ಶಕ್ತಿ ಯೋಜನೆಯ ಉಚಿತ ಬಸ್ ಪಾಸ್ ವಿತರಣೆ ಆರಂಭ, ಪಾಸ್ ಪಡೆಯುವುದು ಹೇಗೆ ನೋಡಿ.!

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ (Karnataka government Guarantee Scheme) ಪೈಕಿ ಮೊದಲನೇ ಗ್ಯಾರಂಟಿ ಯೋಜನೆಯಾಗಿ ಶಕ್ತಿ ಯೋಜನೆ (Shakthi Yojane) ಜಾರಿಯಾಗಿತ್ತು. ಜೂನ್ 11, 2023 ರಿಂದ ವಿದ್ಯಾರ್ಥಿನಿಯರು ಸೇರಿದಂತೆ ಕರ್ನಾಟಕದ ರಾಜ್ಯದ ಎಲ್ಲಾ ಮಹಿಳೆಯರು ಕೂಡ ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಕರ್ನಾಟಕದ ಗಡಿಯೊಳಗೆ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ (Free travel).

ಶಕ್ತಿ ಯೋಜನೆ ಲಾಂಚ್ ಆದ ದಿನ ಆ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ (Shakthi yojane Smartcard) ಗಳನ್ನು ಕೆಲ ಮಹಿಳೆಯರಿಗೆ ವಿತರಣೆ ಮಾಡಲಾಗಿತ್ತು. ನಂತರ ಮೂರು ತಿಂಗಳ ಒಳಗೆ ಈ ಶಕ್ತಿ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ರಾಜ್ಯದ ಎಲ್ಲಾ ಮಹಿಳೆಯರು ಪಡೆದುಕೊಳ್ಳಬೇಕು. ಶಕ್ತಿ ಸ್ಮಾರ್ಟ್ ಕಾರ್ಡ್ ಹೊಂದದ ಮಹಿಳೆಯರಿಗೆ ಮೂರು ತಿಂಗಳ ನಂತರ ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.

NIA ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ವೇತನ 1,42,400/-

ಅಲ್ಲಿಯವರೆಗೂ ರಾಜ್ಯ ಅಥವಾ ಕೇಂದ್ರ ಸರ್ಕಾರ ನೀಡಿರುವ ಯಾವುದಾದರೂ ಒಂದು ಗುರುತಿನ ಚೀಟಿಯನ್ನು ತೋರಿಸಿ ಶೂನ್ಯ ದರ ಟಿಕೆಟ್ ಪಡೆದು ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವರು ಹೇಳಿದ್ದರು. ಆ ಬಳಿಕ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆ ಸುದ್ದಿ ಇರಲಿಲ್ಲ. ಇದರಿಂದ ಮಹಿಳೆಯರು ಗೊಂದಲಕ್ಕೀಡಾಗಿದ್ದರು.

ಆದರೆ ಇತ್ತೀಚೆಗೆ ಬಂದಿರುವ ಮಾಹಿತಿ ಪ್ರಕಾರ ಶೀಘ್ರವೇ ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್ ಬದಲಾಗಿ ಪಾಸ್ ನೀಡಲು ಸರ್ಕಾರ ಮುಂದಾಗಿದೆ ಎನ್ನುವುದು ತಿಳಿದು ಬಂದಿದೆ. ಈ ಬಗ್ಗೆ ಇತ್ತೀಚಿಗೆ ನಡೆದ ಸುದ್ದಿಗೋಷ್ಠಿಯನ್ದಲ್ಲಿ ಮಾತನಾಡಿದ ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ (Transport Minister Ramalinga Reddy) ಅವರು ಇದರ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಸಾರ್ವಜನಿಕರಿಗೆ ಸಿಹಿ ಸುದ್ದಿ, ಸಹಕಾರಿ ಕೃಷಿ ಯೋಜನೆಯಿಂದ ಪ್ರತಿ ಕುಟುಂಬಕ್ಕೂ ಸಿಗಲಿದೆ 2 ಎಕರೆ ಜಮೀನು.!

