯುಗಕ್ಕೆ ಪುನೀತ್ ದೇವರ ಮಗು ಮಾರ್ಕಾಂಡೇಯರ ಸಾಲಿಗೆ ಸೇರುವವರು ಅವರು. ರಾಜ್ ಕುಮಾರ್ ಅವರು 50 ವರ್ಷದಲ್ಲಿ ಸಾಧಿಸಿದ್ದನ್ನು ಅಪ್ಪು 20 ವರ್ಷಗಳಲ್ಲಿ ಸಾಧಿಸಿದ್ದರು. ಅಪ್ಪು ಯಾವಾಗಲೂ ನಮ್ಮೊಂದಿಗೇ ಇರ್ತಾರೆ. ಕೇವಲ ನಟನೆಯಿಂದಷ್ಟೇ ಜನರನ್ನು ಗೆಲ್ಲಲು ಸಾಧ್ಯವಿಲ್ಲ. ಆದರ್ಶಗಳ ಮೂಲಕ ಗೆಲ್ಲಬಹುದು ಅದು ನಮ್ಮ ಅಪ್ಪು ಮಾಡಿದ್ದಾರೆ ಎಂದು ಬಣ್ಣಿಸಿದ್ದಾರೆ.
ಸಾಕಷ್ಟು ಮಳೆಯಲ್ಲಿಯೂ ಸಹ ಈ ಒಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಡೆಸಿಕೊಡಲಾಯಿತು ಎಲ್ಲ ಗಣ್ಯರು ಸಹ ತುಂಬ ಮನಸ್ಸಿನಿಂದ ಈ ಒಂದು ಕಾರ್ಯಕ್ರಮವನ್ನು ನಡೆಸಿ ಕೊಟ್ಟರು ಅಷ್ಟೇ ಅಲ್ಲದೆ ಸಾಕಷ್ಟು ಅಭಿಮಾನಿಗಳು ಮಳೆಯಲ್ಲಿಯೂ ಅಪ್ಪು ಅವರ ಸಲುವಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರೂ, ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿ ಆದಂತಹ ಅನುಶ್ರೀ ಅವರು ಸಹ ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಈ ವಿಡಿಯೋ ಸಹ ಎಲ್ಲೆಡೆ ವೈರಲ್ ಆಗಿತ್ತಿದೆ. ಈ ಒಂದು ಸಮಾರದಂಬಕ್ಕೆ ಮಳೆ ಬಂದದ್ದರಿಂದ ಶುಭ ಸೂಚನೆ ಎಂದು ಎಲ್ಲರೂ ಸಹ ತಿಳಿಸಿದ್ದಾರೆ ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ.