ದೇಶದಾದ್ಯಂತ ಇರುವ ಎಲ್ಲ ನಿರುದ್ಯೋಗಿಗಳಿಗೆ ಅಥವಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಅಥವಾ ಈಗಾಗಲೇ ಉದ್ಯೋಗದಲ್ಲಿ ಇದ್ದರು ಸರ್ಕಾರಿ ಹುದ್ದೆ ಹೊಂದಬೇಕು ಎನ್ನುವ ಕನಸು ಇರುವವರಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Comiision) ವತಿಯಿಂದ ಗುಡ್ ನ್ಯೂಸ್ ಇದೆ.
SSC ಹೊಸದಾಗಿ ಅಧಿಸೂಚನೆ (SSC Recruitment notification) ಹೊರಡಿಸಿದ್ದು ಈ ಬಾರಿ ಸುಮಾರು 7,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ದುಕೊಳ್ಳುವ ಬಗ್ಗೆ ತಿಳಿಸಿದೆ. ಹಾಗಾಗಿ ಈ ಬಾರಿ ದೇಶದಾದ್ಯಂತ ಅನೇಕ ಯುವಕ ಯುವತಿಯರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ. ನೀವು ಕೂಡ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಾಗಿದ್ದರೆ ತಪ್ಪದೆ ಈ ಸದಾವಕಾಶವನ್ನು ಬಳಸಿಕೊಳ್ಳಿ.
ಜನಧನ್ ಖಾತೆ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 1.3 ಲಕ್ಷ.! ತಪ್ಪದೆ ಈ ಯೋಜನೆ ಲಾಭ ಪಡೆದುಕೊಳ್ಳಿ.!
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡು ಸಲುವಾಗಿ ಹುದ್ದೆಗಳ ಕುರಿತು ನೋಟಿಫಿಕೇಶನ್ ಇರುವ ಪ್ರಮುಖ ಅಂಶಗಳ ಬಗ್ಗೆ ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಸಿಬ್ಬಂದಿ ನೇಮಕಾತಿ ಆಯೋಗ (SSC)
ಒಟ್ಟು ಹುದ್ದೆಗಳ ಸಂಖ್ಯೆ:- 7547
ಹುದ್ದೆಗಳ ವಿವರ:-
● ಕಾನ್ಸ್ಟೇಬಲ್ ಪುರುಷ – 5056
● ಕಾನ್ಸ್ಟೇಬಲ್ ಮಹಿಳೆ – 2491
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.21,700 ರಿಂದ ರೂ.69,100 ವೇತನ ಸಿಗುತ್ತದೆ.
ರಾಜ್ಯದ ಈ 114 ತಾಲೂಕಿನ ಜನರಿಗೆ 10Kg ಪಡಿತರ ಅಕ್ಕಿ ನೀಡುವುದಾಗಿ ಮಹತ್ವದ ಘೋಷಣೆ ಮಾಡಿದ ಆಹಾರ ಸಚಿವರು.!
ಶೈಕ್ಷಣಿಕ ವಿದ್ಯಾರ್ಹತೆ:-
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕದ ಒಳಗೆ 12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಭಾರತದಲ್ಲಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪೂರ್ತಿಗೊಳಿಸಿ ಸಂಬಂಧ ಪಟ್ಟ ದಾಖಲೆಗಳನ್ನು ಹೊಂದಿರಬೇಕು.
ವಯೋಮಿತಿ:-
● ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
● ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 25 ವರ್ಷಗಳು
ವಯೋಮಿತಿ ಸಡಿಲಿಕೆ:-
● OBC ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷಗಳು
● SC / ST ಅಭ್ಯರ್ಥಿಗಳಿಗೆ 5 ವರ್ಷಗಳು.
ಅರ್ಜಿ ಶುಲ್ಕ:-
● SC / ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
● ಉಳಿದ ಅಭ್ಯರ್ಥಿಗಳಿಗೆ 100ರೂ.
ಆಯ್ಕೆ ವಿಧಾನ:-
● ಕಂಪ್ಯೂಟರ್ ಆಧಾರಿತ ಪರೀಕ್ಷೆ
● ವೈದ್ಯಕೀಯ ಪರೀಕ್ಷೆ
● ಸಂದರ್ಶನ
● ದಾಖಲೆಗಳ ಪರಿಶೀಲನೆ.
ಅರ್ಜಿ ಸಲ್ಲಿಸುವ ವಿಧಾನ:-
● ಈ ಮೇಲೆ ತಿಳಿಸಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಪೂರ್ತಿಗೊಳಿಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
● ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
● ಅರ್ಜಿ ಸಲ್ಲಿಸಲು ಮೊದಲಿಗೆ www.ssc.nic.in ವೆಬ್ ಸೈಟ್ ಗೆ ಭೇಟಿ ಕೊಡಿ
● ಸಂಬಂಧಪಟ್ಟ ಹುದ್ದೆಗಳ ಅರ್ಜಿ ಫಾರಂ ಭರ್ತಿ ಮಾಡಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
● ಅರ್ಜಿ ಶುಲ್ಕ ಪಾವತಿ ಮಾಡಿರುವ ಇ-ರಶೀದಿ ವಿವರಗಳನ್ನು ಭರ್ತಿ ಮಾಡಿ, ಈ ರಶೀದಿ ಪ್ರಿಂಟೌಟ್ ಪಡೆದುಕೊಳ್ಳಿ.
● ಅರ್ಜಿ ಸಲ್ಲಿಕೆ ಪೂರ್ತಿಯಾದ ಬಳಿಕ ಅರ್ಜಿ ಸಂಖ್ಯೆಯನ್ನು ಕೂಡ ತಪ್ಪದೆ ನೋಟ್ ಮಾಡಿ ಇಟ್ಟುಕೊಳ್ಳಿ ಅಥವಾ ಇದರ ಪ್ರಿಂಟ್ ಪಡೆದುಕೊಳ್ಳಿ.
ಇನ್ಮುಂದೆ ಬಸ್ ಗಳಲ್ಲಿ ಕಂಡಕ್ಟರ್ ಜೊತೆ ಚಿಲ್ಲರೆ ಜಗಳ ಬಂದ್ ಸರ್ಕಾರದಿಂದ ಹೊಸ ಯೋಜನೆ ಜಾರಿ.!
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 01 ಸೆಪ್ಟೆಂಬರ್, 2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30 ಸೆಪ್ಟೆಂಬರ್, 2023
ಪರೀಕ್ಷೆ ನಡೆಯುವ ದಿನಾಂಕ – ಡಿಸೆಂಬರ್ 2023.
ಬೇಕಾಗುವ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಆಧಾರ್ ಕಾರ್ಡ್.