LIC ಯಲ್ಲಿ ಖಾಲಿ ಇರುವ 7000 ಹುದ್ದೆಗಳ ನೇಮಕಾತಿ, ವೇತನ 78,230/-

ದೇಶದ ಪ್ರತಿಷ್ಠಿತ ವಿಮಾ ಸಂಸ್ಥೆಗಳಲ್ಲಿ ಹೆಸರಾಂತ ಸಂಸ್ಥೆಯಾಗಿರುವ LIC (Life Insurance Corporation Of India) ಯಲ್ಲಿ ಬೃಹತ್ ನೇಮಕಾತಿ (LIC Assistant Recruitment) ಕುರಿತು ಅಧಿಸೂಚನೆ ಹೊರಡಿಸಿದೆ. ದೇಶದಾದ್ಯಂತ ಇರುವ ಎಲ್ಲ ಉದ್ಯೋಗ ಆಕಾಂಕ್ಷಿಗಳಿಗೆ ದೇಶದ ಪ್ರತಿಷ್ಠಿತ ಸಂಸ್ಥೆಯ ಭಾಗವಾಗಿ ಕಾರ್ಯನಿರ್ವಹಿಸುವಂತಹ ಅವಕಾಶ ಸಿಗುತ್ತದೆ.

WhatsApp Group Join Now
Telegram Group Join Now

ಎಲ್ಲಾ ಉದ್ಯೋಗಾಸಕ್ತರು ಇದರ ಪ್ರಯೋಜನ ಪಡೆದುಕೊಳ್ಳಲಿ ಎನ್ನುವ ಉದ್ದೇಶದಿಂದ ನಾವು ಸಹ ಈ ಅಂಕಣದಲ್ಲಿ ನೇಮಕಾತಿ ಕುರಿತ ಪ್ರಮುಖ ಸಂಗತಿಗಳಾದ ಹುದ್ದೆಗಳ ವಿವರ, ನೇಮಕಾತಿ ವಿಧಾನ, ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕಗಳು ಇತ್ಯಾದಿ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ತಪ್ಪದೆ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.

ಈ ಸುದ್ದಿ ಓದಿ:- ಉಚಿತ ಕಂಪ್ಯೂಟರ್ ತರಬೇತಿ DTP ಮತ್ತು ಗ್ರಾಫಿಕ್ ಡಿಸೈನಿಂಗ್ ಕೋರ್ಸ್ ಕಲಿಯಿರಿ.!

ನೇಮಕಾತಿ ಸಂಸ್ಥೆ:- ಭಾರತೀಯ ಜೀವ ವಿಮಾ ನಿಗಮ (LIC)
ಹುದ್ದೆ ಹೆಸರು:- ಅಸಿಸ್ಟೆಂಟ್ ಹುದ್ದೆಗಳು
ಹುದ್ದೆಗಳ ವಿವರ:- 7,000 ಹುದ್ದೆಗಳು
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.63,840 ರಿಂದ ರೂ.78,230 ವೇತನ ಸಿಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಲೆ, ವಾಣಿಜ್ಯ ಅಥವಾ ವಿಜ್ಞಾನ ವಿಭಾಗದಲ್ಲಿ ಪದವಿ ಪಡೆದಿರಬೇಕು

ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷಗಳು

ಈ ಸುದ್ದಿ ಓದಿ:- 1 ಲೀಟರ್ ಹಾಲಿಗೆ 7 ಸಾವಿರ ತಿಂಗಳಿಗೆ 1 ಲಕ್ಷ ಆದಾಯ ಗ್ಯಾರೆಂಟಿ.!

ವಯೋಮಿತಿ ಸಡಿಲಿಕೆ:-
* SC / ST ವರ್ಗದ ಅಭ್ಯರ್ಥಿಗಳಿಗೆ 05 ವರ್ಷಗಳು
* OBC ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 03 ವರ್ಷಗಳು
* LIC ಇಂಡಿಯ ನೇಮಕಾತಿ ನಿಯಮಗಳ ಪ್ರಕಾರವಾಗಿ ವಿವಿಧ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:-

* LIC ಅಧಿಕೃತ ವೆಬ್ ಸೈಟ್ ಆದ https://licindia.in/ ಭೇಟಿ ಕೊಡಿ
* ಅರ್ಜಿ ಸಲ್ಲಿಸಲು ಸೂಚಿಸಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಕೇಳಿರುವ ಎಲ್ಲಾ ವೈಯಕ್ತಿಕ ವಿವರಗಳಲ್ಲಿ ಸರಿಯಾದ ಮಾಹಿತಿಯನ್ನು ಭರ್ತಿ ಮಾಡಿ
* ಪೂರಕ ದಾಖಲೆಗಳ ಸಂಖ್ಯೆಗಳನ್ನು ನಮೂದಿಸಿ ಅಥವಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
* ನಿಮ್ಮ ವರ್ಗಕ್ಕೆ ಸೂಚಿಸಿರುವ ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರದಲ್ಲಿ ಪಾವತಿಸಿ ಇ-ರಸೀದಿ ಪಡೆದುಕೊಂಡು ಆ ಸಂಖ್ಯೆ ಮಾಹಿತಿಯನ್ನು ಕೂಡ ಎಂಟ್ರಿ ಮಾಡಿ
* ಅಂತಿಮವಾಗಿ ಪ್ರಕ್ರಿಯೆ ಪೂರ್ತಿ ಕೊಂಡ ಬಳಿಕ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ.

ಈ ಸುದ್ದಿ ಓದಿ:- ಹಸುವಿನ ಕೊಟ್ಟಿಗೆ ನಿರ್ಮಾಣಕ್ಕೆ ಸರ್ಕಾರದಿಂದ 2 ಲಕ್ಷ ಸಹಾಯಧನ ಆಸಕ್ತರು ಅರ್ಜಿ ಸಲ್ಲಿಸಿ.!

ಆಯ್ಕೆ ವಿಧಾನ:-

* ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೂ ಕೂಡ ಮೊದಲಿಗೆ ಲಿಖಿತ ರೂಪದಲ್ಲಿ ಬಹು ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ
* ಆಯ್ಕೆ ಆದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ನಡೆಯುತ್ತದೆ
* ನಂತರ ಆಯ್ಕೆ ಆದವರಿಗೆ ಸಂದರ್ಶನ ನಡೆಸಿ ಅವರ ದಾಖಲೆಗಳನ್ನು ಪರಿಶೀಲಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು.

ಪ್ರಮುಖ ದಿನಾಂಕಗಳು:-

ಜುಲೈ ತಿಂಗಳ ಮೊದಲನೇ ವಾರದಲ್ಲಿ ಈ ಹುದ್ದೆ ನೇಮಕಾತಿ ಕುರಿತಾಗಿ LIC ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಮಾಹಿತಿ ಹಂಚಿಕೊಳ್ಳಲಿದೆ ಎನ್ನುವ ಮಾಹಿತಿಯು ಬಲವಾದ ಮೂಲಗಳಿಂದ ತಿಳಿದು ಬಂದಿದೆ. ಆಕಾಂಕ್ಷಿಗಳು ಈಗಿನಿಂದಲೇ ತಯಾರಿಸಲು ಮಾಡಿಕೊಳ್ಳಲಿ ಎನ್ನುವ ಉದ್ದೇಶದಿಂದ ಶೀಘ್ರವಾಗಿ ಮಾಹಿತಿ ಹಂಚಿಕೊಂಡಿದ್ದೇವೆ. ಎಲ್ಲಾ ಅಭ್ಯರ್ಥಿಗಳಿಗೂ ಕೂಡ ಶುಭವಾಗಲಿ.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now