ಭಾರತದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ ನಡೆಯುತ್ತಿದ್ದು ಸುಮಾರು 3,000ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಈ ಹುದ್ದೆಗಳಿಗೆ ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ಕೇಳಿರುವ ವಯೋಮಾನ ಮತ್ತು ವಿದ್ಯಾರ್ಹತೆ ಹೊಂದಿರುವ ಭಾರತದ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಆಕಾಂಕ್ಷಿಗಳಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪ್ರಕಟಣೆಗಳು ತಿಳಿಸಿರುವ ಪ್ರಮುಖ ಅಂಶಗಳಾದ ಉದ್ಯೋಗ ಸ್ಥಳ, ವೇತನ ಶ್ರೇಣಿ, ಹುದ್ದೆಗಳ ವಿವರ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಇತ್ಯಾದಿ ವಿಷಯಗಳ ಬಗ್ಗೆ ತಿಳಿಸಿಕೊಡುತ್ತಿದ್ದೇವೆ.
ಇಲಾಖೆ:- ಭಾರತೀಯ ರೈಲ್ವೆ ಇಲಾಖೆ
ಉದ್ಯೋಗ ಸ್ಥಳ:- ಭಾರತದಾದ್ಯಂತ…
ಒಟ್ಟು ಹುದ್ದೆಗಳನ್ನು ಸಂಖ್ಯೆ:- 3624
ಹುದ್ದೆಯ ವಿಧ:- ಅಪ್ರೆಂಟಿಸ್ ಹುದ್ದೆಗಳು
ಹುದ್ದೆಗಳ ವಿವರ:-
● ಫಿಟ್ಟರ್
● ವೆಲ್ಡರ್
● ಟರ್ನರ್
● ಮಿಷಿನಿಸ್ಟ್
● ಕಾರ್ಪೆಂಟರ್
● ಪೇಂಟರ್ (ಜನರಲ್)
● ಮೆಕ್ಯಾನಿಕ್ (DSL)
● ಮೆಕ್ಯಾನಿಕ್ (ಮೋಟಾರ್ ವೆಹಿಕಲ್)
● ಪ್ರೋಗ್ರಾಮಿಂಗ್ ಅಂಡ್ ಸಿಸ್ಟಮ್ ಅಡ್ಮಿನಿಸ್ಟ್ರೇಷನ್ ಅಸಿಸ್ಟೆಂಟ್
● ಎಲೆಕ್ಟ್ರಿಷಿಯನ್
● ಎಲೆಕ್ಟ್ರಿಷಿಯನ್ ಮೆಕಾನಿಕ್
● ವಯರ್ ಮ್ಯಾನ್
● ಮೆಕಾನಿಕ್ ರೆಫ್ರಿಜರೇಷನ್ & ಎಸಿ
● ಪೈಪ್ ಫಿಟ್ಟರ್
● ಪ್ಲಂಬರ್
● ಡ್ರಾಪ್ಸ್ ಮ್ಯಾನ್ (ಸಿವಿಲ್)
● ಸ್ಟೆನೋಗ್ರಾಫರ್
ವೇತನ ಶ್ರೇಣಿ:-
17,000 – 40,000 ಮಾಸಿಕವಾಗಿ
ಶೈಕ್ಷಣಿಕ ವಿದ್ಯಾರ್ಹತೆ:-
● 10ನೇ ತರಗತಿಯನ್ನು ಕನಿಷ್ಠ 50% ಗೆ ಕಡಿಮೆ ಇಲ್ಲದಂತೆ ಪಾಸ್ ಮಾಡಿದವರು ಅರ್ಜಿ ಸಲ್ಲಿಸಬಹುದು.
● ಆಯಾ ಟ್ರೇಡ್ ಗೆ ತಕ್ಕಂತೆ ITI ಪಾಸ್ ಮಾಡಿದವರು ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ:-
● ಕನಿಷ್ಠ 18 ವರ್ಷಗಳು
● ಗರಿಷ್ಠ 24 ವರ್ಷಗಳು
ವಯೋಮಿತಿ ಸಡಿಲಿಕೆ:-
● OBC ಅಭ್ಯರ್ಥಿಗಳಿಗೆ 3 ವರ್ಷಗಳು
● SC/ST ಅಭ್ಯರ್ಥಿಗಳಿಗೆ 5 ವರ್ಷಗಳು
● ಮಾಜಿ ಸೈನಿಕ ಮತ್ತು PWD ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಶುಲ್ಕ:-
● SC/ST, PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
● ಉಳಿದ ಅಭ್ಯರ್ಥಿಗಳಿಗೆ 100ರೂ.
ಆಯ್ಕೆ ವಿಧಾನ:-
● ಅಭ್ಯರ್ಥಿಗಳು ಶೈಕ್ಷಣಿಕ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರ ಮೇಲೆ ಮೆರಿಟ್ ಲಿಸ್ಟ್ ತಯಾರಿಸಲಾಗುವುದು.
● ಆ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ನಡೆಸಿ ಭರ್ತಿ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿ ಫಾರಂ ಫಿಲ್ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು.
● ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
● ಆಧಾರ್ ಕಾರ್ಡ್
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಅಂಗವಿಕಲ ಅಭ್ಯರ್ಥಿಗಳಿಗೆ ಧೃಡೀಕರಿಸಿದ ವೈದ್ಯಕೀಯ ಪ್ರಮಾಣ ಪತ್ರ
● ಇನ್ನಿತರ ಪ್ರಮಾಣ ಪತ್ರಗಳು
ಪ್ರಮುಖ ದಿನಾಂಕಗಳು
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 27.06.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 26.07.2023