ಪ್ರತಿ ವರ್ಷವೂ ಕೂಡ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಲಕ್ಷಾಂತರ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಅಂತೆಯೇ 2023-24 ನೇ ಸಾಲಿನಲ್ಲಿ ಕೂಡ ರಾಜ್ಯ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಹಂಚಿಕೆ ಕಾರ್ಯಕ್ರಮಕ್ಕೆ ಇದೇ ತಿಂಗಳ 9ರಂದು ಚಾಲನೆ ಸಿಗಲಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ದಾವಣಗೆರೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನವೆಂಬರ್ 4ರಂದು ನಡೆದ ಜಿಲ್ಲೆಯಲ್ಲಿ ಕಾರ್ಮಿಕ ಸಂಘಟನೆಗಳು ಹಾಗೂ ಉದ್ಯಮಿದಾರರೊಂದಿಗೆ ನಡೆಸಿದ ಸಮಾಲೋಚನೆ ಸಭೆಯಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಮಂಡಳಿಗೆ ಕಾರ್ಮಿಕರ ಮಕ್ಕಳು ವಿದ್ಯಾರ್ಥಿವೇತನಕ್ಕೆ ಸಲ್ಲಿಸಿದ ಅರ್ಜಿಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು.
ಈ ಪ್ರಕ್ರಿಯೆಗೆ ನ. 9 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮ ನಡೆಸಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದರು ಇದರ ಜೊತೆಗೆ ಈ ಸಮಾಲೋಚನೆ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚಿಸಿ ತೀರ್ಮಾನಿಸಲಾಯಿತು ಅದರ ಕುರಿತು ವಿವರ ಹೀಗಿದೆ.
ಕಾರ್ಮಿಕ ಕಲ್ಯಾಣ ಮಂಡಳಿ ಉಳಿಸಿ ಬೆಳೆಸಲು ಹೊಸ ಕಾನೂನು ಜಾರಿಗೆ ತರುವ ಸಿದ್ಧತೆ ಇದೆ, ಕಾರ್ಮಿಕ ಕಲ್ಯಾಣ ಮಂಡಳಿಯನ್ನು ಉಳಿಸಿ ಬೆಳೆಸುವ ಮತ್ತು ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಈ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇದಕ್ಕಾಗಿ ಹೊಸ ಆಪ್ ಕೂಡ ಬಿಡುಗಡೆ ಮಾಡಲಾಗುವುದು ಹೊಸ ಟೆಕ್ನಾಲಜಿಯಿಂದ ಎಲ್ಲ ಮಾಹಿತಿಯು ಸಂಗ್ರಹವಾಗಲಿರುವುದರಿಂದ ಸೆಸ್ ಸಂಗ್ರಹ ಮತ್ತು ನಿರ್ವಹಣೆ ಸುಲಭವಾಗಲಿದೆ ಹಾಗೂ ಪಾರದರ್ಶಕತೆ ಇರಲಿದೆ ಎಂದರು.
ಮನೆ ಕೆಲಸ ಮಾಡುವ ಅಸಂಘಟಿತ ಕಾರ್ಮಿಕರು ಮತ್ತು ಸ್ವಿಗ್ಗಿ ಜೊಮೊಟೊ ಸೇರಿದಂತೆ ವಿವಿಧ ಇ-ಕಾಮರ್ಸ್ ನಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೂ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಉದ್ದೇಶಿಸಲಾಗಿದ್ದು ಸೆಸ್ ಸಂಗ್ರಹ ಮೂಲಕ ಈ ವರ್ಷದಲ್ಲಿ ಅನುಷ್ಟಾನಕ್ಕೆ ತರುವ ವಿಶ್ವಾಸವಿದೆ ಎಂದು ಹೇಳಿದರು.
APMC ಗಳಲ್ಲಿ ಕೆಲಸ ಮಾಡುವ ಹಮಾಲರಿಗೆ 60 ವರ್ಷದ ನಂತರ ಅವರ ಪರವಾನಗಿಯನ್ನು ನವೀಕರಣ ಮಾಡಲಾಗುತ್ತಿಲ್ಲ, ಇದರಿಂದ ಜೀವನನಿರ್ವಹಣಾ ದುಡಿಮೆ ನಿಲ್ಲುತ್ತದೆ ಹಾಗಾಗಿ ವಯಸ್ಸನ್ನು 65 ವರ್ಷಗಳಿಗೆ ಏರಿಕೆ ಮಾಡಲು ಪರಿಶೀಲನೆ ನಡೆಸಲಾಗುತ್ತಿದೆ ಎಂದರು. ಚಿಂದಿ ಆಯುವವರ ಬದುಕು ದುಸ್ತರವಾಗಿದ್ದು.
ನಗರಸಭೆಯಿಂದ ಸಂಗ್ರಹವಾಗುವ ಒಣಕಸವನ್ನು ಚಿಂದಿ ಆಯುವವರಿಗೆ ನೀಡಬೇಕೆಂದು ಗೀತಮ್ಮ ಎನ್ನುವವರು ಸಭೆಯಲ್ಲಿ ಪ್ರಸ್ತಾಪಿಸಿದಾಗ ಸ್ವಸಹಾಯ ಗುಂಪುಗಳನ್ನು ರಚಿಸಿಕೊಂಡು ಮಹಿಳೆಯರು ಮುಂದೆ ಬಂದರೆ ಇದರ ಬಗ್ಗೆ ಅನುಕೂಲತೆ ಮಾಡಿಕೊಡಲಾಗುವುದು ಎಂದು ಕಾರ್ಮಿಕ ಸಚಿವರು ತಿಳಿಸಿದರು. ಇದರ ಜೊತೆಗೆ ಕಳೆದ ವರ್ಷ ಮಹಿಳೆಯರಿಗೆ ವೇತನ ಸಹಿತ ಮುಟ್ಟಿನ ರಜೆ ವಿಷಯ ಹೆಚ್ಚು ಚರ್ಚೆಯಾಗುತ್ತಿದ್ದ ಕಾರಣ ಈ ಸಭೆಯನ್ನು ಅದು ಪ್ರಸ್ತಾಪವಾಯಿತು.
ಕಾರ್ಮಿಕ ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಅವರಿಗೆ ವೇತನಸಹಿತ ಮುಟ್ಟಿನ ರಜೆಯನ್ನು ನೀಡಬೇಕೆಂದು ಸಾಕಷ್ಟು ಕಾರ್ಮಿಕ ಸಂಘಟನೆಗಳ ಒತ್ತಾಯಿಸಿದ್ದವು ಹಾಗಾಗಿ ಪ್ರತಿ ತಿಂಗಳು ವೇತನ ಸಹಿತ ಒಂದು ದಿನ ಮುಟ್ಟಿನ ರಜೆಯನ್ನು ನೀಡುವ ಬಗ್ಗೆ ಪ್ರಸ್ತಾವನೆ ಸರ್ಕಾರದ ಮುಂದೆ ಇಟ್ಟಿದ್ದೇವೆ ಎಂದರು.
ಕನಿಷ್ಠ ವೇತನವನ್ನು ಜಾರಿಗೊಳಿಸುವ ಬಗ್ಗೆ ಕಾರ್ಮಿಕರಿಗೆ ತಾತ್ಕಾಲಿಕ ಸಹಾಯ, ಪರಿಹಾರ ಮತ್ತು ಕುಂದು ಕೊರತೆಗಳ ನಿವಾರಣೆಗೆ ಟ್ರೋಲ್ ಫ್ರೀ ಆರಂಭಿಸುತ್ತಿರುವುದರ ಬಗ್ಗೆ ಚಲನಚಿತ್ರ, ಕಿರುತೆರೆ, ಚಿತ್ರಮಂದಿರಗಳಲ್ಲಿ ಕೆಲಸ ಮಾಡುವವರಿಗೆ ಸಾಮಾಜಿಕ ಭದ್ರತಾ ಕಾರ್ಯಕ್ರಮಗಳ ಜಾರಿಗೆ ತಂದು ಪ್ರತ್ಯೇಕ ಕಾನೂನು ಆರಂಭಿಸುವ ಚಿಂತನೆ ಬಗ್ಗೆ ಕೂಡ ಸಚಿವರು ಸಭೆಯಲ್ಲಿ ಮಾತನಾಡಿದರು.