ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ರಾಜ್ಯದ ಮಹಿಳೆಯರಿಗಾಗಿ ಮತ್ತು ಮಕ್ಕಳಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಆರ್ಥಿಕವಾಗಿ ಸದೃಡರನ್ನಾಗಿಸುವುದು ಮತ್ತು ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕತೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಕಾಳಜಿ ಮಾಡುತ್ತಾ ಜಾಗೃತಿ ಮೂಡಿಸುವುದಕ್ಕಾಗಿ ಅನೇಕ ಅಭಿಯಾನಗಳನ್ನು ನಡೆಸುವ ಇಲಾಖೆಯು ಇತ್ತೀಚಿಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಹೆಚ್ಚು ಸುದ್ದಿಯಲ್ಲಿತ್ತು.
ಇದಾದ ಬಳಿಕ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಕಡೆಗೆ ಗಮನಹರಿಸಿದ್ದು ಆ ಪ್ರಕಾರ ಈಗ ಯಾದಗಿರಿ ಜಿಲ್ಲೆಯ ಮಕ್ಕಳ ರಕ್ಷಣಾ ಘಟಕದ ಕಚೇರಿಯ ಅಧೀನದಲ್ಲಿ ಬರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ ಸಂಸ್ಥೆಯಲ್ಲಿ ಖಾಲಿ ಇರುವ ಗೃಹಪಾಲಕಿ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರಾಜ್ಯದ ಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹುದ್ದೆಗಿಟ್ಟಿಸಿಕೊಳ್ಳುವುದು ಹೆಮ್ಮೆ ಕೂಡ ಆಗಿರುವುದರಿಂದ ಇಂತಹ ವಿಶೇಷವಾದ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಮಹಿಳೆಯರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ನಾವು ಸಹ ಈ ಅಂಕಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಈ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ? ಮತ್ತು ಅರ್ಜಿ ಸಲ್ಲಿಸುವವರು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು? ಎನ್ನುವುದರ ಬಗ್ಗೆ ತಿಳಿಸಿಕೊಡುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
ಉದ್ಯೋಗ ಸ್ಥಳ:- ಯಾದಗಿರಿ ಜಿಲ್ಲಾ ಮಹಿಳಾ ರಕ್ಷಣಾ ಘಟಕ
ಒಟ್ಟು ಹುದ್ದೆಗಳ ಸಂಖ್ಯೆ:- 01
ಉದ್ಯೋಗ ಸ್ಥಳ:- ಯಾದಗಿರಿ
ವೇತನ ಶ್ರೇಣಿ:-
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೇಮಕಾತಿ ನಂತರ ವೇತನವನ್ನು ನಿರ್ಧರಿಸಿ ಸಮಾಧಾನಕರ ವೇತನವನ್ನು ನೀಡುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:-
* ಕರ್ನಾಟಕ ರಾಜ್ಯದ ಮಹಿಳೆಯರಿಗಷ್ಟೇ ಅರ್ಜಿ ಸಲ್ಲಿಸಲು ಅವಕಾಶ
* 25 ವರ್ಷ ಮೇಲ್ಪಟ್ಟ 38 ವರ್ಷದ ವಯೋಮಾನದ ಯಾವುದೇ ವರ್ಗಕ್ಕೆ ಸೇರಿದ ಮಹಿಳೆಯು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
* ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ PUC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
* ಕಂಪ್ಯೂಟರ್ ಶಿಕ್ಷಣವನ್ನು ಪಡೆದಿರಬೇಕು
* ಡಿ. ಎಡ್ ಅಥವಾ ಬಾಲಸೇವಿಕ ತರಬೇತಿ ಹೊಂದಿರುವ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.
* ಈ ನೇಮಕಾತಿ ಕುರಿತಾದ ಇನ್ನು ವಿಸ್ತಾರವಾದ ಮಾಹಿತಿಯನ್ನು ತಿಳಿದುಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಪ್ರಕಟಣೆಯನ್ನು ಓದಿ ಅರ್ಥೈಸಿಕೊಳ್ಳಬಹುದು.
ಅರ್ಜಿ ಸಲ್ಲಿಸುವ ವಿಧಾನ:-
* ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಇತ್ತೀಚಿನ ಫೋಟೊ, ಅಗತ್ಯ ವಿದ್ಯಾರ್ಹತೆ, ಅನುಭವ & ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಡೆ ದಿನಾಂಕದ ಒಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿ (DCPO), ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೋಣೆ ಸಂಖ್ಯೆ C-17 ಒಂದನೇ ಮಹಡಿ ಆಡಳಿತ ಭವನ ಯಾದಗಿರಿ ಈ ವಿಳಾಸಕ್ಕೆ ತಲುಪಿಸಬೇಕು.
ಅರ್ಜಿ ಶುಲ್ಕ:-
ರೂ. 100 ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯಾದಗಿರಿ ಈ ಹೆಸರಿನಲ್ಲಿ ತೆಗೆದುಕೊಂಡು ಅರ್ಜಿಯ ಜೊತೆ ಕಳುಹಿಸಿಕೊಡಬೇಕು.
ಆಯ್ಕೆ ವಿಧಾನ:-
* ಕಂಪ್ಯೂಟರ್ ಸ್ಕಿಲ್ ಪರೀಕ್ಷೆ
* ಸಂದರ್ಶನ
* ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-11-2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2023.