ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕೆ ಸಾಮಾನ್ಯವಾಗಿ ವಿದ್ಯಾರ್ಥಿಗಳು ತಮ್ಮ ಗ್ರಾಮದಿಂದ ದೂರದ ಪ್ರದೇಶಗಳಲ್ಲಿ ಉಳಿದುಕೊಳ್ಳಬೇಕಾಗುತ್ತದೆ. ಇಂತಹ ಸಮಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದಾಗ ಎಲ್ಲರಿಗೂ ಪ್ರವೇಶ ಸಿಗುವುದಿಲ್ಲ.
ಅಂತಹ ಸಮಯದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ತೊಂದರೆ ಆಗಬಾರದೆಂದು ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ಕರ್ನಾಟಕ ಸರ್ಕಾರದಿಂದ (Karnataka Government) ವಿದ್ಯಾಸಿರಿ ಯೋಜನೆ (Vidyasiri Scheme) ಜಾರಿ ಮಾಡಲಾಗಿದೆ.
ಅಂಗನವಾಡಿ ಟೀಚರ್ ಹುದ್ದೆ ನೇಮಕಾತಿ.! ಮೊಬೈಲ್ ಮೂಲಕವೇ ಈ ರೀತಿ ಅರ್ಜಿ ಸಲ್ಲಿಸಿ.!
ಈ ಯೋಜನೆ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ. 1,500ರಂತೆ ಆ ವಿದ್ಯಾರ್ಥಿಗಳ ಶೈಕ್ಷಣಿಕ ಅವಧಿ ಮುಗಿಯುವವರೆಗೆ 10 ತಿಂಗಳಿಗೆ ಒಟ್ಟು ರೂ.15,000 ಸಹಾಯಧನವನ್ನು ನೀಡಲಾಗುತ್ತದೆ. ಈ ಹಣವು DBT ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ.
ಅರ್ಜಿ ಸಲ್ಲಿಸಲು ಅರ್ಹತೆಗಳು:-
* ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು, ಕರ್ನಾಟಕದಲ್ಲಿ ಕನಿಷ್ಠ 7 ವರ್ಷಗಳಿಂದ ವಿದ್ಯಾಭ್ಯಾಸ ಮಾಡುತ್ತಿರಬೇಕು
* ವಿದ್ಯಾರ್ಥಿಯು ಹಿಂದುಳಿದ ವರ್ಗದ ವರ್ಗಕ್ಕೆ ಸೇರಿದವರಾಗಿರಬೇಕು (SC/ST, OBC, EBC)
* 2A, 3A, ಮತ್ತು 3B ವರ್ಗಗಳ ವಿದ್ಯಾರ್ಥಿಯ ವಾರ್ಷಿಕ ಕುಟುಂಬದ ಆದಾಯವು ಎಲ್ಲಾ ಮೂಲಗಳಿಂದ ರೂ.1,00,000 ಮೀರಬಾರದು ಮತ್ತು ಪ್ರವರ್ಗ-1 ರ ವಿದ್ಯಾರ್ಥಿಗಳ ಕುಟುಂಬದ ಆದಾಯವು ಎಲ್ಲಾ ಮೂಲಗಳಿಂದ ರೂ.2.50 ಲಕ್ಷ ಮೀರಬಾರದು.
* ಕಾಲೇಜಿನಲ್ಲಿ ಕನಿಷ್ಠ 75% ಹಾಜರಾತಿಯನ್ನು ಹೊಂದಿರಬೇಕು.
* ಕರ್ನಾಟಕದ ವಿಶ್ವವಿದ್ಯಾಲಯಗಳ ಅಧೀನಕ್ಕೆ ಒಳಪಡುವ, ಸರ್ಕಾರಿ / ಸ್ಥಳೀಯ ಸಂಸ್ಥೆ/ ಅನುದಾನಿತ
ಸಂಸ್ಥೆಗಳು / ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಸಂಸ್ಥೆಗಳಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿರುತ್ತಾರೆ.
2024 ರಲ್ಲಿ 2BHK / 3BHK ಮನೆ ಕಟ್ಟಲು ತಗಲುವ ವೆಚ್ಚ ಎಷ್ಟು ನೋಡಿ.!
* ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ್ದರೆ ಆ ವಿದ್ಯಾರ್ಥಿಗಳು ಉಚಿತವಾಗಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ-ಇವುಗಳಲ್ಲಿ ಯಾವುದಾದರೂ ಒಂದು ಸೌಲಭ್ಯಕ್ಕೆ ಮಾತ್ರ ಅರ್ಹರಿರುತ್ತಾರೆ.
* ಯಾವುದೇ ಇಲಾಖೆಯ ಸರ್ಕಾರಿ / ಸರ್ಕಾರಿ ಅನುದಾನಿತ ವಿದ್ಯಾರ್ಥಿನಿಲಯ / ವಸತಿ ಕಾಲೇಜುಗಳಲ್ಲಿ, ಪ್ರವೇಶ ದೊರೆಯದ ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳನ್ನು ದೂರ ಶಿಕ್ಷಣದ ಮೂಲಕ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಕೂಡ ವಿದ್ಯಾಸಿರಿ ಯೋಜನೆಗೆ ಅರ್ಹರಾಗಿರುತ್ತಾರೆ.
* ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದವರಾಗಿದ್ದು ವ್ಯಾಸಂಗ ಮಾಡುವ ಕಾಲೇಜಿನಿಂದ ಕನಿಷ್ಠ 5 ಕಿ.ಮೀ. ದೂರದವರಾಗಿರಬೇಕು. ವಿದ್ಯಾರ್ಥಿಯ ಸ್ವಂತ ಸ್ಥಳ, ನಗರ ಅಥವಾ ಪಟ್ಟಣ ಪ್ರದೇಶವಾಗಿದ್ದರೆ ಅವರು ಬೇರೆ ನಗರ ಅತಪ್ಪ ಪಟ್ಟಣ ಪ್ರದೇಶದಲ್ಲಿ ಇರುವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ.
ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಯ ಎಲ್ಲಾ ತಿಂಗಳ ಹಣ ಜಮೆ ಆಗಿದೆ.! ಮೊಬೈಲ್ ನಲ್ಲಿಯೇ ಹಣ ಜಮೆ ಆಗಿರುವ ವಿವರ ನೋಡಿ.!
* ಸಮಾನ ಕೋರ್ಸುಗಳಲ್ಲಿ ಒಂದಕ್ಕಿಂತ ಹೆಚ್ಚು ಬಾರಿ ವ್ಯಾಸಂಗ ಮಾಡುತ್ತಿದ್ದಲ್ಲಿ ಅಂತಹವರು ಅರ್ಹರಿರುವುದಿಲ್ಲ.( ಬಿ.ಎ ನಂತರ ಬಿ.ಕಾಂ, ಎಂ.ಎ ಕನ್ನಡ ನಂತರ ಎಂ.ಎ ಇಂಗ್ಲೀಷ್, ಬಿ.ಇಡ್ ನಂತರ ಎಲ್.ಎಲ್.ಬಿ, ಇತ್ಯಾದಿಗಳಿಗೆ ಪ್ರವೇಶ ಪಡೆದಿದ್ದಲ್ಲಿ ಅವರಿಗೆ ಯೋಜನೆ ಅನ್ವಯವಾಗುವುದಿಲ್ಲ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
* SSLC ಅಂಕಪಟ್ಟಿ
* PUC ಅಥವಾ ಪದವಿ ಸೆಮಿಸ್ಟರ್ ಅಂಕಪಟ್ಟಿ
* ಪದವಿ ಆಧಾರ್ ಕಾರ್ಡ್
* ಬ್ಯಾಂಕ್ ಖಾತೆ ವಿವರ
* ಜಾತಿ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ
* ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
* ಶಾಲಾ ಶುಲ್ಕದ ರಶೀದಿ
* ನಿವಾಸಿ ದೃಢೀಕರಣ ಪತ್ರ.
ಅರ್ಜಿ ಸಲ್ಲಿಸುವ ವಿಧಾನ:-
* ಆನ್‍ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
* SSP ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು
* ಹತ್ತಿರದ ಯಾವುದೇ CSC ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕಡೆಯ ದಿನಾಂಕ:- ಜನವರಿ 25, 2024 ಕಡೆ ದಿನಾಂಕವಾಗಿತ್ತು ಮತ್ತೊಮ್ಮೆ ಎರಡನೇ ಬಾರಿಗೆ ಅವಧಿ ವಿಸ್ತರಿಸಲಾಗಿದೆ ಹಾಗಾಗಿ ಶೀಘ್ರವೇ ಅರ್ಜಿ ಸಲ್ಲಿಸಿ.