ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ.! ವೇತನ 62,600

 

WhatsApp Group Join Now
Telegram Group Join Now

ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಈ ವರ್ಷ ಭರ್ಜರಿ ಅವಕಾಶಗಳು ಸಿಗುತ್ತಿದೆ ಎಂದೇ ಹೇಳಬಹುದು. ಯಾಕೆಂದರೆ ಕೇಂದ್ರ ಸರ್ಕಾರದ ಹುದ್ದೆಗಳು ಮಾತ್ರವಲ್ಲದೇ ರಾಜ್ಯ ಸರ್ಕಾರದ ಕಡೆಯಿಂದ ಕೂಡ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಆಗುತ್ತಿದ್ದೆ.

ಈ ಬಾರಿ ಬಹಳಷ್ಟು ಸಂಖ್ಯೆಯ ಅಭ್ಯರ್ಥಿಗಳ ಕನಸು ನನಸಾಗಲಿದೆ ಎನ್ನುವ ನಿರೀಕ್ಷೆ ಇಟ್ಟುಕೊಳ್ಳಬಹುದಾಗಿದ್ದು ಸದ್ಯಕ್ಕೆ KPSC ಕಡೆಯಿಂದ ಮತ್ತೊಂದು ನೇಮಕಾತಿ ಅಧಿಸೂಚನೆ ಬಿಡುಗಡೆಯಾಗಿದೆ. ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ. ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ ನೋಟಿಫಿಕೇಶನ್ ನಲ್ಲಿರುವ ಪ್ರಮುಖ ಅಂಶಗಳ ಬಗ್ಗೆ ಈ ಲೇಖನದಲ್ಲಿ ವಿವರ ನೀಡುತ್ತಿದ್ದೇವೆ.

ಈ ಸುದ್ದಿ ಓದಿ:- ಆಸ್ತಿ ಪತ್ರಗಳಿಗೆ ಆಧಾರ್ ಜೋಡಣೆ ಕಡ್ಡಾಯ.! ಅಧಿಕೃತವಾಗಿ ಮಾಹಿತಿ ಹಂಚಿಕೊಂಡ ಕಂದಾಯ ಸಚಿವರು.!

ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ (KPSC)
ಉದ್ಯೋಗ ಸಂಸ್ಥೆ:- ಸಾರಿಗೆ ಇಲಾಖೆ (Transport Department)
ಹುದ್ದೆ ಹೆಸರು:- ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ಸಿ)
ಒಟ್ಟು ಹುದ್ದೆಗಳ ಸಂಖ್ಯೆ:- 76 ಹುದ್ದೆಗಳು

ಹುದ್ದೆಗಳ ವಿವರ:-
* ಉಳಿಕೆ ಮೂಲ ವೃಂದ 70 ಹುದ್ದೆಗಳು
* ಹೈ – ಕ ವೃಂದ 06 ಹುದ್ದೆಗಳು

ಉದ್ಯೋಗ ಸ್ಥಳ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಸಾರಿಗೆ ಸಂಸ್ಥೆಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ಈ ಸುದ್ದಿ ಓದಿ:- ರೈಲ್ವೆ ಇಲಾಖೆಯಿಂದ ಮಹಿಳೆಯರಿಗೆ ಬಂಪರ್ ಗಿಫ್ಟ್.! ಇನ್ಮುಂದೆ ಈ ಸೇವೆಗಳು ಉಚಿತವಾಗಿ ಸಿಗಲಿದೆ.!

ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.33,450 ರಿಂದ ರೂ.62,600 ವೇತನ ಸಿಗುತ್ತದೆ.

ಅರ್ಹತಾ ಮನದಂಡಗಳು:-

1. ಶೈಕ್ಷಣಿಕ ವಿದ್ಯಾರ್ಹತೆ
* SSLC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಜೊತೆಗೆ ಮೂರು ವರ್ಷಗಳ ಡಿಪ್ಲೊಮಾ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರ್ ಅಥವಾ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಹೊಂದಿರಬೇಕು.
* ಲಘು ಮೋಟಾರು ವಾಹನ ಮತ್ತು ಮೋಟಾರು ಸೈಕಲ್ ವಾಹನ ಚಾಲನಾ ಪರವಾನಿಗೆ ಹೊಂದಿರಬೇಕು.

2. ಫಿಸಿಕಲ್ ಸ್ಟ್ಯಾಂಡರ್ಡ್
* ಪುರುಷರಿಗೆ – ಎತ್ತರ 168cm, ಎದೆ ಸುತ್ತಳತೆ 86cm ಪೂರ್ತಿ ವಿಸ್ತರಿಸಿದಾಗ (ಕನಿಷ್ಠ ವಿಸ್ತರಣೆ 5cm)
* ಮಹಿಳೆಯರಿಗೆ – ಎತ್ತರ 157cm, ತೂಕ 49Kg

3. ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
* ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇರುತ್ತದೆ
* SC / ST ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇರುತ್ತದೆ

ಅರ್ಜಿ ಸಲ್ಲಿಸುವ ವಿಧಾನ:-

* https://kpsc.kar.nic.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
* ಕೇಳಲಾಗುವ ವಿವರಗಳನ್ನು ಭರ್ತಿ ಮಾಡಿ ದಾಖಲೆಗಳ ಸಂಖ್ಯೆಯನ್ನು ನಮೂದಿಸಿ ಅರ್ಜಿ ಶುಲ್ಕ ಪಾವತಿಸಿ ಸಬ್ಮಿಟ್ ಮಾಡಿ ಅರ್ಜಿ ಸ್ವೀಕೃತಿ ಪ್ರತಿ ಮತ್ತು ಅರ್ಜಿ ಶುಲ್ಕ ಪಾವತಿಸಿರುವುದಕ್ಕೆ ಇ-ರಸೀದಿ ಪಡೆದುಕೊಳ್ಳಬೇಕು.

ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ಫಿಟ್ನೆಸ್ ಪರೀಕ್ಷೆ
* ಸಂದರ್ಶನ
* ದಾಖಲೆಗಳ ಪರಿಶೀಲನೆ

ಈ ಸುದ್ದಿ ಓದಿ:- ಸ್ಕೂಟರ್ ಖರೀದಿಗೆ ಸರ್ಕಾರದಿಂದ ಸಿಗಲಿದೆ 40,000 ಸಹಾಯಧನ.!

ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ಆನ್ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, UPI ಮೂಲಕ ಪಾವತಿಸಬಹುದು.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ. 600
* ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂ.300
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
* SC / ST, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಏಪ್ರಿಲ್ 22, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 21, 2024.

Leave a Comment

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now