ಗ್ರಾಮ ಪಂಚಾಯತಿಯಲ್ಲಿ ಸೂಪರ್ವೈಸರ್ ಹುದ್ದೆಗಳ ನೇಮಕಾತಿ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.! ವೇತನ 15,196/-

 

WhatsApp Group Join Now
Telegram Group Join Now

ಉದ್ಯೋಗ ಅರಸಿ ಗ್ರಾಮೀಣ ಪ್ರದೇಶದ ಯುವಜನತೆ ಪಟ್ಟಣದತ್ತ ವಲಸೆ ಹೋಗುತ್ತಿದ್ದಾರೆ. IT ಕಂಪನಿಗಳ ಕೆಲಸವೇ ಆಗಲಿ ಸರ್ಕಾರಿ ಉದ್ಯೋಗಗಳೇ ಆಗಲಿ ನಾವಿದ್ದ ಸ್ಥಳಗಳಿಂದ ಕೆಲಸ ಮಾಡಲು ಸಾಧ್ಯವಿಲ್ಲ ಎನ್ನುವುದು ಎಷ್ಟೋ ಜನರ ಕೊರಗಾಗಿತ್ತು. ಹುಟ್ಟಿ ಬೆಳೆದ ಊರಿನಲ್ಲಿಯೇ ಬದುಕು ಕಟ್ಟಿಕೊಳ್ಳಬೇಕು ಅಲ್ಲೇ ಇದ್ದು ಕೆಲಸ ಮಾಡಬೇಕು ಎನ್ನುವುದು ಅನೇಕರ ಮನದಾಳದ ಮಾತು.

ಈಗ ಆ ರೀತಿ ಇಚ್ಛೆ ಪಡುತ್ತಿರುವವರಿಗೂ ಅವಕಾಶವೊಂದು ಸಿಗುತ್ತದೆ. ಯಾಕೆಂದರೆ ಗ್ರಾಮ ಪಂಚಾಯಿತಿಗಳಲ್ಲೂ (Grama Panchayath jobs) ಕೂಡ ಹಲವಾರು ರೀತಿಯ ಉದ್ಯೋಗಗಳು ಖಾಲಿ ಇರುತ್ತವೆ. ಅರ್ಹರು ಅದಕ್ಕೆ ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು ಗಿಟ್ಟಿಸಿಕೊಂಡು ತಮ್ಮ ಗ್ರಾಮಗಳಲ್ಲಿಯೇ ಉದ್ಯೋಗ ಮಾಡಬಹುದಾಗಿದೆ.

ಅಂತೆಯೇ ಪ್ರಸ್ತುತವಾಗಿ ಈಗ ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ 14 ಲೈಬ್ರರಿ ಸೂಪರ್ವೈಸರ್ (Library Supervisor Recruitment) ಹುದ್ದೆಗಳು ಖಾಲಿ ಇದ್ದು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಸಂಬಂಧಪಟ್ಟ ಹೆಚ್ಚಿನ ವಿವರ ಹೀಗಿದೆ ನೋಡಿ.

ಈ ಸುದ್ದಿ ಓದಿ:- ಈ ದಿನ ಸಿಗಲಿದೆ ಹೊಸ ರೇಷನ್ ಕಾರ್ಡ್.!

ನೇಮಕಾತಿ ಸಂಸ್ಥೆ : ಶಿವಮೊಗ್ಗ ಗ್ರಾಮ ಪಂಚಾಯತ್ (Shimoga Gram Panchayath)
ಪೋಸ್ಟ್ ಹೆಸರು : ಲೈಬ್ರರಿ ಸೂಪರ್​ವೈಸರ್(Library Supervisor)
ಒಟ್ಟು ಹುದ್ದೆಗಳ ಸಂಖ್ಯೆ: 14
ಉದ್ಯೋಗ ಸ್ಥಳ: ಶಿವಮೊಗ್ಗ

ಹುದ್ದೆಗಳ ವಿವರ :
ಲೈಬ್ರರಿ ಸೂಪರ್ ವೈಸರ್– 14

ವಿದ್ಯಾರ್ಹತೆ:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛೆಪಡುವ ಅಭ್ಯರ್ಥಿಗಳು ಹುದ್ದೆಗಳು ಖಾಲಿ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರಬೇಕು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಕಡ್ಡಾಯವಾಗಿ ದ್ವಿತೀಯ PUC ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
* ಇದರೊಂದಿಗೆ ಹೆಚ್ಚುವರಿಯಾಗಿ ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು ಮತ್ತು ಇದು ಕಡ್ಡಾಯವಾಗಿದೆ.

ವಯೋಮಿತಿ:-

* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು

ವಯೋಮಿತಿ ಸಡಿಲಿಕೆ:

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇರುತ್ತದೆ
* ಪ್ರವರ್ಗ 2A / 2B / 3A / 3B ಅಭ್ಯರ್ಥಿಗಳಿಗೆ 03 ವರ್ಷಗಳ ಸಡಿಲಿಕೆ ಇರುತ್ತದೆ
* ಅಂಗವಿಕಲ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರುತ್ತದೆ.

ಈ ಸುದ್ದಿ ಓದಿ:- ಇನ್ಮೇಲೆ ಮನೆಯೇ ಕುಳಿತು ಆಸ್ತಿ ನೋಂದಣಿ ಮಾಡಲು ಅವಕಾಶ.!

ವೇತನ ಶ್ರೇಣಿ:-

ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಆರಂಭಿಕವಾಗಿ ರೂ.15,196 ವೇತನ ಇರುತ್ತದೆ ಮತ್ತು ಸರ್ಕಾರಿ ಹುದ್ದೆಗಳಿಗೆ ನೀಡುವ ಇನ್ನಿತರ ಸೌಕರ್ಯ ಇರುತ್ತದೆ

ಅರ್ಜಿ ಸಲ್ಲಿಸುವ ವಿಧಾನ:-

* ಆಫ್ ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು
* ಮೊದಲಿಗೆ https://shimoga.nic.in ವೆಬ್ಸೈಟ್ ವಿಳಾಸಕ್ಕೆ ಭೇಟಿ ಕೊಟ್ಟು ಅರ್ಜಿ ಫಾರಂ ಡೌನ್ಲೋಡ್ ಮಾಡಿಕೊಳ್ಳಬೇಕು.
* ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:-
ಉಪ ಕಾರ್ಯದರ್ಶಿ (ಆಡಳಿತ)
ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಸಮಿತಿ,
ಸದಸ್ಯ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್,
ಶಿವಮೊಗ್ಗ

ಆಯ್ಕೆ ಪ್ರಕ್ರಿಯೆ :
* ಸಲ್ಲಿಕೆ ಆಗುವ ಅರ್ಜಿಗಳ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಸುದ್ದಿ ಓದಿ:- ಗೃಹರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ, SSLC ಪಾಸ್ ಆಗಿದ್ದರೆ ಸಾಕು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 05 ಫೆಬ್ರವರಿ, 2024
* ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ – 23 ಏಪ್ರಿಲ್, 2024.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now