ನ್ಯೂಸ್ ನರ್ಸಿಂಗ್ ಮಾಡಿದ್ದೀರಾ? ಸರ್ಕಾರಿ ಹುದ್ದೆ ಪಡೆಯುವ ಕನಸಿದೆಯಾ? ಸರ್ಕಾರ ನಿಮಗೊಂದು ಅವಕಾಶ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸ್ಟಾಫ್ ನರ್ಸ್ ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ ಮತ್ತು ಈ ಸಂಬಂಧವಾಗಿ ಅರ್ಜಿ ಕೂಡ ಆಹ್ವಾನ ಮಾಡಿದೆ. ಇದಕ್ಕೆ ಕೇಳಲಾಗಿರುವ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ನೀವಾಗಿದ್ದರೆ ಪ್ರಾಧಿಕಾರದಿಂದ ಏರ್ಪಡಿಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಲ್ಗೊಂಡು ನಿಮ್ಮ ಹುದ್ದೆಯನ್ನು ಸರ್ಕಾರಿ ಕ್ಷೇತ್ರದಲ್ಲಿ ನಿರ್ವಹಿಸಬಹುದು.
ಈ ಹುದ್ದೆಯನ್ನು ಗಿಟ್ಟಿಸಿಕೊಳ್ಳಲು ನಿಗದಿಪಡಿಸಿರುವ ಅರ್ಹತ ಮಾನದಂಡವೇನು ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಎಷ್ಟಿರುತ್ತದೆ? ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಶುಲ್ಕದ ಕುರಿತ ಮಾಹಿತಿ ಮತ್ತು ತಿಳಿಸಲಾಗಿರುವ ಪ್ರಮುಖ ದಿನಾಂಕಗಳ ಬಗ್ಗೆ ಪ್ರಮುಖ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆ ಹೆಸರು:- ಶುಶ್ರೂಷಾಧಿಕಾರಿ (Staff Nurse)
ಒಟ್ಟು ಹುದ್ದೆಗಳ ಸಂಖ್ಯೆ:- 100
● ಉಳಿಕೆ ಮೂಲ ವೃಂದ 92 ಹುದ್ದೆಗಳು
● ಕಲ್ಯಾಣ ಕರ್ನಾಟಕ ವೃಂದ 8 ಹುದ್ದೆಗಳು.
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.33,450 ರಿಂದ ರೂ.62,600 ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:-
● ನರ್ಸಿಂಗ್ ಕೌನ್ಸಿಲ್ ನಿಂದ ಪಡೆದ ನರ್ಸಿಂಗ್ ಪ್ರಮಾಣ ಪತ್ರ ಹೊಂದಿರಬೇಕು.
● ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಾಯಿಸಿಕೊಂಡಿರುವ ನರ್ಸ್ ಆಗಿರಬೇಕು.
ವಯೋಮಿತಿ ನಿಗದಿ:-
● ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
● ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು.
ವಯೋಮಿತಿ ಸಡಿಲಿಕೆ:-
● SC / ST ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 05 ವರ್ಷಗಳು
● 2A, 2B, 3A, 3B ಗೆ ಸೇರಿದ ಅಭ್ಯರ್ಥಿಗಳಿಗೆ 03ವರ್ಷಗಳು.
ಅರ್ಜಿ ಸಲ್ಲಿಸುವ ವಿಧಾನ:-
● ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ.
● cetonline.karnataka.gov.in ವೆಬ್ಸೈಟ್ಗೆ ಭೇಟಿ ಕೊಡಿ, ಅರ್ಜಿ ಸಲ್ಲಿಸಲು ನೀಡಲಾಗಿರುವ ಲಿಂಕ್ ಕ್ಲಿಕ್ ಮಾಡಿ ನಿಮ್ಮ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
● ಅರ್ಜಿ ಸಲ್ಲಿಸಲು ಕೇಳಲಾಗಿರುವ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
● ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ಪಾವತಿ ಮಾಡಿ ಇ-ರಶೀದಿ ಪಡೆದುಕೊಂಡಿರಬೇಕು ಮತ್ತು ಅದರ ವಿವರವನ್ನು ಕೂಡ ಭರ್ತಿ ಮಾಡಬೇಕು.
● ಅರ್ಜಿ ಸಲ್ಲಿಕೆ ಯಶಸ್ವಿಯಾದ ನಂತರ ತಪ್ಪದೇ ಅರ್ಜಿ ಸ್ವೀಕೃತಿ ಪತ್ರ ಪ್ರಿಂಟ್ ಔಟ್ ಪಡೆದುಕೊಳ್ಳಬೇಕು.
ಅರ್ಜಿ ಶುಲ್ಕ:-
● ಸಾಮಾನ್ಯ ವರ್ಗ, ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂ.750
● SC / ST ಪ್ರವರ್ಗ 1ರ ಅಭ್ಯರ್ಥಿಗಳಿಗೆ ರೂ.500
● ಗಣಕೀಕೃತ ಅಂಚೆ ಕಚೇರಿಗಳಲ್ಲಿಯೇ ಅರ್ಜಿ ಶುಲ್ಕ ಪಾವತಿ ಮಾಡಬೇಕು.
ಆಯ್ಕೆ ವಿಧಾನ:-
● ಸ್ಪರ್ಧಾತ್ಮಕ ಪರೀಕ್ಷೆ
● ಸಂದರ್ಶನ
● ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 4 ಅಕ್ಟೋಬರ, 2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 2 ನವೆಂಬರ್, 2023
● ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – 2 ನವೆಂಬರ್, 2023.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
● ಆಧಾರ್ ಕಾರ್ಡ್
● ನಿವಾಸ ದೃಢೀಕರಣ ಪತ್ರ
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