ಸ್ಮಾರ್ಟ್ ಕಾರ್ಡ್ಗಳನ್ನು ಅಭಿವೃದ್ಧಿಪಡಿಸುವ ಸೆಂಟರ್ ಫಾರ್ ಈ ಆಡಳಿತ (CEG) ಅಧಿಕಾರಿಗಳೊಂದಿಗೆ ನಾವು ಈ ಕುರಿತು ಮಾತುಕತೆ ನಡೆಸಿದ್ದೆವು. ನಾವು ಮೂರು ಕೋಟಿ ಸ್ಮಾರ್ಟ್ ಕಾರ್ಡುಗಳಿಗೆ ಮನವಿ ಮಾಡಿದ್ದೆವು, ಆದರೆ CEG ಇದಕ್ಕೆ ನಿರಾಕರಣೆ ಮಾಡಿದೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸ್ಮಾರ್ಟ್ ಕಾರ್ಡ್ ಗಳನ್ನು ತಯಾರಿಸಿ ವಿತರಣೆ ಮಾಡಲು CEG ಅನುಮತಿಸದ ಕಾರಣ ಈ ಶಕ್ತಿ ಸ್ಮಾರ್ಟ್ ಕಾರ್ಡ್ ಬದಲಾಗಿ ಸಾಮಾನ್ಯ ಬಸ್ ಪಾಸ್ ಗಳನ್ನು ಹೋಲುವ ರೀತಿಯಲ್ಲಿ ಶಕ್ತಿ ಪಾಸ್ ಗಳನ್ನು ನೀಡಲು ನಿರ್ಧಾರಕ್ಕೆ ಬಂದಿದ್ದೇವೆ ಎಂದು ಸಚಿವರು ತಿಳಿಸಿದ್ದಾರೆ.

ಸದ್ಯಕ್ಕೀಗ ಸಾಮಾನ್ಯ ಬಸ್ ಪಾಸುಗಳನ್ನು ಸಾರಿಗೆ ಸಂಸ್ಥೆಗಳೇ ವಿತರಣೆ ಮಾಡುತ್ತಿವೆ. ಆದರೆ ಶಕ್ತಿ ಯೋಜನೆಯ ಪಾಸ್ ಗಳನ್ನು (Shakthi Yojane Pass) ವಿತರಣೆ ಮಾಡಲು ಸರ್ಕಾರ ಸಾರಿಗೆ ಸಂಸ್ಥೆಗೆ ಅನುಮತಿ ನೀಡಲಿದ್ದೆಯೋ ಅಥವಾ ಆನ್ಲೈನಲ್ಲಿ ಅರ್ಜಿ ಸಲ್ಲಿಸಿ ಪಡೆಯದಿಯೋ ಎನ್ನುವುದರ ಕುರಿತು ಸ್ಪಷ್ಟತೆ ಸಿಕ್ಕಿಲ್ಲ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಈ ಹಿಂದೆ ತಿಳಿಸಲಾಗಿತ್ತು.

ರೈತರಿಗೆ ಮತ್ತೊಂದು ಭಾಗ್ಯ.! ಔಷಧಿ ಸಿಂಪಡಣೆಗೆ ಡ್ರೋನ್ ವಿತರಣೆ ಆಸಕ್ತ ರೈತರು ಅರ್ಜಿ ಸಲ್ಲಿಸಿ.!

ಸರ್ಕಾರದ ಸೇವಾ ಸಿಂಧು ಪೋರ್ಟಲ್ ಅಲ್ಲಿ ಶಕ್ತಿ ಯೋಜನೆ ವಿಭಾಗದಲ್ಲಿ ಕೆಲ ದಿನಗಳ ಕಾಲ ಅಪ್ಲಿಕೇಶನ್ ಹೋಲುವ ರೀತಿ ಆಪ್ಷನ್ ಗಳು ಕಾಣುತ್ತಿದ್ದವು. ಆದರೆ ಈಗ ಸ್ಮಾರ್ಟ್ ಕಾರ್ಡ್ ವಿತರಣೆ ಸಾಧ್ಯವಿಲ್ಲ ಎನ್ನುವುದು ಖಚಿತವಾಗಿರುವುದರಿಂದ ಸರ್ಕಾರ ಮುಂದೆ ಇದಕ್ಕೆ ಯಾವ ರೀತಿ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವುದು ಎಲ್ಲರ ಕುತೂಹಲಕ್ಕೆ ಕಾರಣವಾಗುತ್ತಿದೆ. ಸರ್ಕಾರ ಈ ಬಗ್ಗೆ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡೋಣ.

Leave a Comment

%d bloggers like this: